More

    ಸಂಸದ ಬಿ.ವೈ.ರಾಘವೇಂದ್ರ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ

    ಬೆಂಗಳೂರು: ಚಿತ್ರದುರ್ಗದ ಭೋವಿ ಮಠದಲ್ಲಿ ರಾಜಕೀಯ ಭಾಷಣ ಮಾಡುವ ಮೂಲಕ ಚುನಾವಣಾ ನೀತಿಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ವಿರುದ್ಧ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.


    ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ರಾಘವೇಂದ್ರ ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಏಕಸದಸ್ಯ ಪೀಠ ಪ್ರಕರಣಕ್ಕೆ ತಡೆ ನೀಡಿದೆ.


    ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಅರ್ಜಿದಾರರು ಎಸಗಿದ್ದಾರೆ ಎನ್ನಲಾದ ಅಪರಾಧಗಳ ಕುರಿತು ಎಫ್‌ಐಆರ್‌ನಲ್ಲಿ ಮಾಹಿತಿ ಉಲ್ಲೇಖಿಸಲಿಲ್ಲ. ಹಾಗಾಗಿ, ಕ್ರಿಮಿನಲ್ ಪ್ರಕ್ರಿಯೆ ಮುಂದುವರಿಸಿದರೆ ಕಾನೂನಿಗೆ ವಿರುದ್ಧ ನಡೆದಂತಾಗುತ್ತದೆ. ಈ ಕಾರಣದಿಂದ ಎಫ್‌ಐಆರ್ ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಪ್ರಕ್ರಿಯೆಗಳನ್ನು ರದ್ದುಗೊಳಿಸಬೇಕು. ಅರ್ಜಿ ಇತ್ಯರ್ಥವಾಗುವವರೆಗೆ ಎಫ್‌ಐಆರ್‌ಗೆ ಮಧ್ಯಂತರ ತಡೆ ನೀಡಬೇಕು ಎಂದು ಮನವಿ ಮಾಡಿದರು.


    ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ ಎಫ್‌ಐಆರ್‌ಗೆ ತಡೆ ನೀಡಿ ಆದೇಶಿಸಿದೆ. ಜತೆಗೆ ಪ್ರಕರಣ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಮತ್ತು ದೂರುದಾರರಾದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾರ ವಿಚಕ್ಷಣಾ ದಳದ ಅಧಿಕಾರಿ ಪಿ.ಅವಿನಾಶ್ ಅವರಿಗೆ ಆಕ್ಷೇಪಣೆ ಸಲ್ಲಿಸುವಂತೆ ನೋಟಿಸ್ ಜಾರಿಗೊಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts