More

    ಈಗಲೂ ಒಪಿಎಸ್ ಹೋರಾಟಗಾರರ ಪರ: ಆಯನೂರು

    ಶಿವಮೊಗ್ಗ: ಸರ್ಕಾರಿ ನೌಕರರಿಗೆ ಎನ್‌ಪಿಎಸ್ ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸಬೇಕು. ಹೊಸ ಪಿಂಚಣಿ ವ್ಯವಸ್ಥೆ ಬದಲಾಯಿಸಲು ಕೇಂದ್ರ ಸರ್ಕಾರ ಕಾಯ್ದೆ ತಿದ್ದುಪಡಿ ಮಾಡಿ ಸಹಕಾರ ನೀಡಬೇಕು. ಇಲ್ಲದಿದ್ದರೆ ರಾಜ್ಯ ಸರ್ಕಾರ ಯಾವ ಬದಲಾವಣೆಯನ್ನೂ ಮಾಡಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಹೇಳಿದರು.

    ಎನ್‌ಪಿಎಸ್ ರದ್ದತಿ ಹಾಗೂ ಒಪಿಎಸ್ ಜಾರಿ ಪರವಾಗಿ ನಡೆಯುತ್ತಿರುವ ಹೋರಾಟವನ್ನು ನಾನು ಆರಂಭದಿಂದಲೂ ಬೆಂಬಲಿಸಿದ್ದೇನೆ. ಈಗಲೂ ಹೋರಾಟಗಾರರ ಪರವಾಗಿದ್ದೇನೆ. 2006ರ ಬಳಿಕ ನೇಮಕಗೊಂಡ ಸರ್ಕಾರಿ ನೌಕರರು ಎನ್‌ಪಿಎಸ್‌ನಿಂದ ಆತಂಕಕ್ಕೆ ಒಳಗಾಗಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
    ವಿಧಾನಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಎನ್‌ಪಿಎಸ್ ರದ್ದತಿ ಭರವಸೆ ನೀಡಿತ್ತು. ಆದರೆ ಪಿಂಚಣಿಗಾಗಿ ಕಡಿತಗೊಂಡ ಶೇ.20 ಹಣವನ್ನು ಕೇಂದ್ರ ಸರ್ಕಾರದ ನ್ಯಾಷನಲ್ ಸೆಕ್ಯುರಿಟಿ ಡಿಪಾಸಿಟ್‌ಗೆ ನೀಡಲಾಗುತ್ತದೆ. ಅಲ್ಲಿ ಅದನ್ನು ಷೇರು ಮಾರುಕಟ್ಟೆಯಲ್ಲಿ ತೊಡಗಿಸಲಾಗುತ್ತದೆ. ಅದರ ಲಾಭಾಂಶವನ್ನು ಪಿಂಚಣಿ ರೂಪದಲ್ಲಿ ನೀಡಲಾಗುತ್ತದೆ. ಹೀಗಾಗಿ ರಾಜ್ಯ ಸರ್ಕಾರಗಳು ಒಪಿಎಸ್ ಜಾರಿ ಮಾಡಬೇಕು ಎಂದಾದರೆ ನಿವೃತ್ತ ನೌಕರರ ಕಡಿತಗೊಂಡ ಹಣವನ್ನು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ನೀಡಬೇಕು. ಅದಕ್ಕಾಗಿ ಕಾಯ್ದೆಗೆ ತಿದ್ದುಪಡಿ ತರಬೇಕು ಎಂದರು.
    ಮುಂಬರುವ ಸಂಸತ್ ಅಧಿವೇಶನದಲ್ಲಿ ರಾಜ್ಯದ ಸಂಸದರು ಕಾಯ್ದೆ ತಿದ್ದುಪಡಿಗೆ ಒತ್ತಾಯಿಸಬೇಕು. ರಾಜ್ಯ ಸರ್ಕಾರ ಕೇಂದ್ರಕ್ಕೆ ಸೂಕ್ತ ಮಾಹಿತಿ ಒದಗಿಸಬೇಕು ಎಂದು ಆಗ್ರಹಿಸಿದರು.
    ಪಾಲಿಕೆ ಮಾಜಿ ಸದಸ್ಯರಾದ ಧೀರರಾಜ್ ಹೊನ್ನವಿಲೆ, ಐಡಿಯಲ್ ಗೋಪಿ, ಕೆಪಿಸಿಸಿ ಸದಸ್ಯ ವೈ.ಎಚ್.ನಾಗರಾಜ್, ಹಿರಣ್ಣಯ್ಯ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts