More

    ನೇಹಾ ಹತ್ಯೆ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಾಳೆ

    ಬೆಂಗಳೂರು: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ, ರಾಜ್ಯದಲ್ಲಿ ಮಹಿಳೆಯರ ಮೇಲೆ ಮಿತಿ ದೌರ್ಜನ್ಯ, ಹದಗೆಟ್ಟ ಕಾನೂನು ಸುವ್ಯವಸ್ಥೆ ಖಂಡಿಸಿ ಬೆಂಗಳೂರು ಹೊರತುಪಡಿಸಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ಸೋಮವಾರ ಪ್ರತಿಭಟನೆ ನಡೆಸಲಿದೆ.

    ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸೋಮವಾರ ಬೆಳಗ್ಗೆ ನಡೆಸಲು ಉದ್ದೇಶಿತ ಪ್ರತಿಭಟನೆಯನ್ನು ಮಾತ್ರ ಮುಂದೂಡಲಾಗಿದೆ. ಉಳಿದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

    ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸಾಮಾಜಿಕ ಜಾಲತಾಣದ ತಮ್ಮ ಖಾತೆಯಲ್ಲಿ ರಾಜ್ಯಾವ್ಯಾಪಿ ಹೋರಾಟದ ಮಾಹಿತಿ ಹಂಚಿಕೊಂಡಿದ್ದಾರೆ.

    ಚುನಾವಣೆ ಗಡಿಬಿಡಿಯಲ್ಲಿ ನಾವು ಹೆಣ್ಣು ಮಕ್ಕಳ ಮೇಲಿನ ಕ್ರೌರ್ಯ, ದೈವ ನಿಂದನೆ ಹಾಗೂ ರಾಷ್ಟ್ರ ಭಕ್ತರ ಮೇಲಿನ ಹಲ್ಲೆ ಪ್ರಕರಣಗಳನ್ನು ನಿರ್ಲಕ್ಷಿಸಿ ಕೂರಲಾಗದು. ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಅತ್ಯಂತ ಅಮಾನುಷ ಘಟನೆಯಾಗಿದೆ.

    ಇದನ್ನು ಪೊಲೀಸರು ಎಲ್ಲ ಮಗ್ಗಲುಗಳಿಂದಲೂ ತನಿಖೆ ನಡೆಸಬೇಕಾಗಿರುವುದು ಸಾರ್ವಜನಿಕರ ಆಗ್ರಹವಾಗಿದೆ. ಆದರೆ ಮುಖ್ಯಮಂತ್ರಿ, ಗೃಹ ಸಚಿವು ಹಾಗೂ ಕೆಲ ಸಚಿವರು ಘಟನೆಯ ಕುರಿತು ಲಘುವಾಗಿ ಪ್ರತಿಕ್ರಿಯಿಸಿರುವುದು ನೋಡಿದರೆ ದುಷ್ಟರು ಹಾಗೂ ಹಿಂದು ಧರ್ಮದ ಕಂಟಕರಿಗೆ ಸರ್ಕಾರದ ಕೃಪಾಪೋಷಣೆಯ ಉದಾರತೆ ತೋರುತ್ತಿರುವುದು ಸ್ಪಷ್ಟವಾಗಿದೆ. ಅಲ್ಪಸಂಖ್ಯಾತರ ಓಲೈಕೆಯೇ ಈ ಸರ್ಕಾರದ ಆದ್ಯತೆಯಾಗಿದೆ ಎಂದು ಟೀಕಿಸಿದ್ದಾರೆ.

    ಬಿಜೆಪಿ ಸಿದ್ಧಾಂತಕ್ಕಾಗಿ ಜನ್ಮ ತಾಳಿದ ಪಕ್ಷ. ನಮ್ಮ ಆದ್ಯತೆ ಏನಿದ್ದರೂ ‘ಧ್ಯೇಯ’ಕ್ಕೆ ಹೊರತು ಅಧಿಕಾರಕ್ಕಲ್ಲ, ಚುನಾವಣಾ ಕಾರ್ಯವನ್ನು ಬದಿಗಿರಿಸಿ ಸೋಮವಾರ (22) ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಬೀದಿಗಿಳಿದು ಹೋರಾಟ ನಡೆಸಬೇಕು ಎಂದು ಬಿ.ವೈ.ವಿಜಯೇಂದ್ರ ಕರೆ ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts