

ನವದೆಹಲಿ: ಕರೊನಾ ಸಂಕಷ್ಟದ ಸಮಯದಲ್ಲಿ ಪರೀಕ್ಷೆಗಳನ್ನು ನಡೆಸುವ ಕೇಂದ್ರ ಸರ್ಕಾರದ ನಿಲುವನ್ನು ವಿರೋಧಿಸಿ ಆರು ರಾಜ್ಯಗಳು ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿವೆ.
ಪಶ್ಚಿಮ ಬಂಗಾಳ, ಜಾರ್ಖಂಡ್, ಚತ್ತೀಸ್ಗಢ್, ಮಹಾರಾಷ್ಟ್ರ, ಪಂಜಾಬ್ ಹಾಗೂ ರಾಜಸ್ಥಾನ ಸರ್ಕಾರಗಳು ಸುಪ್ರೀಂ ಕೋರ್ಟ್ ಆಗಸ್ಟ್ 17ರಂದು ನೀಡಿರುವ ಆದೇಶವನ್ನು ಪ್ರಶ್ನಿಸಿವೆ.
ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕೆ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ (ನೀಟ್) ಸೆ.16ರಮದು ನಿಗದಿಯಾಗಿದೆ. ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕಲಿಕೆಗೆ ನಡೆಸುವ ಜೆಇಇಯನ್ನು ಸೆ. 1-6ರ ವರೆಗೆ ನಡೆಸಲಾಗುತ್ತಿದೆ.
ಆದರೆ, ಕರೊನಾ ಸಂಕಷ್ಟದ ಸಮಯದಲ್ಲಿ 28 ಲಕ್ಷ ವಿದ್ಯಾರ್ಥಿಗಳ ಭವಿಷ್ಯವನ್ನು ಅಪಾಯಕ್ಕೆ ತಳ್ಳಲು ಸಾಧ್ಯವಿಲ್ಲ. ಪರೀಕ್ಷೆಯನ್ನು ಮುಂದೂಡುವಂತೆ ರಾಜ್ಯ ಸರ್ಕಾರಗಳು ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿವೆ.
ಇದಕ್ಕೂ ಮುನ್ನ, ಪರೀಕ್ಷೆ ಮುಂದೂಡಿಕೆಗೆ ಇಂಜಿನಿಯರಿಂಗ್ ಹಾಗೂ ಮೆಡಿಕಲ್ ಕಾಲೇಜುಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ವಿದ್ಯಾರ್ಥಿಗಳ ಜೀವನದ ಒಂದು ಅಮೂಲ್ಯ ವರ್ಷವನ್ನು ಹಾಳು ಮಾಡುವುದು ಸರಿಯಲ್ಲ, ಕರೊನಾ ನಡುವೆಯೂ ಬದುಕು ಸಾಗಿಸಲೇಬೇಕಿದೆ. ಹೀಗಾಗಿ ಪರೀಕ್ಷೆ ಮುಂದೂಡುವುದಿಲ್ಲ ಎಂದು ಆದೇಶ ನೀಡಿತ್ತು.