More

    ರಾಜ್ಯ ರಸ್ತೆ ಸಾರಿಗೆ ನೌಕರರಿಂದ ಮತ್ತೆ ಮುಷ್ಕರ; ಬೇಡಿಕೆ ಈಡೇರದ ಕಾರಣಕ್ಕೆ ನಿರ್ಧಾರ

    ಬೆಂಗಳೂರು: ರಾಜ್ಯ ಸರ್ಕಾರ ಮೂರು ತಿಂಗಳ ಗಡುವಿನೊಳಗೆ ಸಾರಿಗೆ ನೌಕರರ ಒಂಬತ್ತು ಬೇಡಿಕೆ ಈಡೇರಿಸದ ಹಿನ್ನೆಲೆಯಲ್ಲಿ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ಏಪ್ರಿಲ್ 7ರಿಂದ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಿದೆ. ಈ ಕುರಿತಂತೆ ಕೂಟವು ಮುಖ್ಯಮಂತ್ರಿ, ಸಾರಿಗೆ ಸಚಿವ, ರಸ್ತೆ ಸಾರಿಗೆಯ ನಾಲ್ಕು ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕಾರ್ಮಿಕ ಇಲಾಖೆ ಆಯುಕ್ತರಿಗೆ ಮಂಗಳವಾರ ಮುಷ್ಕರದ ನೋಟಿಸ್ ನೀಡಿದೆ. ಕಾರ್ಮಿಕ ಕಾಯ್ದೆ ನಿಯಮದ ಪ್ರಕಾರ ನೋಟಿಸ್ ನೀಡಿದ 22 ದಿನದೊಳಗೆ ರಾಜ್ಯ ಸರ್ಕಾರ ಬೇಡಿಕೆ ಈಡೇರಿಸಬೇಕು. ಇಲ್ಲವಾದರೆ, ರಾಜ್ಯದ ನಾಲ್ಕು ನಿಗಮಗಳ ಸಾರಿಗೆ ನೌಕರರು ಕರ್ತವ್ಯ ಬಹಿಷ್ಕರಿಸಿ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ.

    ಆರನೇ ವೇತನ ಆಯೋಗದ ಶಿಫಾರಸಿನ ಪ್ರಕಾರ ವೇತನ ಪರಿಷ್ಕರಣೆ ಸೇರಿ 10 ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ ಡಿಸೆಂಬರ್ 11ರಿಂದ 14ರ ವರೆಗೆ ಸಾರಿಗೆ ನೌಕರರು ಮುಷ್ಕರ ನಡೆಸಿದ್ದರು. ಆಗ ರಾಜ್ಯ ಸರ್ಕಾರ ಒಂಬತ್ತು ಬೇಡಿಕೆ ಈಡೇರಿಸುವ ಲಿಖಿತ ಭರವಸೆ ನೀಡಿತ್ತು. ಈ ವೇಳೆ ಬೇಡಿಕೆ ಈಡೇರಿಕೆಗೆ ರಾಜ್ಯ ಸರ್ಕಾರಕ್ಕೆ ಮೂರು ತಿಂಗಳ (ಮಾ.15ರ ವರೆಗೆ) ಗಡುವು ನೀಡಲಾಗಿತ್ತು. ಗಡುವು ಮುಗಿದರೂ ಸರ್ಕಾರ ಬೇಡಿಕೆ ಈಡೇರಿಸಿಲ್ಲ. ಹೀಗಾಗಿ ಮುಷ್ಕರ ನೋಟಿಸ್ ನೀಡಲಾಗಿದೆ ಎಂದು ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಅಧ್ಯಕ್ಷ ಚಂದ್ರಶೇಖರ್ ತಿಳಿಸಿದ್ದಾರೆ.

    ಸಾರಿಗೆ ನೌಕರರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸಲಾಗಿದೆ ಎಂದು ಸರ್ಕಾರ ಮಾಧ್ಯಮಗಳ ಮುಂದೆ ತಿಳಿಸುತ್ತಿದೆ. ಈ ಭರವಸೆಗಳಿಂದ ನೌಕರರಿಗೆ ಅನುಕೂಲಕ್ಕಿಂತ ಅನನುಕೂಲಗಳೇ ಹೆಚ್ಚಿವೆ. ಈ ಭರವಸೆ ಸಮಯದಲ್ಲಿ ಸಂಘಟನೆಯೊಂದಿಗೆ ಒಮ್ಮೆಯೂ ಚರ್ಚಿಸದೆ ಏಕಪಕ್ಷೀಯವಾಗಿ ನಿರ್ಧಾರ ಕೈಗೊಳ್ಳಲಾಗಿದೆ. ಸರ್ಕಾರದ ನಿರ್ಧಾರಗಳಿಗೆ ನೌಕರರ ಸಮ್ಮತಿ ಇಲ್ಲ. ಹೀಗಾಗಿ ಅನಿರ್ದಿಷ್ಟಾವಧಿ ಮುಷ್ಕರ ಅನಿವಾರ್ಯವಾಗಿದೆ ಎಂದು ಹೇಳಿದರು.

    ‘ಹಾಗೆಲ್ಲ ಮಾತಾಡ್ಬೇಡಿ, ಯಾರಾದ್ರೂ ಸಿ.ಡಿ. ಮಾಡಿ ಬಿಟ್ಟಾರು’; ಜಿಲ್ಲಾಧಿಕಾರಿಗಳ ಜತೆ ಹಳ್ಳಿಯಲ್ಲಿ ಮಲಗುತ್ತೇವೆ ಎಂದವರಿಗೆ ಕಿವಿಮಾತು

    ಗಂಡ ಮಾರ್ಕೆಟ್​ನಲ್ಲಿ ಬೇರೆ ಹೆಂಗಸಿನ ಜತೆಗಿದ್ದ; ಅದನ್ನು ಕಂಡ ಹೆಂಡತಿ ಬೀದಿರಂಪ ಮಾಡಿದ್ಲು; ಮದ್ವೆಯಾಗಿ ಒಂದೇ ವರ್ಷಕ್ಕೆ ಹೀಗೆಲ್ಲ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts