ಮೈಸೂರು: ತಮಿಳುನಾಡಿಗೆ ನೀರು ಹರಿಸಬೇಕೆಂಬ ಸುಪ್ರೀಂಕೋರ್ಟ್ ಆದೇಶದ ಬೆನ್ನಲ್ಲೇ ಇಂದು ಕೂಡ 5000 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡಲಾಗಿದೆ.
ಕೆಆರ್ಎಸ್ ಡ್ಯಾಂನಿಂದ 3 ಸಾವಿರ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ. ಸೀಪೇಜ್ ಹಾಗೂ ನಾಲೆಗೆ ಹರಿಸಿರುವ ನೀರಿನಲ್ಲಿ 3 ಸಾವಿರ ಕ್ಯೂಸೆಕ್ ನೀರಿದ್ದು, ಉಳಿದ 2 ಸಾವಿರ ಕ್ಯೂಸೆಕ್ ನೀರನ್ನು ಕಬಿನಿ ಜಲಾಶಯದಿಂದ ಹರಿಸಲಾಗಿದೆ. ತಮಿಳುನಾಡಿಗೆ ಒಟ್ಟು 5734 ಕ್ಯೂಸೆಕ್ ನೀರನ್ನು ಬಿಡಲಾಗಿದೆ.
ಸದ್ಯ ಕೆಆರ್ಎಸ್ ಡ್ಯಾಂನಲ್ಲಿ ನೀರಿನ ಮಟ್ಟ 97.02 ಅಡಿಗೆ ಕುಸಿತವಾಗಿದೆ. ಡ್ಯಾಂನಲ್ಲಿ ಸಂಗ್ರಹ ಸದ್ಯ 20.563 ಟಿಎಂಸಿ ನೀರಿದೆ. 20 ಟಿಎಂಸಿ ನೀರಿನಲ್ಲಿ 5 ಟಿಎಂಸಿ ಡೆಡ್ ಸ್ಟೋರೇಜ್ ಆಗಿದೆ. ಬಳಕೆಗೆ ಉಳಿದಿರೋದು ಕೇವಲ 15 ಟಿಎಂಸಿ ನೀರು ಮಾತ್ರ. ತಮಿಳುನಾಡಿಗೆ ಮತ್ತಷ್ಟು ನೀರನ್ನು ಹರಿಸಿದರೆ ಈ ಬಾರಿ ಬೆಂಗಳೂರಿಗೆ ನೀರಿನ ಹಾಹಾಕಾರ ಕಾಡುವುದರಲ್ಲಿ ಯಾವುದೇ ಸಂಶಯವಿಲ್ಲ.
ಹೆಚ್ಚಾದ ಕಾವೇರಿ ಕಿಚ್ಚು
ತಮಿಳುನಾಡಿಗೆ ಕಾವೇರಿ ನೀರು ಹರಿಯುತ್ತಿದ್ದಂತೆ ಕಾವೇರಿ ಹೋರಾಟದ ಕಿಚ್ಚು ಸಹ ಜೋರಾಗಿದೆ. ಮಂಡ್ಯ ಸೇರಿದಂತೆ ರಾಜ್ಯಾದ್ಯಂತ ಕನ್ನಡ ರಕ್ಷಣ ವೇದಿಕೆ ಹಾಗೂ ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ರಾಜ್ಯ ಸರ್ಕಾರ ಹಾಗೂ ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರದ ವಿರುದ್ಧ ಆಕ್ರೋಶ ಹೊರಹಾಕಿವೆ. ಕಾವೇರಿ ಹೋರಾಟಕ್ಕೆ ಕನ್ನಡ ಸಾಹಿತ್ಯ ಪರಿಷತ್, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ನಟ ಅಭಿಷೇಕ್ ಅಂಬರೀಷ್ ಸೇರಿದಂತೆ ಅನೇಕರು ಬೆಂಬಲ ಸೂಚಿಸಿದ್ದಾರೆ.
ಇದನ್ನೂ ಓದಿ: ಅನೈತಿಕ ಸಂಬಂಧಕ್ಕೆ ಲೇಡಿ ಪೊಲೀಸ್ ಬಲಿ: ತಾಯಿಯ ತಪ್ಪಿಗೆ ಏನೂ ಅರಿಯದ ಇಬ್ಬರು ಕಂದಮ್ಮಗಳೂ ಸಾವು
ಹೋರಾಟಗಾರರ ಬಂಧನ
ಬೆಂಗಳೂರಿಗೆ ನೀರು ಸರಬರಾಜು ಮಾಡುವ ಪಂಪ್ಹೌಸ್ಗೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಕಾವೇರಿ ವಿಚಾರದಲ್ಲಿ ಬೆಂಗಳೂರಿಗರೂ ದಿವ್ಯ ಮೌನ ವಹಿಸಿರುವುದಕ್ಕೆ ಆಕ್ರೋಶ ಹೊರಹಾಕಿದರು. ಬೆಂಗಳೂರಿಗರು ಕುಡಿಯುವ ನೀರಿಗೆ ಕಾವೇರಿಯನ್ನೇ ಆಶ್ರಯಿಸಿದ್ದಾರೆ. ಆದರೆ, ಪ್ರಸ್ತುತ ಉಂಟಾಗಿರುವ ಬಿಕ್ಕಟ್ಟಿನ ಬಗ್ಗೆ ಧ್ವನಿ ಎತ್ತುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದರು. ಪಂಪ್ಹೌಸ್ಗೆ ಮುತ್ತಿಗೆ ಹಾಕಿ ನೀರು ಹರಿಸುವುದನ್ನು ತಡೆಯಲು ಯತ್ನಿಸಿದ ಹೋರಾಗಾರರನ್ನು ಪೊಲೀಸರು ಇದೇ ಸಂದರ್ಭದಲ್ಲಿ ಬಂಧಿಸಿದರು.
ರೈತರ ಪರವಾಗಿ ಶ್ರೀಮಠ ಯಾವಾಗಲೂ ಇರುತ್ತೆ
ಮಂಡ್ಯದಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿ, ಹಲವಾರು ದಶಕಗಳಿಂದ ಕಾವೇರಿ ಸಮಸ್ಯೆ ಹಾಗೇ ಉಳಿದಿದೆ. ಆದ್ಯತೆ ಮೇರೆಗೆ ಕುಡಿಯುವ ನೀರು ಕೊಡಬೇಕು. ಆನಂತರ ವ್ಯವಸಾಯಕ್ಕೆ, ಬಳಿಕ ಕೈಗಾರಿಕಾ ಮತ್ತು ಇತರೆ ಬಳಕೆಗೆ ನೀಡಬೇಕು. ತಮಿಳುನಾಡಿಗೆ 419TMC ನೀರು ಪ್ರತಿವರ್ಷ ಹಾಗೂ ಕರ್ನಾಟಕಕ್ಕೆ ಪ್ರತಿವರ್ಷ 270TMC ನಿಗದಿ ಮಾಡಲಾಗಿದೆ. ಆದರೆ ಮಳೆ ಕಡಿಮೆ ಆದ ಸಂಧರ್ಭದಲ್ಲಿ ಸಂಕಷ್ಟ ಸೂತ್ರ ರಚಿಸಬೇಕಿತ್ತು. ಈ ಭಾಗದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಇದೆ. ಡ್ಯಾಂನಲ್ಲಿ ನೀರಿನ ಸಂಗ್ರಹ ತುಂಬಾ ಕಡಿಮೆ ಇದೆ. ಬೆಳೆ ಒಣಗುವುದು ಒಂದೆಡೆ ಆದರೆ ಮನುಷ್ಯನೇ ಒಣಗಿ ಹೋಗ್ತಾನೆ. ಮನುಷ್ಯನ ಅಸ್ಥಿತ್ವವೇ ಈಗ ಪ್ರಶ್ನೆ ಆಗಿದೆ. ನ್ಯಾಯಾಧೀಶರು ಆದೇಶ ನೀಡುವ ಮುನ್ನ ನಮ್ಮ ನೋವನ್ನು ಕೇಳಬೇಕಿತ್ತು. ಪ್ರತಿದಿನ 5 ಸಾವಿರ ಕ್ಯೂಸೆಕ್ ಹರಿಸಲಾಗಿದೆ. ಈಗ ಮತ್ತೆ 5 ಸಾವಿರ ಕ್ಯೂಸೆಕ್ ನೀರನ್ನು 15 ದಿನ ಹರಿಸಲು ಸೂಚನೆ ನೀಡಿದ್ದಾರೆ. ಆದೇಶದಂತೆ ನೀರು ಹರಿದರೆ ಡ್ಯಾಂನಲ್ಲಿ ನೀರು ಉಳಿಯುವುದಿಲ್ಲ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ನ್ಯಾಯಾಲಯದಲ್ಲಿ ಸರಿಯಾಗಿ ಮನವರಿಕೆ ಮಾಡಬೇಕು. ನಮ್ಮ ರೈತರ ಹಿತ ಕಾಯಬೇಕು. ಈಗಿನ ಆದೇಶ ಪಾಲನೆ ಮಾಡಬೇಕು, ಪಾಲನೆ ಮಾಡಿದ್ರೆ ರೈತರ ಬದುಕು ಬೀದಿಗೆ ಬರಲಿದೆ. ಸದ್ಯ ಸಂಕಷ್ಟದ ಪರಿಸ್ಥಿತಿ ಎದುರಾಗಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ಮಂತ್ರಿಗಳ ಜೊತೆ ನಾನು ಮಾತಮಾಡ್ತೀನಿ. ಸಂಕಷ್ಟ ಸೂತ್ರಕ್ಕಾಗಿ ಒತ್ತಾಯಿಸುತ್ತೇನೆ. ಮೇಕೆದಾಟು ಯೋಜನೆ ಜಾರಿ ಮಾಡಬೇಕು. ಮಳೆ ಬಿದ್ದಾಗ ಹೆಚ್ಚುವರಿ ಸಂಗ್ರಹಿಸಿದ್ರೆ ಇಂತಹ ಕಷ್ಟ ಕಾಲದಲ್ಲಿ ಹರಿಸಬಹುದು. ಎರಡು ರಾಜ್ಯಗಳಿಗೂ ಮೇಕೆದಾಟು ಯೋಜನೆ ಸಹಕಾರಿಯಾಗಲಿದೆ ನಮ್ಮ ರೈತರು ಸುಖಾಸಮ್ಮನೆ ರಸ್ತೆಗೆ ಬರಲ್ಲ. ಬೀದಿಗೆ ಇಳಿದಿದ್ದಾನೆ ಎಂದರೆ ಆತನಿಗೆ ಕಷ್ಟ ಇದೆ ಎಂದರ್ಥ. ಇವತ್ತಿನ ಕ್ಯಾಬಿನೆಟ್ ರೈತರ ಪರ ನಿರ್ಧಾರವಾಗಲಿ. ರೈತರ ಪರವಾಗಿ ಶ್ರೀ ಮಠ ಯಾವಾಗಲೂ ಇರುತ್ತದೆ. ನಮ್ಮನ್ನ ಯಾರು ಕರೆಯದೆ ಇದ್ರು ಬಂದಿದ್ದೇವೆ, ಇದು ನಮ್ಮ ಕರ್ತವ್ಯ ಎಂದು ಹೇಳಿದರು.
ಮಹಿಳಾ ಪೊಲೀಸ್ ಮೇಲೆ ದಾಳಿ ಮಾಡಿದ್ದ ವ್ಯಕ್ತಿ ಎನ್ಕೌಂಟರ್ನಲ್ಲಿ ಬಲಿ!
ಅಳಿವಿನಂಚಿನಲ್ಲಿ ಶವದ ಹೂವು ಖ್ಯಾತಿಯ ‘ರಾಫ್ಲೇಷಿಯಾ’, ಕಾರಣ ತಿಳಿಸಿದ ವಿಜ್ಞಾನಿಗಳು…