PHOTO: ರಾಜ್ಯದಲ್ಲಿ ವರುಣನ ಆರ್ಭಟ: ಉತ್ತರ ಕರ್ನಾಟಕದಲ್ಲಿ ನೆರೆ ಹಾವಳಿ, ಜಲಾವೃತಗೊಂಡ ಹೈಟೆಕ್​ ಕೋರ್ಟ್​ ಕಾಂಪ್ಲೆಕ್ಸ್​

Latest News

ಶಿಕ್ಷಣ ಸಚಿವ ಸುರೇಶ್ ಕುಮಾರ್ ವಾಸ್ತವ್ಯ ಹೂಡಿದ ಶಾಲೆಯಲ್ಲಿ ಶಿಕ್ಷಕರಿಂದ ಮಹಾ ಪ್ರಮಾದ

ಚಾಮರಾಜನಗರ: ಸಚಿವರ ಬಳಕೆಗೆಂದು ಮೀಸಲಿಟ್ಟ ಶೌಚಗೃಹವನ್ನು ಶಾಲಾ ಮಕ್ಕಳ ಕೈಯಲ್ಲಿ ಸ್ವಚ್ಛಗೊಳಿಸುವ ಮೂಲಕ ಶಾಲಾ ಶಿಕ್ಷಕರು ಪ್ರಮಾದವೆಸಗಿರುವ ಘಟನೆ ರಾಜ್ಯದ ಗಡಿಭಾಗದ ಶಾಲೆಯೊಂದರಲ್ಲಿ...

ರಾಷ್ಟ್ರ ರಕ್ಷಣೆಗೆ ಪ್ರಾಣವನ್ನೇ ಪಣಕ್ಕಿಡುವ ಧೀರ ಯೋಧರಿಗಾಗಿ “ಐರನ್​ ಮ್ಯಾನ್​” ಉಡುಪು ಅಭಿವೃದ್ಧಿಪಡಿಸಿದ ಯುವಕ!

ವಾರಾಣಸಿ: ಹಾಲಿವುಡ್​ ಐರನ್​ ಮ್ಯಾನ್​ ಚಿತ್ರದಿಂದ ಸ್ಪೂರ್ತಿಗೊಂಡು ವಾರಾಣಸಿಯ ಖಾಸಗಿ ವಿಶ್ವವಿದ್ಯಾಲಯದ ಉದ್ಯೋಗಿಯೊಬ್ಬರು "ಐರನ್​ ಮ್ಯಾನ್​" ಉಡುಪನ್ನು ಅಭಿವೃದ್ಧಿಪಡಿಸಿ ಸುದ್ದಿಯಾಗಿದ್ದಾರೆ. ಎದುರಾಳಿಯೊಂದಿಗೆ ಸೆಣಸಾಡುವ...

ಐಟಿ-ಬಿಟಿ ಅಭಿವೃದ್ಧಿಗೆ ಸರ್ಕಾರದ ಸಹಕಾರ: ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ, ಬೆಂಗಳೂರು ಟೆಕ್ ಸಮಿಟ್​ಗೆ ಅದ್ದೂರಿ ಚಾಲನೆ

ಬೆಂಗಳೂರು: ಆವಿಷ್ಕಾರ, ಸೇವಾ ಕ್ಷೇತ್ರಗಳ ಜತೆಗೆ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಕ್ಷೇತ್ರಗಳ ಅಭಿವೃದ್ಧಿಗೆ ಬೇಕಾಗುವ ಎಲ್ಲ ರೀತಿಯ ಸಹಕಾರವನ್ನು ಸರ್ಕಾರ ನೀಡಲಿದೆ....

ಬಿಐಎಸ್ ವರದಿ ಆತಂಕಕಾರಿ: ಜಲಮಂಡಳಿಗೆ ತಜ್ಞರ ಸಲಹೆ, ಗುಣಮಟ್ಟದ ನೀರಿಗೆ ನಾಗರಿಕರ ಆಗ್ರಹ

ಬೆಂಗಳೂರು: ಬೆಂಗಳೂರು ಜಲಮಂಡಳಿ ಸರಬರಾಜು ಮಾಡುತ್ತಿರುವ ಕುಡಿಯುವ ನೀರು ಶುದ್ಧವಲ್ಲ ಎಂಬುದು ಭಾರತೀಯ ಗುಣಮಟ್ಟ ಸಂಸ್ಥೆ (ಬಿಐಎಸ್) ನಡೆಸಿದ ಅಧ್ಯಯನದಲ್ಲಿ ಬಯಲಾಗಿದೆ. ಇದು...

ವೈದ್ಯರಿಂದ ಮಾತೃಹೃದಯದ ಸೇವೆ

ಬೆಳ್ತಂಗಡಿ: ವೈದ್ಯರು ಮಾನವೀಯತೆ ಹಾಗೂ ನಗುಮುಖದ ಮಾತೃ ಹೃದಯದೊಂದಿಗೆ ರೋಗಿಗಳ ಸೇವೆ ಮಾಡಬೇಕು. ರೋಗಿಗಳ ಸೇವೆಯೇ ದೇವರ ಸೇವೆಯಾಗಿದೆ ಎಂದು ಬೆಂಗಳೂರಿನ ಶ್ರೀ ಜಯದೇವ ಹೃದ್ರೋಗ...

ಬೆಂಗಳೂರು: ಉತ್ತರ ಕರ್ನಾಟಕದ ಹುಬ್ಬಳ್ಳಿ, ಧಾರವಾಡ ಮತ್ತು ಬೆಳಗಾವಿ ಸೇರಿ ಬಹುತೇಕ ಸ್ಥಳಗಳಲ್ಲಿ ವರುಣನ ಆರ್ಭಟದಿಂದ ಭಾರಿ ಅವಾಂತರ ಉಂಟಾಗಿದೆ. ತಿಮ್ಮಸಾಗರದಲ್ಲಿರುವ ರಾಜ್ಯದ ಅತಿದೊಡ್ಡ ಹಾಗೂ ಹೈಟೆಕ್​ ಕೋರ್ಟ್​ ಕಾಂಪ್ಲೆಕ್ಸ್​ ಸಂಪೂರ್ಣ ನೀರಿನಿಂದಾವೃತವಾಗಿದೆ. ವಾಹನ ನಿಲುಗಡೆ ಸ್ಥಳ ಅಕ್ಷರಶಃ ಮುಳುಗಡೆಯಾಗಿದೆ.

ಧಾರವಾಡದ ಮಾಳಾಪುರ ಬಳಿಯ ರಾಜನಗರ ಬಡಾವಣೆ ನೀರಿನಿಂದಾವೃತವಾಗಿದೆ. ಚರಂಡಿ ನೀರು ಮನೆಗಳಿಗೆ ನುಗ್ಗುತ್ತಿರುವುದರಿಂದ, ಜನರು ಪಡಬಾರದ ಪಾಡು ಪಡುತ್ತಿದ್ದಾರೆ.

ಹಾವೇರಿ ಜಿಲ್ಲೆಯಲ್ಲಿ ಮಳೆ ಮುಂದುವರಿದಿದೆ. ಬಂಕಾಪುರ, ಹಾನಗಲ್ಲ, ಮಾಸೂರ, ಶಿಕಾರಿಪುರ, ಬೆಳವಿಗಿ, ಮೇವುಂಡಿ ಗ್ರಾಮಗಳ ರಸ್ತೆ ಸಂಚಾರ ಸ್ಥಗಿತಗೊಂಡಿದೆ. ಶಿಗ್ಗಾಂವಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಒಂದು ಅಡಿ ನೀರು ಬಂದಿದೆ. ಹೀಗೆ ಮಳೆ ಮುಂದುವರಿದರೆ ಹೆದ್ದಾರಿಯಲ್ಲಿ ಒಂದು ಬದಿಯ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆಯಿದೆ.

ಶಿಗ್ಗಾಂವಿ ತಾಲೂಕು ರಾಜೀವ ಗ್ರಾಮದಲ್ಲಿ 20 ಮನೆಗಳಿಗೆ ನೀರು ನುಗ್ಗಿದೆ. ಹಾನಗಲ್ಲ ತಾಲೂಕು ಹರವಿ, ಹಾವೇರಿ ತಾಲೂಕು ಗುಯಿಲಗುಂದಿ ನಡುಗಡ್ಡೆಯಾಗಿವೆ. ವರದಾ ನದಿಯಲ್ಲಿನ ಹರಿವು ಹೆಚ್ಚುತ್ತಿದ್ದು ಮತ್ತಷ್ಟು ಗ್ರಾಮಗಳ ಸಂಪರ್ಕ ಕಡಿತಗೊಳ್ಳುವ ಆತಂಕ ವ್ಯಕ್ತವಾಗಿದೆ.

ವಿಜಯಪುರದಲ್ಲಿ ಭೀಮಾ ನದಿಯ ನೀರು ಅಕ್ಕಪಕ್ಕದ ಜಮೀನುಗಳಿಗೆ ನುಗ್ಗಿದೆ. ತೋಟಗಾರಿಕಾ ಬೆಳೆಗಳು ಜಲಾವೃತಗೊಂಡಿದ್ದು, ಹಾಳಾಗುವ ಸಾಧ್ಯತೆ ಹೆಚ್ಚಾಗಿದೆ. ಚಡಚಣ ತಾಲೂಕಿನ ಹೊಳಿಸಂಕ ಗ್ರಾಮದಲ್ಲಿ ದಾಳಿಂಬೆ ತೋಟಕ್ಕೆ ನೀರು ನುಗ್ಗಿದ್ದು, ರವಿ ಬೋರಗಿ ಎಂಬುವರ ತೋಟದಲ್ಲಿದ್ದ 1 ಸಾವಿರಕ್ಕೂ ಹೆಚ್ಚು ದಾಳಿಂಬೆ ಗಿಡಗಳು ಹಾಳಾಗುವ ಭೀತಿ ಉಂಟಾಗಿದೆ.

ಮಹಾರಾಷ್ಟ್ರದ ಉಜನಿ ಮತ್ತು ವೀರ ಅಣೆಕಟ್ಟೆಗಳಿಂದ ನೀರು ಬಿಡುಗಡೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಸುಕ್ಷೇತ್ರ ದೇವಲ್​ ಗಾಣಗಾಪುರ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಸಂಸತ್​ ಸದಸ್ಯ ಡಾ. ಉಮೇಶ್​ ಜಾಧವ್​ ಗಾಣಗಾಪುರಕ್ಕೆ ಭೇಟಿ ನೀಡಿ, ಅಲ್ಲಿನ ಪರಿಸ್ಥಿತಿ ಅವಲೋಕಿಸಿದರು. ಅಫಜಲಪುರ ಶಾಸಕ ಎಂ.ವೈ. ಪಾಟೀಲ್​ ಸಾಥ್ ನೀಡಿದರು.

ನಂತರ ಸುದ್ದಿಗಾರರ ಜತೆ ಮಾತನಾಡಿದ ಡಾ. ಉಮೇಶ್​ ಜಾಧವ್​, ನದಿಗಳಿಗೆ ಇಳಿಯದಂತೆ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರು. ನೀರಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುತ್ತಿದೆ. ಪ್ರವಾಹ ಪೀಡಿತ ಪ್ರದೇಶಗಳ ಜನರಿಗೆ ತೊಂದರೆಯಾಗದಂತೆ ಎಚ್ಚರವಹಿಸುವಂತೆ ಸಿಎಂ ಬಿ.ಎಸ್​. ಯಡಿಯೂರಪ್ಪ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಆಶ್ರಯ ಹಾಗೂ ಗಂಜಿ ಕೇಂದ್ರಗಳನ್ನು ತೆರೆಯುವಂತೆ ಸೂಚಿಸಿದ್ದಾರೆ. ಕೇಂದ್ರ ಸರ್ಕಾರ ಕೂಡ ಸಂತ್ರಸ್ತರಿಗೆ ಎಲ್ಲ ರೀತಿಯ ನೆರವು ನೀಡಲು ಸಿದ್ಧವಿದೆ ಎಂದರು.

ಬೆಳಗಾವಿಯ ಹುಕ್ಕೇರಿ ತಾಲೂಕಿನ ಸಂಕೇಶ್ವರದ ಹಲವು ಬಡಾವಣೆಗಳಿಗೆ ಹಿರಣ್ಯಕೇಶಿ ನದಿ ನೀರು ನುಗ್ಗಿದೆ. ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಜಿಲ್ಲಾಡಳಿತ ನಿರ್ಲಕ್ಷ್ಯ ತೋರಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಯುವಕರು ಟಯರ್​ ಮತ್ತು ಟ್ಯೂಬ್​ ಬಳಸಿ ತಾತ್ಕಾಲಿಕ ಬೋಟ್​ ಸಿದ್ಧಪಡಿಸಿಕೊಂಡು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುತ್ತಿದ್ದಾರೆ.

 

- Advertisement -

Stay connected

278,592FansLike
570FollowersFollow
609,000SubscribersSubscribe

ವಿಡಿಯೋ ನ್ಯೂಸ್

VIDEO: ಗೋಕಾಕ್​ ಕ್ಷೇತ್ರದಲ್ಲಿ...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...

ಕೇಂದ್ರ ಪರಿಸರ ಸಚಿವ...

ಬೆಂಗಳೂರು: ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ ನಿಯಂತ್ರಣಕ್ಕೆ ನಾನಾ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದೆ. ಆದರೂ, ವೈಯಕ್ತಿಕವಾಗಿ ಏನು ಮಾಡಬಹುದು ಎಂಬುದನ್ನು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ ಜಾವಡೇಕರ್ ತೋರಿಸಿದ್ದಾರೆ. ಅವರು...

ಜಗತ್ತಿನ ಮೊದಲ ಫೋಲ್ಡೆಬಲ್​...

ಬೀಜಿಂಗ್​: ಕಂಪ್ಯೂಟರ್ ಜಗತ್ತಿನಲ್ಲಿ ನಿತ್ಯವೂ ಹೊಸ ಹೊಸ ಉತ್ಪನ್ನಗಳು ಗ್ರಾಹಕರಿಗೆ ಪರಿಚಯಿಸಲ್ಪಡುತ್ತಲೇ ಇವೆ. ವರ್ಷದ ಹಿಂದೆ ಖರೀದಿಸಿದ ಉತ್ಪನ್ನ ಇಂದಿಗೆ ಔಟ್​ಡೇಟೆಡ್​ ಎನ್ನುವ ಮಟ್ಟಿಗೆ ಇದೆ ಈ ಬದಲಾವಣೆಯ ವೇಗ....

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...