More

    ರಾಜ್ಯದಲ್ಲಿ ಇನ್ನೂ 4 ದಿನ ಮಳೆ; ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್..

    ಬೆಂಗಳೂರು: ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಏಕಕಾಲದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮುಂದಿನ 4 ದಿನ ಮುಂದುವರಿಯಲಿದೆ. ಬುಧವಾರವೂ ವಿವಿಧ ಭಾಗಗಳಲ್ಲಿ ಮಳೆ ಸುರಿದಿದೆ.

    ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನದಲ್ಲಿ ಏ.21ರಿಂದ ಏ.24ರ ವರೆಗೆ, ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರಕನ್ನಡದಲ್ಲಿ ಏ.22ರಿಂದ ಏ.24ರವರೆಗೆ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ ಮತ್ತು ಧಾರವಾಡದಲ್ಲಿ ಮುಂದಿನ 72 ಗಂಟೆ ಯೆಲ್ಲೋ ಅಲರ್ಟ್ ಇರಲಿದೆ. ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ ಬೀಳಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

    ಕಳೆದ 7 ದಿನಗಳಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಹೆಚ್ಚು ಮಳೆ ಸುರಿದಿದ್ದು, ಏ.14ರಿಂದ ಏ.20ರವರೆಗೆ ವಾಡಿಕೆಯಂತೆ 8 ಮಿಮೀ ಮಳೆ ಬದಲಾಗಿ 28 ಮಿಮೀ ಸುರಿದಿದ್ದು, ಶೇ.243 ಹೆಚ್ಚು ಮಳೆಯಾಗಿದೆ. ದಕ್ಷಿಣ ಒಳನಾಡು, ಮಲೆನಾಡು. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಉತ್ತಮ ವರ್ಷಧಾರೆಯಾಗಿದೆ.

    ಇಪ್ಪತ್ತರ ಯುವತಿಯ ಹುಡುಕಾಟದಲ್ಲಿ ‘ರಾಮಾ ರಾಮಾ ರೇ’ ಸತ್ಯ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts