More

    ಸ್ಮಾರ್ಟ್ ಸಿಟಿ ಕಾಮಗಾರಿಗೆ ತಡೆಯಾಜ್ಞೆ

    ಮಂಗಳೂರು: ದ.ಕ ಜಿಲ್ಲಾ ಸರ್ಕಾರಿ ನೌಕರರ ಸಂಘದ ಒಡೆತನದ ನಿವೇಶನದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗೆ ನ್ಯಾಯಾಲಯ ಶುಕ್ರವಾರ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.

    ಸರ್ಕಾರಿ ನೌಕರರ ಸಂಘದ ಕಚೇರಿ ಕಟ್ಟಡಕ್ಕೆ ತಾಗಿಕೊಂಡಿರುವ ಸಂಘದ ಒಡೆತನಕ್ಕೆ ಸೇರಿರುವ ಖಾಲಿ ನಿವೇಶನದಲ್ಲಿ ಸಿಟಿ ಸರ್ವೇ ಇಲಾಖೆಯವರಿಗೆ ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ ಕಾಮಗಾರಿಗಳು ಭರದಿಂದ ಸಾಗುತ್ತಿತ್ತು. ಕಾಮಗಾರಿ ನಿಲ್ಲಿಸುವಂತೆ ಸಂಘವು ಮಾಡಿದ ಮನವಿಯನ್ನು ನಿರ್ಲಕ್ಷಿಸಿದ ಸ್ಮಾರ್ಟ್ ಸಿಟಿ ಯೋಜನೆಯ ಆಡಳಿತ ನಿರ್ದೇಶಕರ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು.

    ನಿರ್ಮಾಣ ಕಾರ್ಯ ನಿಲ್ಲಿಸುತ್ತೇವೆ ಎಂದು ಮೌಖಿಕವಾಗಿ ಭರವಸೆ ನೀಡಿಯೂ ಕಾಮಗಾರಿ ನಿಲ್ಲಿಸದ ಕಾರಣ ಮಂಗಳೂರಿನ ಪ್ರಧಾನ ಸಿವಿಲ್ ನ್ಯಾಯಾಲಯದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯ ಆಡಳಿತ ನಿರ್ದೇಶಕರು, ಮಂಗಳೂರಿನ ನಗರ ಮಾಪನ ಕಚೇರಿಯ ಯೋಜನಾಧಿಕಾರಿ ಹಾಗೂ ರಾಜ್ಯವನ್ನು ಪ್ರತಿನಿಧಿಸಿ, ಜಿಲ್ಲಾಧಿಕಾರಿ ಅವರನ್ನು ಪ್ರತಿವಾದಿಗಳಾಗಿ ಕಾಣಿಸಿ ಸಂಘದ ನಿವೇಶನದಲ್ಲಿ ಅಕ್ರಮವಾಗಿ ಪ್ರವೇಶಿಸಿ ಕಾಮಗಾರಿ ನಡೆಸದಂತೆ ಶಾಶ್ವತ ನಿರ್ಬಂಧಕಾಜ್ಞೆ ನೀಡುವಂತೆ ಮನವಿ ಮಾಡಿ ಪ್ರಧಾನ ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡಲಾಗಿತ್ತು.

    ನ್ಯಾಯಾಲಯ ಆದೇಶ ಹೊರಡಿಸಿದ್ದು ಯಾರೂ ಸಂಘದ ಒಡೆತನಕ್ಕೆ ಒಳಪಟ್ಟ ನಿವೇಶನವನ್ನು ಪ್ರವೇಶಿಸಿ ಅಕ್ರಮವಾಗಿ ಯಾವುದೇ ಕಾಮಗಾರಿ ನಡೆಸದಂತೆ ಮುಂದಿನ ವಿಚಾರಣೆ ದಿನಾಂಕದ ತನಕ ತಡೆಯಾಜ್ಞೆ ನೀಡಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts