More

    ಬೀಡಿ- ಸಿಗರೇಟ್, ತಂಬಾಕು ಸೇವನೆಯಿಂದ ದೂರವಿರಿ

    ಎಚ್.ಡಿ.ಕೋಟೆ: ಮನುಷ್ಯನ ಬಾಯಿ ಮಾನವನ ದೈಹಿಕ ಆರೋಗ್ಯಕ್ಕೆ ಕನ್ನಡಿ ಇದ್ದ ಹಾಗೆ ಎಂದು ಸಾರ್ವಜನಿಕ ಆಸ್ಪತ್ರೆಯ ದಂತ ತಜ್ಞ ಡಾ.ಸಮೀವುಲ್ಲ ಶರೀಫ್ ಅಭಿಪ್ರಾಯಪಟ್ಟರು.

    ತಾಲೂಕು ಆರೋಗ್ಯಾಧಿಕಾರಿ ಕಚೇರಿ ಮತ್ತು ಸಾರ್ವಜನಿಕ ಆಸ್ಪತ್ರೆ ವತಿಯಿಂದ ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ವಿಶ್ವ ಬಾಯಿ ಆರೋಗ್ಯ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ಅನೇಕ ರೋಗಲಕ್ಷಣಗಳು ಮೊದಲಿಗೆ ಬಾಯಲ್ಲಿ ಕಾಣಿಸಿಕೊಳ್ಳುತ್ತವೆ. ಒಬ್ಬ ವ್ಯಕ್ತಿಯ ಬಾಯಿಯನ್ನು ಪರೀಕ್ಷಿಸಿ ಆತ ಎಷ್ಟು ಆರೋಗ್ಯಕರವಾಗಿದ್ದಾನೆಂದು ಗುರುತಿಸಬಹುದು ಎಂದರು.

    ನಾವು ಸೇವಿಸುವ ಆಹಾರ ಎಷ್ಟೇ ಶುಚಿ ಅಥವಾ ಪೌಷ್ಟಿಕಾಂಶದಿಂದ ಕೂಡಿದ್ದರೂ ನಮ್ಮ ಬಾಯಿ ಆರೋಗ್ಯಕರವಾಗಿಲ್ಲದಿದ್ದರೆ ಅಲ್ಲಿನ ಕ್ರಿಮಿಕೀಟಗಳೊಂದಿಗೆ ಆಹಾರ ನಮ್ಮ ದೇಹ ಸೇರುತ್ತದೆ. ನಿತ್ಯ ಎರಡು ಬಾರಿ ಹಲ್ಲನ್ನು ಸ್ವಚ್ಛಗೊಳಿಸಬೇಕು. ಜತೆಗೆ ಬೀಡಿ, ಸಿಗರೇಟ್, ತಂಬಾಕು, ಸೇವನೆಯಿಂದ ದೂರವಿರಬೇಕು ಎಂದು ಸಲಹೆ ನೀಡಿದರು.

    ಮಾ.20ರಂದು ವಿಶ್ವ ಬಾಯಿ ಆರೋಗ್ಯ ದಿನ ಆಚರಿಸಲಾಗುತ್ತದೆ. ಇದರ ಮುಖ್ಯ ಉದ್ದೇಶ ಜನರಿಗೆ ಬಾಯಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಅದರ ಮಹತ್ವವನ್ನು ತಿಳಿಸಿಕೊಡುವುದು ಎಂದರು.

    ತಾಲೂಕು ನೋಡಲ್ ಅಧಿಕಾರಿ ಡಾ.ಮಹದೇವ್‌ಪ್ರಸಾದ್, ತಾಲೂಕು ಆರೋಗ್ಯಾಧಿಕಾರಿ ಡಾ.ರವಿಕುಮಾರ್, ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಸೋಮಣ್ಣ, ಕಿವಿ ಮತ್ತು ಮೂಗು ತಜ್ಞ ಡಾ.ದಿನಕರ್, ಸಾರ್ವಜನಿಕ ಆಸ್ಪತ್ರೆಯ ಶುಶ್ರೂಷಕ ಮೇಲ್ವಿಚಾರಕಿ ಪರಿಮಳಾ, ಹಿರಿಯ ಆರೋಗ್ಯ ಸುರಕ್ಷಣಾಧಿಕಾರಿ ಸರಳಾ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಟಿ. ರವಿರಾಜ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts