More

  ಡಿ.9ಕ್ಕೆ ರಾಜ್ಯಾದ್ಯಂತ ರಾಷ್ಟ್ರೀಯ ಲೋಕ್ ಅದಾಲತ್

  ಬೆಂಗಳೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಮುಂಬರುವ ಡಿ.9ರಂದು ರಾಜ್ಯಾದ್ಯಂತ ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ.

  ಈ ಲೋಕ್ ಅದಾಲತ್‌ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿಯಿರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸಿದಲ್ಲಿ ಮುಂಚಿತವಾಗಿ ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲ್ಲೂಕು ಕಾನೂನು ಸೇವೆ ಸಮಿತಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು.

  ನ್ಯಾಯಾಲಯದಲ್ಲಿ ಬಾಕಿಯಿರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಪ್ರಕರಣ ನಡೆಯುತ್ತಿರುವ ನ್ಯಾಯಾಲಯಕ್ಕೆ ಪ್ರಕರಣ ರಾಜೀ ಮಾಡಿಕೊಳ್ಳುವ ಕುರಿತು ತಿಳಿಸುವ ಮೂಲಕ ಅಥವಾ ಅರ್ಜಿ ಸಲ್ಲಿಸಿ ಪ್ರಕರಣ ಇತ್ಯರ್ಥಪಡಿಸಿಕೊಳ್ಳಲು ಕೋರಲಾಗಿದೆ.

  ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ನ್ಯಾಯ ದೇಗುಲ, ಮೊದಲನೇ ಮಹಡಿ, ಎಚ್.ಸಿದ್ಧಯ್ಯ ರಸ್ತೆ, ಬೆಂಗಳೂರು, ಅಥವಾ ಟೋಲ್ ಫ್ರಿ ಸಂಖ್ಯೆ: 1800-425-90900, ದೂ: 080-22111875 / 22111730 ಸಂಪರ್ಕಿಸಬಹುದು ಎಂದು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಶಂಕರ್ ಅವರು ತಿಳಿಸಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts