More

    ಉತ್ತಮ ಫಲಿತಾಂಶಕ್ಕೆ ಮುತುವರ್ಜಿ ವಹಿಸಿ

    ಹನೂರು: ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಫಲಿತಾಂಶದಲ್ಲಿ ಹನೂರು ಶೈಕ್ಷಣಿಕ ವಲಯ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆಯಬೇಕು. ಈ ದಿಸೆಯಲ್ಲಿ ಶಿಕ್ಷಕರು ಮುತುವರ್ಜಿ ವಹಿಸಬೇಕು ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು.

    ಪಟ್ಟಣದ ಜಿ.ವಿ.ಗೌಡ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಉತ್ತಮ ಫಲಿತಾಂಶ ಪಡೆಯುವ ಸಲುವಾಗಿ ಶಿಕ್ಷಣ ಇಲಾಖೆ ವತಿಯಿಂದ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಭರವಸೆ ತುಂಬುದ ವಿಶೇಷ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ವಿದ್ಯಾರ್ಥಿ ಜೀವನದಲ್ಲಿ ಎಸ್ಸೆಸ್ಸೆಲ್ಸಿ ಪ್ರಮುಖ ಘಟ್ಟ. ಈ ವೇಳೆ ಕೈಗೊಳ್ಳುವ ನಿರ್ಧಾರಗಳು ನಿಮ್ಮ ಭವಿಷ್ಯದ ಮೇಲೆ ನಿಂತಿದೆ. ಹಾಗಾಗಿ ಪ್ರತಿಯೊಬ್ಬರೂ ನಿರ್ದಿಷ್ಟ ಗುರಿಯನ್ನು ಹೊಂದಲು ಸಂಕಲ್ಪ ಮಾಡಬೇಕಿದೆ. ಈ ದಿಸೆಯಲ್ಲಿ ಗುರುಗಳ ಹಾಗೂ ಪಾಲಕರ ಮಾರ್ಗದರ್ಶನ ಅತೀ ಮುಖ್ಯ. ಜತೆಗೆ ಶಿಕ್ಷಣ, ಸಾಹಿತ್ಯ, ವೈದ್ಯಕೀಯ, ವಿಜ್ಞಾನ, ತಂತ್ರಜ್ಞಾನ ಹಾಗೂ ಇನ್ನಿತರೆ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮೇರು ವ್ಯಕ್ತಿಗಳಿದ್ದಾರೆ. ಇವರ ಸಾಧನೆಯ ಹಿಂದೆ ಅಪಾರ ಶ್ರಮವಿದೆ. ಹಾಗಾಗಿ ಸಾಧಕರಿಗೆ ಇವರು ಸ್ಫೂರ್ತಿಯಾಗಿದ್ದಾರೆ. ಆದ್ದರಿಂದ ಸಾಧಕರ ಬಗ್ಗೆ ತಿಳಿದುಕೊಳ್ಳುವುದರಿಂದ ಸಾಧನೆಗೆ ಪ್ರೇರಣೆ ಸಿಗುತ್ತದೆ. ಯಶಸ್ಸು ಲಭಿಸುತ್ತದೆ. ಈ ಬಗ್ಗೆ ಪ್ರತಿಯೊಬ್ಬರೂ ಮನದಟ್ಟು ಮಾಡಿಕೊಳ್ಳಬೇಕು. ಆದ್ದರಿಂದ ಪ್ರತಿಯೊಬ್ಬರೂ ವಿಷಯವಾರು ವೇಳಾಪಟ್ಟಿಯನ್ನು ತಯಾರಿಸಿಕೊಂಡು ಪರೀಕ್ಷೆಗೆ ಸಜ್ಞಾಗಬೇಕು. ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸುವುದರ ಮೂಲಕ ಶಾಲೆಗೆ, ಪೋಷಕರಿಗೆ ಹಾಗೂ ತಾಲೂಕಿಗೆ ಕೀರ್ತಿ ತರಬೇಕು ಎಂದು ತಿಳಿಸಿದರು.

    ಇದೇ ವೇಳೆ ಡಿಡಿಪಿಐ ರಾಮಚಂದ್ರರಾಜೇ ಅರಸ್ ಮಾತನಾಡಿದರು. ಬಳಿಕ ಸಂಪನ್ಮೂಲ ಶಿಕ್ಷಕರಿಂದ ಆಯಾ ಭಾಷೆಯ ಪರೀಕ್ಷಾ ಕ್ರಮ, ಸ್ವ ಮೌಲ್ಯಮಾಪನ, ಹೆಚ್ಚು ಅಂಕ ಗಳಿಸುವ ರೀತಿ, ಓದುವ ಕ್ರಮ ಹಾಗೂ ಪರೀಕ್ಷೆ ತಯಾರಿ ಸಂಬಂಧ ವಿದ್ಯಾರ್ಥಿಗಳಿಗೆ ತಿಳಿಸಿ ಕೊಡಲಾಯಿತು. ಕಾರ್ಯಕ್ರಮದಲ್ಲಿ ಬಿಇಒ ಶಿವರಾಜು, ದೈಹಿಕ ಶಿಕ್ಷಣ ಪರಿವೀಕ್ಷಕ ಮಹದೇವ, ಶಿಕ್ಷಣ ಸಂಯೋಜಕರಾದ ಕಿರಣ್‌ಕುಮಾರ್, ಕಂದವೇಲು, ಪ್ರಾಂಶುಪಾಲ ಸ್ವಾಮಿ, ಎಸ್‌ಡಿಎಂಸಿ ಅಧ್ಯಕ್ಷ ರಾಜುಗೌಡ, ಸಂಪನ್ಮೂಲ ಶಿಕ್ಷಕರಾದ ಬಸವರಾಜು, ಶಿವಶಂಕರ್, ಚಂದ್ರಶೇಖರ್, ಮಲ್ಲೇಶ್, ಮೋಹನ್‌ಕುಮಾರ್, ಲೋಕೇಶ್, ಶಾಂತರಾಜು, ಶ್ರೀನಿವಾಸನಾಯ್ಡು ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts