More

    ಹಾಸ್ಟೆಲ್​​​​​ನಲ್ಲಿ ಮೊಟ್ಟೆ ತಿಂದು 8 ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

    ಹೊಸಕೋಟೆ: ತಾಲೂಕಿನ ನೆಲವಾಗಿಲು ಗ್ರಾಮದಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದಲ್ಲಿ ಸಂಜೆ ವಿದ್ಯಾರ್ಥಿಗಳು ಮೊಟ್ಟೆ ತಿಂದು ಅನಾರೋಗ್ಯಕ್ಕೆ ಒಳಗಾಗಿದ್ದಾರೆ.

    ನೆಲವಾಗಿಲಿನ ದೇವರಾಜ್ ಅರಸ್ ಹಿಂದುಳಿದ ವರ್ಗಗಳ ವಸತಿ ಶಾಲೆಯಲ್ಲಿ ಸುಮಾರು 27 ಹಿಂದುಳಿದ ವಿದ್ಯಾರ್ಥಿಗಳು ನೆಲೆಸಿದ್ದು, ಸಂಜೆ 10ನೇ ತರಗತಿಯ ಮಕ್ಕಳು ಮೊಟ್ಟೆ ತಿಂದಿದ್ದಾರೆ. ಕೂಡಲೇ ಅವರಿಗೆ ವಾಂತಿ ಹಾಗೂ ಇನ್ನಿತರ ಹೊಟ್ಟೆ ಸಮಸ್ಯೆಗೆ ತುತ್ತಾಗಿದ್ದಾರೆ. ನಂತರ ವಸತಿ ನಿಲಯದ ಸಿಬ್ಬಂದಿ ಹೊಸಕೋಟೆಯ ಸರ್ಕಾರಿ ಆಸ್ಪತ್ರೆಗೆ ಸೇರಿಸಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.

    ಈ ಬಗ್ಗೆ ದೇವರಾಜ್ ಅರಸ್ ಹಿಂದುಳಿದ ವರ್ಗಗಳ ಇಲಾಖೆಯ ತಾಲೂಕು ಅಧಿಕಾರಿ ಡಾ. ಪ್ರೀತಿ ರವರು ಮಾಧ್ಯಮದವರಿಗೆ ಹಾಗೂ ಪೊಲೀಸರಿಗೆ ಮತ್ತು ಸಂಬಂಧಿಗಳಿಗೆ ಮಾಹಿತಿ ನೀಡಲು ನಿರಾಕರಿಸಿ ಪ್ರಕರಣ ಮುಚ್ಚಿ ಹಾಕಲು ಪ್ರಯತ್ನ ನಡೆಸಿದ್ದಾರೆ ಎಂಬ ದೂರುಗಳು ಬಂದಿದ್ದು, ಈ ಬಗ್ಗೆ ಮೇಲಾಧಿಕಾರಿಗಳು ಕ್ರಮವಹಿಸಲು ಸಾರ್ವಜನಿಕ ವಲಯದಲ್ಲಿ ಒತ್ತಾಯ ಮಾಡಲಾಗಿದೆ.

    8 ಮಕ್ಕಳು ಹೊಟ್ಟೆ ಸಮಸ್ಯೆಯಿಂದ ದಾಖಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲಾ  ಮಕ್ಕಳ ಆರೋಗ್ಯ ಸ್ಥಿರವಾಗಿದ್ದು, ಚೇತರಿಕೆ ಕಂಡುಬರುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ನಿಗಾ ವಹಿಸಲಾಗಿದೆ.

    ಡಾ ಸತೀಶ್, ಆಡಳಿತಾಧಿಕಾರಿ, ಸರ್ಕಾರಿ ಸಾರ್ವಜನಿಕ ಆಸ್ಪತ್ರೆ, ಹೊಸಕೋಟೆ.  

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts