22.5 C
Bengaluru
Sunday, January 19, 2020

ಕೇಂದ್ರದ ದಿಟ್ಟ ನಡೆ, ನಗರದಲ್ಲೂ ಹರ್ಷದ ಹೊಳೆ

Latest News

ಪಲ್ಸ್ ಪೋಲಿಯೋದಲ್ಲಿ ಶೇ.95ರಷ್ಟು ಸಾಧನೆ

ಮಂಡ್ಯ: ಜಿಲ್ಲಾದ್ಯಂತ ಭಾನುವಾರ ಜಿಲ್ಲಾ ಆರೋಗ್ಯ ಇಲಾಖೆಯಿಂದ ಮೊದಲ ದಿನವೇ 1,18663 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗಿದೆ. ಜ.19ರಿಂದ 22ರವರೆಗೆ ಪಲ್ಸ್ ಪೋಲಿಯೋ...

ಬಲೆಯಲ್ಲಿ ಸಿಲುಕಿದ್ದ ಹೆಬ್ಬಾವು ರಕ್ಷಣೆ

ಕೆ.ಎಂ.ದೊಡ್ಡಿ: ಕೆರೆಯಲ್ಲಿ ಮೀನು ಹಿಡಿಯಲು ಹಾಕಿದ್ದ ಬಲೆಯಲ್ಲಿ ಹೆಬ್ಬಾವು ಸಿಲುಕಿ ಹಾಕಿಕೊಂಡಿದ್ದ ಹಿನ್ನೆಲೆಯಲ್ಲಿ ಮದ್ದೂರಿನ ಉರಗ ಸಂರಕ್ಷಕ ಮಾ.ನ. ಪ್ರಸನ್ನಕುಮಾರ್ ಹಾವನ್ನು ರಕ್ಷಿಸಿ...

ವೇಮನ ಒಬ್ಬ ಸಮಾಜ ಸುಧಾರಕ

ವಿಜಯಪುರ : ಜೀವನವೆಂಬ ಸಂತೆಯೊಳಗಿದ್ದುಕೊಂಡೇ ಸಂತನಾಗಿ ಬೆಳೆದ ಮಹಾಯೋಗಿ ವೇಮನ ಅವರು ಒಬ್ಬ ಸಮಾಜ ಸುಧಾರಕ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹೇಳಿದರು. ನಗರದ ಕಂದಗಲ್...

ಪ್ರಾಚಾರ್ಯರ ಧೋರಣೆ ಖಂಡಿಸಿ ಪ್ರತಿಭಟನೆ

ಬಸವನಬಾಗೇವಾಡಿ: ಕಾಲೇಜಿನಲ್ಲಿ ವಿವೇಕಾನಂದರ ಜಯಂತಿ ಆಚರಣೆಗೆ ನಿರಾಕರಿಸಿದ್ದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರ ನೇತೃತ್ವದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳು ಶನಿವಾರ...

ಹೆಲ್ಮೆಟ್ ಕಡ್ಡಾಯವಾಗಿ ಧರಿಸಿ: ಜಿಲ್ಲಾಧಿಕಾರಿ ಪಾಟೀಲ ಅಭಿಮತ

ವಿಜಯಪುರ : ಸರ್ಕಾರಿ ನೌಕರರು ಮತ್ತು ಶಾಲಾ ಕಾಲೇಜುಗಳಿಗೆ ಮಕ್ಕಳನ್ನು ಬಿಡಲು ಬರುವ ಪಾಲಕರು, ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಕುರಿತಂತೆ...

ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ ವಿಧಿ 370, 35ಎ ರದ್ದುಗೊಳಿಸುವ ಪ್ರಸ್ತಾವನೆಗೆ ರಾಷ್ಟ್ರಪತಿ ಅಂಕಿತ ಹಾಕುವ ಮೂಲಕ ‘ಒಂದು ದೇಶ, ಒಂದು ಸಂವಿಧಾನ’ ಸಾಕಾರಗೊಂಡಿದೆ. ಆ ಮೂಲಕ ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಹಿಂಪಡೆಯಲಾಗಿದ್ದು, ಚುನಾವಣೆಗೂ ಮುನ್ನ ಬಿಜೆಪಿ ನೀಡಿದ್ದ ವಾಗ್ದಾನ ಈಡೇರಿಸಿದೆ. ಕಣಿವೆ ರಾಜ್ಯ ಇಡೀ ದೇಶಕ್ಕೆ ಮುಕ್ತವಾಗಿದ್ದು, ಇತರ ರಾಜ್ಯದವರು ಅಲ್ಲಿ ಶಾಶ್ವತವಾಗಿ ನೆಲೆಸಲು ಅವಕಾಶ ಸಿಕ್ಕಂತಾಗಿದೆ. ರಾಜ್ಯವನ್ನು 2 ಭಾಗವಾಗಿ ವಿಭಜಿಸಿ ಕಾಶ್ಮೀರ ಹಾಗೂ ಲಡಾಖ್ ಅನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿಸಿ, ಕೇಂದ್ರ ಸರ್ಕಾರ ತನ್ನ ಸುಪರ್ದಿಗೆ ತೆಗೆದುಕೊಂಡಿದೆ. ಈ ದಿಟ್ಟಹೆಜ್ಜೆಗೆ ವ್ಯಾಪಕ ಸ್ಪಂದನೆ ವ್ಯಕ್ತವಾಗಿದ್ದು, ಈ ಕುರಿತು ಓದುಗರು ವಿಜಯವಾಣಿಯೊಂದಿಗೆ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ಐತಿಹಾಸಿಕ ನಿರ್ಧಾರ

ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾ ಜಮ್ಮು-ಕಾಶ್ಮೀರ ಮರುವಿಂಗಡಣೆ ಮಸೂದೆ ಜಾರಿಗೆ ಮುಂದಾಗಿದ್ದು, ಐತಿಹಾಸಿಕ ನಿರ್ಧಾರ. ಈ ತೀರ್ಮಾನ ವಿಶ್ವದ ಇತರ ರಾಷ್ಟ್ರಗಳು ಭಾರತದತ್ತ ತಿರುಗಿ ನೋಡುವಂತೆ ಮಾಡಿದೆ.

| ಕೆ. ಸತ್ಯನಾರಾಯಣ

2ನೇ ಬಾರಿ ಸ್ವಾತಂತ್ರ್ಯ ಲಭಿಸಿದೆ

ಬ್ರಿಟಿಷರಿಂದ ಮೊದಲ ಬಾರಿ ಸ್ವಾತಂತ್ರ್ಯ ಪಡೆದಿದ್ದ ಭಾರತೀಯರು, ಸಂಸತ್ತಿನಲ್ಲಿ ಐತಿಹಾಸಿಕ ಮಸೂದೆ ಮಂಡನೆಯಿಂದ 2ನೇ ಬಾರಿ ಸ್ವಾತಂತ್ರ್ಯ ಪಡೆದಿದ್ದಾರೆ. ಈ ನಿರ್ಧಾರದಿಂದ ಎಲ್ಲರಿಗೂ ಸಂತೋಷವಾಗಿದೆ.

| ಕೃಷ್ಣ

ನೆನಪಿನಲ್ಲಿ ಉಳಿಯುವ ದಿನ

ಭಾರತ ಸ್ವಾತಂತ್ರ್ಯ ಗಳಿಸಿದ ದಿನ ಹೇಗೆ ಎಲ್ಲರಲ್ಲೂ ನೆನಪಿನಲ್ಲಿ ಉಳಿಯುವಂತೆ ಮಾಡಿದೆಯೋ, ಹಾಗೆ ಜಮ್ಮು ಮತ್ತು ಕಾಶ್ಮೀರಕ್ಕೆ ಇದ್ದ ವಿಶೇಷ ಸವಲತ್ತುಗಳನ್ನು ರದ್ದುಪಡಿಸಿದ ಈ ದಿನ ಬಹುಜನರ ಮನಸ್ಸಿನಲ್ಲಿ ಉಳಿಯಲಿದೆ.

| ಅಚ್ಯುತ್​ರಾವ್

ಒಳ್ಳೆಯ ನಿರ್ಧಾರ

ಕೇಂದ್ರ ಸರ್ಕಾರ ಒಳ್ಳೆಯ ನಿರ್ಧಾರ ಕೈಗೊಂಡಿದೆ. ಇದರಿಂದ ರಕ್ಷಣೆಗೆ ಮಾಡುತ್ತಿದ್ದ ವೆಚ್ಚ ತಗ್ಗಬಹುದು. ಎಲ್ಲ ರಾಜ್ಯಗಳ ರೀತಿ ಜಮ್ಮು-ಕಾಶ್ಮೀರ ಕೂಡ ಅಭಿವೃದ್ಧಿ ಹೊಂದಿ, ಅಲ್ಲಿ ಶಾಂತಿ ನೆಲೆಸಲಿದೆ. ಇದು ಸೂಕ್ಷ್ಮ ವಿಷಯವಾಗಿರುವದರಿಂದ ಮುಂದೆ ಏನಾಗಬಹುದು ಎಂಬುದನ್ನು ಈಗಲೇ ಹೇಳುವುದು ಕಷ್ಟಸಾಧ್ಯ.

| ಪಿ.ಮರಿಯಪ್ಪ

ಹೊಸ ಶಕೆ ಆರಂಭ

ಬಹಳಷ್ಟು ವರ್ಷ ಹಳೆಯದಾದ ಕಾನೂನಿನಿಂದ ಜಮ್ಮು ಮತ್ತು ಕಾಶ್ಮೀರದ ಜನ ವಿಶೇಷ ಸವಲತ್ತು ಪಡೆಯುತ್ತಿದ್ದರು. ಈಗ ಹೊಸ ಮಸೂದೆ ಮೂಲಕ ಅವುಗಳನ್ನು ರದ್ದು ಮಾಡಿ ಇಡೀ ರಾಷ್ಟ್ರಕ್ಕೆ ಅನ್ವಯವಾಗುವ ಕಾನೂನು ಜಾರಿಗೆ ತರಲಾಗಿದೆ. ಇದು ನಿಸ್ಸಂಶಯವಾಗಿಯೂ ಹೊಸ ಶಕೆಯ ಆರಂಭ. ಹೊಸ ಕಾಯ್ದೆಯಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಅಭಿವೃದ್ಧಿ ಪರ್ವವೇ ನಡೆಯಲಿದೆ.

| ರಶ್ಮಿ

ಜನರ ಆಶಯ ಈಡೇರಿದೆ

ಇಷ್ಟು ಬೇಗ ಸಂಸತ್​ನಲ್ಲಿ ಮಸೂದೆ ಮಂಡಿಸಲಾಗುತ್ತದೆ ಅಂದುಕೊಂಡಿರಲಿಲ್ಲ. ಆಶ್ಚರ್ಯ ಹಾಗೂ ಸಂತೋಷ ಎರಡೂ ಆಗಿದೆ. ಭಾರತೀಯರ ಬಹುದಿನಗಳ ಆಶಯ ಈಡೇರಿದೆ. ಪ್ರಧಾನಿ ಮೋದಿ ಹಾಗೂ ಕೇಂದ್ರ ಸಚಿವ ಅಮಿತ್ ಷಾ ಅವರಿಗೆ ಅಭಿನಂದನೆಗಳು.

| ಲಕ್ಷಿ್ಮೕನಾರಾಯಣ್

ದೇಶ ಒಂದಾಗಿದೆ

ರಾಷ್ಟ್ರದ ಎಲ್ಲ ರಾಜ್ಯಗಳು ಒಂದಾದರೆ, ಜಮ್ಮು ಮತ್ತು ಕಾಶ್ಮೀರವೇ ಒಂದಾಗಿತ್ತು. ಜನರಲ್ಲಿ ಅದು ನಮ್ಮ ದೇಶದಲ್ಲಿ ಇಲ್ಲ ಎನ್ನುವ ಭಾವನೆ ಇತ್ತು. ಜಮ್ಮು ಮತ್ತು ಕಾಶ್ಮೀರಕ್ಕೆ ಇದ್ದ ವಿಶೇಷ ಅಧಿಕಾರಿಗಳನ್ನು ರದ್ದುಪಡಿಸಿದ ಹಿನ್ನೆಲೆಯಲ್ಲಿ ಈ ದೇಶವೇ ಒಂದಾಗಿದೆ ಎನ್ನುವ ಭಾವನೆ ಇದೆ.

| ರಮೇಶ್ ಬಾಬು

ಎಂದೋ ಆಗಬೇಕಿದ್ದ ಕೆಲಸ

ಜಮ್ಮು- ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಅಧಿಕಾರಗಳನ್ನು ಹಿಂದೆಯೇ ರದ್ದು ಪಡಿಸಬೇಕಿತ್ತು. ಈ ಕುರಿತಾಗಿ ಜನಸಂಘ ಹಲವು ವರ್ಷಗಳ ಆಗಿನ ಸರ್ಕಾರಗಳ ಗಮನ ಸೆಳೆದಿತ್ತು. ಅಂತೂ ಈಗ ಸಾಧ್ಯವಾಗಿದೆ. ನಿಜವಾಗಿಯೂ ಸಂತೋಷ ಪಡಬೇಕಾದ ಮಹತ್ವದ ದಿನವಿದು.

| ಶಿವಾಜಿರಾವ್

ತ್ರಿವರ್ಣ ಧ್ವಜ ಹಾರಾಡಲಿದೆ

ಭಾರತೀಯರ 70 ವರ್ಷದ ಕನಸು ಈಗ ಈಡೇರಿದೆ. ಎಲ್ಲ ರಾಜ್ಯಗಳಂತೆ ಕಣಿವೆ ರಾಜ್ಯಕ್ಕೂ ಹೆಚ್ಚಿನ ಸೌಲಭ್ಯ ದೊರೆಯಲಿದೆ. ಜನರು ನೆಮ್ಮದಿಯಿಂದ ಇರಬಹುದು.

| ಶಿವಕುಮಾರ್

ಇಡೀ ಪ್ರಪಂಚ ತಿರುಗಿ ನೋಡುತ್ತಿದೆ

ಸಂಸತ್ತಿನಲ್ಲಿ ಕೇಂದ್ರ ಸಚಿವ ಅಮಿತ್ ಷಾ ಮಂಡಿಸಿದ ಜಮ್ಮು-ಕಾಶ್ಮೀರ ಪುನರ್​ವಿಂಗಡಣೆ ಮಸೂದೆಯನ್ನು ವಿಶ್ವದ ನಾಯಕರು ಭಾರತದತ್ತ ತಿರುಗಿ ನೋಡುವಂತೆ ಮಾಡಿದೆ. ಈ ನಿರ್ಧಾರ ರಾಷ್ಟ್ರವನ್ನು ಇತರ ರಾಷ್ಟ್ರಗಳಿಗಿಂತ 50 ವರ್ಷ ಮುಂದಕ್ಕೆ ಕೊಂಡೊಯ್ದಿದೆ.

| ರಾಮಕೃಷ್ಣಪ್ಪ ಬಸವನಗುಡಿ

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...