More

    ಹಂತ ಹಂತವಾಗಿ ನೌಕರರ ಬೇಡಿಕೆ ಈಡೇರಿಕೆ

    ಧಾರವಾಡ: ಸುಸಜ್ಜಿತ ವಸತಿ, ಕಚೇರಿಗಳಲ್ಲಿ ಶೌಚಗೃಹ, ಮಹಿಳಾ ಸಿಬ್ಬಂದಿಗೆ ವಿಶ್ರಾಂತಿ ಕೊಠಡಿ, ಕರ್ತವ್ಯ ನಿರತ ಅಧಿಕಾರಿ, ಸಿಬ್ಬಂದಿಗೆ ಅಗತ್ಯವಿದ್ದಲ್ಲಿ ಪೊಲೀಸ್ ರಕ್ಷಣೆ ಸೇರಿ ಎಲ್ಲ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು. ಪ್ರತಿ ಇಲಾಖೆಯ ಅಭಿವೃದ್ಧಿ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಎಲ್ಲ ಸರ್ಕಾರಿ ನೌಕರರು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಹೇಳಿದರು.

    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳ ವಾರ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಅಂತರ್ ಇಲಾಖಾ ಜಂಟಿ ಸಮಾಲೋಚನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ಇಲಾಖೆ ಅಧಿಕಾರಿ, ಸಿಬ್ಬಂದಿ ನಿಯಮಾನುಸಾರ ಕರ್ತವ್ಯ ನಿರ್ವಹಿಸಬೇಕು. ಕರ್ತವ್ಯದ ಸ್ಥಳದಲ್ಲಿ ಅಡಚಣೆ, ಬೆದರಿಕೆ ಇದ್ದಲ್ಲಿ ತಕ್ಷಣ ಗಮನಕ್ಕೆ ತರಬೇಕು. ಸೂಕ್ತ ರಕ್ಷಣೆ ನೀಡಿ ನೌಕರರ ಹಿತ ಕಾಪಾಡಲಾಗುವುದು. ಜನಸ್ನೇಹಿಯಾಗಿ ಸೌಜನ್ಯದಿಂದ ಕರ್ತವ್ಯ ನಿರ್ವಹಿಸಬೇಕು. ನೌಕರರು ಜನರಿಗೆ ಸರ್ಕಾರಿ ಯೋಜನೆ, ಸೌಲಭ್ಯಗಳ ಕುರಿತು ತಿಳಿವಳಿಕೆ ನೀಡಬೇಕು ಎಂದರು.

    ಮಿನಿ ವಿಧಾನಸೌಧಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಸರ್ಕಾರಿ ಕಟ್ಟಡಗಳಲ್ಲಿ ಅನಧಿಕೃತ ವಾಸ, ಭೂ ಒತ್ತುವರಿಗಳನ್ನು ಗಂಭೀರವಾಗಿ ಪರಿಗಣಿಸಿ ಅಂತಹವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಮಹಿಳಾ ಸಿಬ್ಬಂದಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ, ನಗರ ಪ್ರದೇಶಗಳಲ್ಲಿ ಸುಸಜ್ಜಿತ ವಸತಿಗೃಹ ಕಲ್ಪಿಸಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು. ಜಿಲ್ಲಾಡಳಿತ ನಿಮ್ಮೊಂದಿಗೆ ಸದಾ ಇರುತ್ತದೆ ಎಂದರು.

    ರಾಜ್ಯ ಸರ್ಕಾರಿ ನೌಕರ ಸಂಘದ ಜಿಲ್ಲಾಧ್ಯಕ್ಷ ಎಸ್.ಎಫ್. ಸಿದ್ದನಗೌಡರ ಮಾತನಾಡಿ, ಕೋವಿಡ್ ಜೀವವಿಮೆ ಎಲ್ಲ ನೌಕರರಿಗೂ ವಿಸ್ತರಣೆ, ಸುರಕ್ಷತಾ ಸಾಮಗ್ರಿಗಳ ಪೂರೈಕೆ, ವಿವಿಧ ಇಲಾಖೆಗಳಲ್ಲಿ ಬಾಕಿ ಇರುವ ವೇತನ, ಭತ್ಯೆ, ಬಡ್ತಿ ನೀಡುವುದು, ನೌಕರರಿಗೆ ರಕ್ಷಣೆ, ವಸತಿಗೃಹಗಳ

    ದುರಸ್ತಿ, ಸುಸಜ್ಜಿತ ಹೊಸ ವಸತಿ ಸಮುಚ್ಚಯ ಸೇರಿ ಎಲ್ಲ ಇಲಾಖೆ ನೌಕರರ ಬೇಡಿಕೆಗಳನ್ನು ಮಂಡಿಸಿದರು.

    ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಕಿಮ್್ಸ ಆಡಾಳಿತಾಧಿಕಾರಿ ರಾಜಶ್ರೀ ಜೈನಾಪುರ, ಡಿವೈಎಸ್​ಪಿ ರಾಮನಗೌಡ ಹಟ್ಟಿ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ಎಸ್.ಬಿ. ಚೌಡನ್ನವರ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಎಲ್. ಹಂಚಾಟೆ, ಜಿಪಂ ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ, ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ಅಜ್ಜಪ್ಪ ಸೊಗಲದ, ಸಂಘದ ಪ್ರಧಾನ ಕಾರ್ಯದರ್ಶಿ ಶಂಕ್ರಯ್ಯ ಸುಬ್ಬಾಪುರಮಠ, ಆರ್.ಬಿ. ಲಿಂಗದಾಳ, ದೇವಿದಾಸ ಶಾಂತಿಕರ, ರಾಜಶೇಖರ ಬಾಣದ, ರಾಜಶೇಖರ ಕೋನರೆಡ್ಡಿ, ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts