ಮಂಡ್ಯ: ಮಂಡ್ಯದ ನಾಗಮಂಗಲ ಪಟ್ಟಣದ ಮೈಸೂರು ರಸ್ತೆಯ ದರ್ಗಾದ ಬಳಿ ಬುಧವಾರ ರಾತ್ರಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಅನ್ಯಕೋಮಿನ ಗುಂಪೊಂದು ಕಲ್ಲು ತೂರಾಟ ಮಾಡಿದ ಪರಿಣಾಮ ಕೆಲವರಿಗೆ ಗಾಯಗಳಾಗಿವೆ. ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.
ಇದನ್ನೂ ಓದಿ: ಪ್ರಧಾನಿ ಮೋದಿ ಸರ್ಕಾರದ ಮಹತ್ವದ ನಿರ್ಧಾರ; 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ 5 ಲಕ್ಷದವರೆಗೆ ಉಚಿತ ಚಿಕಿತ್ಸೆ
ಪಟ್ಟಣದ ಬದ್ರಿಕೊಪ್ಪಲು ಗ್ರಾಮದ ಯುವಕರು ಪಟ್ಟಣದ ಹೆದ್ದಾರಿಯಲ್ಲಿ ಗಣೇಶ ವಿಸರ್ಜನೆ ಅಂಗವಾಗಿ ಅದ್ದೂರಿಯಾಗಿ ಗಣೇಶ ಮೂರ್ತಿ ಮೆರವಣಿಗೆ ಮಾಡಲಾಗುತ್ತಿತ್ತು. ಆ ಸಂದರ್ಭದಲ್ಲಿ ನಾಗಮಂಗಲದ ಮೈಸೂರು ರಸ್ತೆಯಲ್ಲಿರುವ ದರ್ಗಾ ಬಳಿ ಮೆರವಣಿಗೆ ಬಂದ ವೇಳೆ ಅನ್ಯಕೋಮಿನ ಯುವಕರು ಕಲ್ಲುತೂರಾಟ ನಡೆಸಿದ್ದಾರೆ.
ಈ ವೇಳೆ ಹಿಂದೂ-ಮುಸ್ಲಿಂ ಯುವಕರ ನಡುವೆ ಮಾತಿನ ಚಕಮಕಿ ನಡೆದಿದೆ, ಈ ವೇಳೆ ತಳ್ಳಾಟ ನೂಕಾಟವಾಗಿದ್ದು, ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಹರಸಾಹಸ ನಡೆಸಿದ್ದಾರೆ. ಬಳಿಕ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕಾಗಿ ಆಗ್ರಹಿಸಿ ಪೊಲೀಸ್ ಠಾಣೆ ಎದುರು ಗಣೇಶ ಮೂರ್ತಿ ನಿಲ್ಲಿಸಿ ಹಿಂದೂಗಳು ಪ್ರತಿಭಟನೆ ನಡೆಸಿದ್ದಾರೆ.
ಜ್ಞಾನವಾಪಿ ಮಸೀದಿ ಪ್ರಕರಣ: ಸರ್ವೇಗೆ ಜಾಗ ಅಗೆಯಲು ಎಎಸ್‌ಐಗೆ ಅನುಮತಿ ಕೋರಿ ಹಿಂದೂಗಳಿಂದ ಒತ್ತಾಯ