More

    ಯಾರಿಗೇ ಟಿಕೆಟ್ ನೀಡಿದರೂ ಪ್ರಾಮಾಣಿಕವಾಗಿ ಚುನಾವಣೆ ಎದುರಿಸುತ್ತೇವೆ: ಲಕ್ಷ್ಮೀ ಹೆಬ್ಬಾಳ್ಕರ್

    ಬೆಳಗಾವಿ: ಸಚಿವರಾದ ಸತೀಶ್‌ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ತಮ್ಮ ಮಕ್ಕಳನ್ನ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ತಯಾರಿ ನಡೆಸುತ್ತಿದ್ದಾರೆ ಎನ್ನಲಾಗಿದೆ. ಕ್ಷೇತ್ರದಲ್ಲಿ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಹೆಸರು ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಸರು ಕೂಡ ಮುಂಚೂಣಿಯಲ್ಲಿದೆ. ಆದರೆ ಈ ಬಗ್ಗೆ ಸತೀಶ್ ಜಾರಕಿಹೊಳಿ ಆಗಲಿ ಲಕ್ಷ್ಮೀ ಹೆಬ್ಬಾಳ್ಕರ್ ಯಾವುದೇ ಅಧಿಕೃತ ಸ್ಪಷ್ಟನೆ ನೀಡಿಲ್ಲ.

    ಇದೀಗ ಈ ಕುರಿತು ಮಾಧ್ಯಮಗಳು ಕೇಳಿರುವ ಪ್ರಶ್ನೆಗೆ ಉತ್ತರಿಸಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಪಕ್ಷದ ತೀರ್ಮಾನವೇ ಅಂತಿಮ. ಹೈಕಮಾಂಡ್ ಯಾವುದೇ ನಿರ್ಧಾರ ತೆಗೆದುಕೊಂಡರು ಅದಕ್ಕೆ ನಾನು ಬದ್ಧ ಎಂದು ತಿಳಿಸಿದ್ದಾರೆ.

    ಚುನಾವಣೆಯಲ್ಲಿ ಮೃಣಾಲ್ ಅವರಿಗೆ ಪಕ್ಷ ಟಿಕೆಟ್ ನೀಡಿದರೂ ಅಥವಾ ಬೇರೆ ಯಾರಿಗೇ ಟಿಕೆಟ್ ನೀಡಿದರೂ ಬಹಳ ಪ್ರಾಮಾಣಿಕವಾಗಿ ಚುನಾವಣೆಯನ್ನು ಎದುರಿಸುತ್ತೇವೆ. ಯಾರಿಗೆ ಟಿಕೆಟ್ ನೀಡಿದರೂ ಗೆಲ್ಲಬಹುದು ಎನ್ನುವ ಸಮೀಕ್ಷೆ ಕೂಡ ಮಾಡಲಾಗುತ್ತಿದೆ. ಅಂತಿಮವಾಗಿ ಪಕ್ಷದ ಅಭ್ಯರ್ಥಿ ಗೆಲ್ಲಬೇಕು ಅಷ್ಟೇ. ಟಿಕೆಟ್ ಪಡೆಯುವುದಕ್ಕಾಗಿಯೇ ಪೈಪೋಟಿ ನಡೆಸುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

    ತಮ್ಮ ಪುತ್ರ ಮೃಣಾಲ್ ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವುದು ಅಥವಾ ಬಿಡುವುದು ಪಕ್ಷದ ವರಿಷ್ಠರಿಗೆ ಬಿಟ್ಟ ವಿಚಾರ. ಆದರೆ ಈ ಹಿಂದೆ ನನ್ನ ತಮ್ಮ ಚನ್ನರಾಜ ಹಟ್ಟಿಹೊಳಿಯವರು ಎಂಎಲ್ಸಿ ಆಗುವ ವೇಳೆಯಲ್ಲೂ ಜಿಲ್ಲೆಯ ಮುಖಂಡರು ಹಾಗೂ ಜನರ ಒತ್ತಾಸೆ ಇತ್ತು ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

    ವಿಧಾನಸಭೆ ಚುನಾವಣೆಗಿಂತ ಮುನ್ನ ಜನರಿಗೆ ಭರವಸೆ ಕೊಟ್ಟಂತಹ 5 ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ. ನುಡಿದಂತೆ ನಡೆದ ಆತ್ಮಸ್ಥೈರ್ಯದಿಂದ ಲೋಕಸಭಾ ಚುನಾವಣೆ ಮೂಲಕ ಜನರ ಬಳಿಗೆ ಹೋಗುತ್ತಿದ್ದೇವೆ ಎಂದು ಸಚಿವರು ಹೇಳಿದರು.

    32 ವರ್ಷಗಳಿಂದ ಸಮುದ್ರದಲ್ಲಿ ತೇಲುತ್ತಿದ್ದ ಬಾಟಲಿ…ಅದರಲ್ಲಿದ್ದ ಸಂದೇಶ ಓದಿ ಭಾವುಕಾರದ ವ್ಯಕ್ತಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts