More

    ರಾಜ್ಯಗಳು ತಮ್ಮ ಪಾಲಿನ ಹಣಕ್ಕಾಗಿ ಕೇಂದ್ರದ ಎದುರು ಕೈಕಟ್ಟಿ ನಿಲ್ಲಬೇಕೆ?; ಕೃಷ್ಣ ಬೈರೇಗೌಡ ಅಸಮಾಧಾನ

    ಬೆಂಗಳೂರು: ಕೇಂದ್ರಕ್ಕೆ ಹಣದ ಹಾಲು ಕರೆಯುವ ಎರಡನೇ ಅತಿದೊಡ್ಡ ರಾಜ್ಯ ಕರ್ನಾಟಕ. ಆದರೆ ಇದೀಗ ನಮ್ಮ ಪಾಲಿನ ನ್ಯಾಯಯುತ ಹಣಕ್ಕೂ ಕೇಂದ್ರ ಸರ್ಕಾರದ ಎದುರು ಕೈಕಟ್ಟಿ ನಿಲ್ಲುವಂತಹ ಸ್ಥಿತಿ ಎದುರಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ ಹೊರಹಾಕಿದ್ದಾರೆ.

    ತಾಜ್ ವೆಸ್ಟ್‌ಎಂಡ್ ಹೋಟೆಲ್‌ನಲ್ಲಿ ಎಂ.ಎಸ್.ರಾಮಯ್ಯ ವಿಶ್ವವಿದ್ಯಾಲಯ ಆಯೋಜಿಸಿದ್ದ ‘ಹಣಕಾಸಿನ ಫೆಡರಲಿಸಂ: ಹದಿನಾರನೇ ಹಣಕಾಸು ಆಯೋಗದ ಮುಂದಿರುವ ಸವಾಲುಗಳು’ ಎಂಬ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಮಾತನಾಡಿದರು.

    ಯುಪಿಎ ಸರ್ಕಾರದ ಅವಧಿಯಲ್ಲಿ ಜಾರಿಯಾದ 14ನೇ ಹಣಕಾಸು ಆಯೋಗದ ಮುಖ್ಯಸ್ಥರಾಗಿದ್ದ ವೈ.ಬಿ. ರೆಡ್ಡಿ ಕರ್ನಾಟದ ಆದಾಯದಲ್ಲಿ ಶೇ.42 ರಷ್ಟು ಹಿಂತಿರುಗಿಸಲು ಸೂಚಿತ್ತು. ಈ ವೇಳೆ ಕರ್ನಾಟಕಕ್ಕೆ ಶೇ.33 ರಿಂದ ಶೇ.34 ರಷ್ಟು ಹಣ ಲಭ್ಯವಾಗಿತ್ತು. ಆದರೆ 10 ವರ್ಷದ ಅವಧಿಯಲ್ಲಿ ಈ ಪ್ರಮಾಣ ಶೇ.28ಕ್ಕೆ ಇಳಿದಿದೆ ಪರಿಣಾಮ ರಾಜ್ಯ ಸಂಕಷ್ಟಕ್ಕೆ ಗುರಿಯಾಗಿದೆ ಎಂದರು.

    ಕರ್ನಾಟಕಕ್ಕೆ ನಷ್ಟದ ಪಾಲನ್ನು ತುಂಬಿಕೊಡಿ ಎಂದು ಸ್ವತಃ ಹಣಕಾಸು ಆಯೋಗವೇ ಹೇಳಿದರೂ ಕೇಂದ್ರ ಸರ್ಕಾರ ಅದನ್ನು ಕೇಳಿಸಿಕೊಳ್ಳುವ ಗೋಜಿಗೆ ಹೋಗುತ್ತಿಲ್ಲ. ಪರಿಣಾಮ ಇದೀಗ ನಮ್ಮ ತೆರಿಗೆ ಪಾಲಿನ ಹಣವನ್ನು ನಾವೇ ಪಡೆದುಕೊಳ್ಳಲು ಕೇಂದ್ರ ಸರ್ಕಾರದ ಎದುರು ಕೈಕಟ್ಟಿ ನಿಲ್ಲುವಂತಹ ಸ್ಥಿತಿ ಎದುರಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

    2019ರಲ್ಲಿ ಕೇಂದ್ರದ ಬಜೆಟ್ ಗಾತ್ರ 22 ಲಕ್ಷ ಕೋಟಿ ರೂ. ಆ ಸಂದರ್ಭದಲ್ಲಿ ತೆರಿಗೆ, ಅನುದಾನದ ಹೆಸರಿನಲ್ಲಿ ಕರ್ನಾಟಕಕ್ಕೆ 46 ಸಾವಿರ ಕೋಟಿ ರೂ. ಹಣ ನೀಡಲಾಗಿತ್ತು. 2023ರಲ್ಲಿ ಕೇಂದ್ರದ ಬಜೆಟ್ 45 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿತ್ತು. ಅಂದರೆ ಬಜೆಟ್ ಗಾತ್ರ ಶೇ.100 ರಷ್ಟು ಏರಿಕೆಯಾಗಿತ್ತು. ಆದರೆ ಕರ್ನಾಟಕಕ್ಕೆ ಸಿಕ್ಕ ಪಾಲು ಕೇವಲ 50 ಸಾವಿರ ಕೋಟಿ ರೂ. ಮಾತ್ರ. ಇದು ದೇಶದ ಹಾಗೂ ರಾಜ್ಯದ ಭವಿಷ್ಯಕ್ಕೆ ಸರಿಯಲ್ಲ ಎಂದು ಕೃಷ್ಣ ಬೈರೇಗೌಡ ವಿಷಾಧಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts