More

    ತಂಬಾಕು ಸೇವನೆಯಿಂದ ದೂರವಿರಿ

    ರಾಮನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತ್, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಂಯುಕ್ತ ಆಶ್ರಯದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಕಾರ್ಯದರ್ಶಿಗಳಿಗೆ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ ಮತ್ತು ಕೋಟ್ಪಾ-2003 ಕಾಯ್ದೆ ಅನುಷ್ಠಾನ ಕುರಿತು ರಾಮನಗರ ತಾಪಂ ಸಭಾಂಗಣದಲ್ಲಿ ಇತ್ತೀಚೆಗೆ ಕಾರ್ಯಾಗಾರ ಆಯೋಜಿಸಲಾಗಿತ್ತು.

    ತಾಪಂ ಅಧ್ಯಕ್ಷ ಭದ್ರಯ್ಯ ಮಾತನಾಡಿ, ಕೋಟ್ಪಾ ಕಾಯ್ದೆ -2003 ನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಹಾಗೂ ದುಷ್ಪರಿಣಾಮಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು, ಜನರು ಸಹ ತಂಬಾಕು ಸೇವನೆಯಿಂದ ದೂರವಿರಬೇಕು ಎಂದರು.

    ತಾಪಂ ಕಾರ್ಯ ನಿರ್ವಾಹಣಾಧಿಕಾರಿ ಶಿವಕುಮಾರ್ ಮಾತನಾಡಿ, ಎಲ್ಲ ಪಂಚಾಯಿತಿಗಳಲ್ಲಿ ಅಂಗಡಿ ಪರವಾನಿಗೆ ನೀಡುವ ಸಂದರ್ಭದಲ್ಲಿ ಕಡ್ಡಾಯವಾಗಿ ಕೋಟ್ಪಾ-2003 ಕಾಯ್ದೆ ಬಗ್ಗೆ ಮಾಹಿತಿ ನೀಡುವುದು ಮತ್ತು ಅಂಗಡಿ ಮಾಲಿಕರ ಸಭೆ ಕರೆದು ರ್ಚಚಿಸುವಂತೆ ಸಲಹೆ ನೀಡಿದರು.

    ಕ್ಯಾನ್ಸರ್, ಹೃದಯ ಸಂಬಂಧಿ , ಶ್ವಾಸಕೋಶದ ಕಾಯಿಲೆಗಳಿಗೆ ತಂಬಾಕು ಸೇವನೆಯೇ ಪ್ರಮುಖ ಕಾರಣವಾಗಿದೆ. ಪ್ರತಿ ವರ್ಷ ವಿಶ್ವದಾದ್ಯಂತ 60 ಲಕ್ಷಕ್ಕಿಂತ ಹೆಚ್ಚು ಜನರು ತಂಬಾಕು ಸೇವನೆಯಿಂದ ಸಾವನ್ನಪ್ಪುತ್ತಿದ್ದಾರೆ. ಪ್ರತಿ 6 ಸೆಕೆಂಡಿಗಳಿಗೊಮ್ಮೆ ಒಬ್ಬ ವ್ಯಕ್ತಿ ತಂಬಾಕು ಸೇವನೆಯಿಂದ ಸಾವನ್ನಪ್ಪುತ್ತಿದ್ದಾನೆ. ಕರ್ನಾಟಕದಲ್ಲಿ ಶೇ. 28 ರಷ್ಟು (15 ವರ್ಷಕ್ಕಿಂತ ಮೇಲ್ಪಟ್ಟ) ವ್ಯಕ್ತಿಗಳು ಯಾವುದಾದರೂ ಒಂದು ರೀತಿಯ ತಂಬಾಕು ಉತ್ಪನ್ನಗಳನ್ನು ಸೇವನೆ ಮಾಡುತ್ತಾರೆ. ಶೇ.11.9 ಧೂಮಪಾನಿಗಳಿದ್ದು ಹಾಗೂ ಶೇ.19.4 ಜಗಿಯುವ ತಂಬಾಕುಗಳ ಸೇವನೆ ಮಾಡುತ್ತಾರೆ. ಸರಿಸುಮಾರು 18 ವಯಸ್ಸಿನಲ್ಲಿ ತಂಬಾಕು ಉತ್ಪನ್ನಗಳ ಸೇವನೆ ಆರಂಭಿಸುವುದಾಗಿ ಅಂದಾಜಿಸಲಾಗಿದೆ. ಶೇ.42 ರಷ್ಟು ಜನ ಕೆಲಸದ ಸ್ಥಳದಲ್ಲಿ, ಶೇ.44.3 ರಷ್ಟು ಮನೆಯಲ್ಲಿ ಮತ್ತು ಶೇ.37.2 ರಷ್ಟು ಸಾರ್ವಜನಿಕ ಸ್ಥಳಗಳಲ್ಲಿ ಇತರರು ಧೂಮಪಾನ ಮಾಡುವುದರಿಂದ ಪರೋಕ್ಷ ಧೂಮಪಾನಕ್ಕೆ ಒಳಗಾಗುತ್ತಿದ್ದಾರೆ ಎಂದು ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ. ಕಿರಣ್​ಶಂಕರ್ ಮಾಹಿತಿ ನೀಡಿದರು. ಡಿಎಲ್​ಒ ಡಾ.ಮಂಜುನಾಥ್, ಜಿಲ್ಲಾ ಸಂಯೋಜಕ ಡಾ. ಮಧು, ಡಾ. ಶೃತಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಎಸ್. ಗಂಗಾಧರ್, ಮೇಲ್ವಿಚಾರಕರಾದ ಲೋಕೇಶ್, ಶಂಭುಲಿಂಗಯ್ಯ ಹಾಗೂ ಗ್ರಾಮ ಪಂಚಾಯಿತಿ ಅಭಿವೃಧಿ್ಧ ಅಧಿಕಾರಿಗಳು ಮತ್ತು ಕಾರ್ಯದರ್ಶಿಗಳು ಹಾಜರಿದ್ದರು.

    ಸೆಕ್ಷನ್ 4 ರ ಅಡಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ನಿಷೇಧಿಸಲಾಗಿದೆ. ಸೆಕ್ಷನ್ 5 ರ ಪ್ರಕಾರ ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ನೇರ ಹಾಗೂ ಪರೋಕ್ಷ ಜಾಹಿರಾತು, ಉತ್ತೇಜನ ಮತ್ತು ಪ್ರಾಯೋಜಿಕತೆ ನಿಷಿದ್ಧ.

    | ಚಂದ್ರಶೇಖರ್ ಜಿಲ್ಲಾ ಸಲಹೆಗಾರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts