More

    ಕ್ರಿಯಾಶೀಲರಾಗಿದ್ದರೆ ರೋಗ ರುಜೀನಗಳಿಂದ ದೂರ

    ರಾಯಚೂರು: ನಮ್ಮನ್ನು ನಾವು ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವುದರ ಜತೆಗೆ ಸದಾ ಕ್ರಿಯಾಶೀಲರಾಗಿ ಕೆಲಸ ಮಾಡುತ್ತಿದ್ದರೆ ರೋಗ ರುಜೀನಗಳು ನಮ್ಮ ಹತ್ತಿರ ಸುಳಿಯುವುದಿಲ್ಲ ಎಂದು ಬಳ್ಳಾರಿಯ ಇತಿಹಾಸ ಸಂಶೋಧಕ ಟಿ.ಎಚ್.ಎಂ.ಬಸವರಾಜ ಹೇಳಿದರು.
    ಸ್ಥಳೀಯ ವೀರಶೈವ ಮಹಾಂತೇಶ ಕಲ್ಯಾಣ ಮಂಟಪದಲ್ಲಿ ಬೆಳಕು ಸಾಹಿತ್ತಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್‌ನಿಂದ ಭಾನುವಾರ ಏರ್ಪಡಿಸಿದ್ದ ರಾಜ್ಯ ಮಟ್ಟದ ಬೆಳಕು ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಮ್ಮ ಆಸಕ್ತಿದಾಯಕ ಕ್ಷೇತ್ರದಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕು ಎಂದರು.
    ಪ್ರಸ್ತುತ ದಿನಾಮಾನದಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ರಾಜಕೀಯ ಹೆಚ್ಚಾಗುತ್ತಿದೆ. ಇದರಿಂದಾಗಿ ನಾವು ಸಾಹಿತ್ಯದಿಂದ ವಿಮುಖರಾಗುತ್ತಿದ್ದೇವೆ. ಆದರೆ ಜಿಲ್ಲೆಯಲ್ಲಿ ಸಾಹಿತ್ಯ, ಸಾಂಸ್ಕೃತಿಕ ಕ್ಷೇತ್ರದಲ್ಲಿ ನಿರಂತರ ಚಟುವಟಿಕೆಗಳು ನಡೆಯುತ್ತಿರುವುದು ಶ್ಲಾಘನೀಯವಾಗಿದೆ.
    ಸರ್ಕಾರ ಕಲಾವಿದರನ್ನು ಬೆಳೆಸುವ ನಿಟ್ಟಿನಲ್ಲಿ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಲಾಭವನ ನಿರ್ಮಾಣ ಮಾಡಬೇಕು. ಕಲಾವಿದರಿಗೆ ನೀಡುತ್ತಿರುವ ಮಾಶಾಸನವನ್ನು ಹೆಚ್ಚಳ ಮಾಡುವ ಮೂಲಕ ಪ್ರೋತ್ಸಾಹ ನೀಡಲು ಮುಂದಾಗಬೇಕು ಎಂದು ಟಿ.ಎಚ್.ಎಂ.ಬಸವರಾಜ ಒತ್ತಾಯಿಸಿದರು.
    ಡಿಎಚ್‌ಒ ಡಾ.ಸುರೇಂದ್ರಬಾಬು ಮಾತನಾಡಿ, ಟ್ರಸ್ಟ್ ವತಿಯಿಂದ ಸಾಂಸ್ಕೃತಿಕ ಚಟುವಟಿಕೆಗಳನ್ನು ನಿರಂತರವಾಗಿ ಹಮ್ಮಿಕೊಳ್ಳುವುದರ ಜತೆಗೆ ವಿವಿಧ ಕ್ಷೇತ್ರದಲ್ಲಿನ ಸಾಧನೆಗೈದವರನ್ನು ಗುರುತಿಸಿ ಸನ್ಮಾನಿಸುತ್ತಿರುವುದು ಶ್ಲಾಘನೀಯವಾಗಿದೆ ಎಂದರು.
    ಇರಕಲ್ ಮಠದ ಬಸವಪ್ರಸಾದ ಶರಣರು ಸಾನ್ನಿಧ್ಯ ವಹಿಸಿದ್ದರು. ಬೆಂಗಳೂರಿನ ಅಭಯ ಸಮಾಜ ಸೇವಾ ಸಂಸ್ಥೆ ಅಧ್ಯಕ್ಷ ಡಾ.ಅಭಯಕೃಷ್ಣಯ್ಯ ಮಾತನಾಡಿದರು. ನಂತರ ಕಲಾವಿದರಿಂದ ಗಾಯನ ಹಾಗೂ ಕವಿಗೋಷ್ಠಿ ಜರುಗಿತು.
    ಕಾರ್ಯಕ್ರಮದಲ್ಲಿ ಟ್ರಸ್ಟ್ ಅಧ್ಯಕ್ಷ ಅಣ್ಣಪ್ಪ ಮೇಟಿಗೌಡ, ವೈದ್ಯ ಡಾ.ಹರೀಶಮೂರ್ತಿ, ಮುಖಂಡರಾದ ನವನೀತಾ ಆದೋನಿ, ಡಾ.ಅಭಯಶೀಲಾ, ಭಾನುಪ್ರಕಾಶ ಖೇಣೆದ್, ಮರಿಗೌಡ ಪಾಟೀಲ್, ಚನ್ನಬಸವ ಬಾಗಲವಾಡ, ಮಾರುತಿ ಬಡಗೇರ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts