More

  16ಕ್ಕೆ ರೈತಸಂಘದಿಂದ ರಾಜ್ಯಾದ್ಯಂತ ಪ್ರತಿಭಟನೆ

  ಶಿವಮೊಗ್ಗ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ, ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಸಂಯುಕ್ತ ಕಿಸಾನ್ ಮೋರ್ಚಾ, ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯು ರಾಜ್ಯಾದ್ಯಂತ ಫೆ.16ರಂದು ಪ್ರತಿಭಟನೆಗೆ ಕರೆ ಕೊಟ್ಟಿದೆ ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಅಧ್ಯಕ್ಷ ಎಚ್.ಆರ್.ಬಸವರಾಜಪ್ಪ ತಿಳಿಸಿದರು.

  ರಾಷ್ಟ್ರೀಯ ಬ್ಯಾಂಕ್‌ಗಳ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವುದು, ದೆಹಲಿ ರೈತ ಹೋರಾಟದ ಲಿಖಿತ ಭರವಸೆಗಳ ಈಡೇರಿಕೆ ಒಳಗೊಂಡಂತೆ ನಾನಾ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹೋರಾಟ ಮಾಡಲಾಗುತ್ತಿದೆ. ಅಂದು ಬೆಳಗ್ಗೆ 11ಕ್ಕೆ ಶಿವಮೊಗ್ಗ ಡಿಸಿ ಕಚೇರಿ ಎದುರು ರೈತ ಸಂಘದಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
  ರಾಜ್ಯದ ಭೀಕರ ಬರಗಾಲವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ ತಕ್ಷಣವೇ ಪರಿಹಾರ ಕೊಡುವುದು, ರಾಜ್ಯ ಸರ್ಕಾರ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದು, ಎಕರೆಗೆ 20 ಸಾವಿರ ರೂ. ಬರ ಪರಿಹಾರ ನೀಡುವುದು, ಸಹಕಾರ ಸಂಸ್ಥೆಗಳ ಸಂಪೂರ್ಣ ಸಾಲಮನ್ನಾ, ಕಾರ್ಮಿಕ ವಿರೋಧಿ ನೀತಿ ಕೈಬಿಡುವಂತೆ ಒತ್ತಾಯಿಸಿದರು.
  ದೆಹಲಿ ಹೋರಾಟದ ಸಂದರ್ಭದಲ್ಲಿ ಉಳಿದ ಹಕ್ಕೊತ್ತಾಯಗಳಾದ ಕನಿಷ್ಠ ಬೆಂಬಲ ಬೆಲೆ ಜಾರಿ, ವಿದ್ಯುತ್ ರಂಗದ ಸಂಪೂರ್ಣ ಖಾಸಗೀಕರಣ ವಿದ್ಯುತ್ ತಿದ್ದುಪಡಿ ಮಸೂದೆ ರದ್ದುಪಡಿಸುವುದು. ದೆಹಲಿಯಲ್ಲಿ ರೈತರ ಮೇಲೆ ಹಾಕಿದ್ದ ಕೇಸ್‌ಗಳನ್ನು ಹಿಂಪಡೆಯುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು. ವಿದ್ಯುತ್ಛಕ್ತಿ ಖಾಸಗೀಕರಣ ಮಾಡುವುದಿಲ್ಲವೆಂದು ವಿಧಾನಸಭೆಯಲ್ಲಿ ನಿರ್ಣಯ ಮಾಡಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿ ಕೊಡಬೇಕೆಂದು ಒತ್ತಾಯಿಸಿದರು.
  ರಾಜ್ಯ ಉಪಾಧ್ಯಕ್ಷರಾದ ಟಿ.ಎಂ.ಚಂದ್ರಪ್ಪ, ಹಿಟ್ಟೂರು ರಾಜು, ಜಿಲ್ಲಾ ಕಾರ್ಯಾಧ್ಯಕ್ಷರಾದ ಪಿ.ಡಿ.ಮಂಜಪ್ಪ, ಕೆ.ರಾಘವೇಂದ್ರ, ತಾಲೂಕು ಅಧ್ಯಕ್ಷ ಸಿ.ಚಂದ್ರಪ್ಪ, ಗ್ರಾಮಾಂತರ ಅಧ್ಯಕ್ಷ ಕಸೆಟ್ಟಿ ರುದ್ರೇಶ್, ಹಸಿರು ಸೇನೆ ಜಿಲ್ಲಾ ಸಂಚಾಲಕ ಎಂ.ಡಿ.ನಾಗರಾಜ, ಎಚ್.ಇ.ಗುರುಶಾಂತಪ್ಪ ಇದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts