More

    ದಕ್ಷಿಣ ಕನ್ನಡದಲ್ಲಿ ಆನೆ ದಾಳಿ ಪ್ರಕರಣ: ಒಂದೇ ಆನೆ ಹಿಡಿದದ್ದು ಎಂದು ಕಲ್ಲು ತೂರಿದ ಜನರು!

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಮೀನಾಡಿಯಲ್ಲಿ ಕಾಡಾನೆ ದಾಳಿ ಪ್ರಕರಣ ನಡೆದಿದ್ದು ಇಬ್ಬರನ್ನು ಆನೆಯೊಂದು ಭೀಕರವಾಗಿ ಕೊಂದು ಹಾಕಿತ್ತು. ಹೀಗಾಗಿ ಆನೆಗಳನ್ನು ಸ್ಥಳದಿಂದ ತೆರವು ಮಾಡಿ ಎಂದು ಜನರು ಪ್ರತಿಭಟನೆ ನಡೆಸಿದ್ದರು.

    ಇದೀಗ ಕಾಡಾನೆಯನ್ನು ಹಿಡಿಯಲು ಕಾರ್ಯಾಚರಣೆ ಕೂಡ ಮಾಡಲಾಗಿದ್ದು ಅರಣ್ಯ ಇಲಾಖೆ ಒಂದು ಆನೆಯನ್ನು ಹಿಡಿದಿದೆ. ಆದರೂ ಜನರು ಕಾಡಾನೆ ಪತ್ತೆ ಕಾರ್ಯಚರಣೆ ಮಧ್ಯೆಯೇ ಇಲಾಖಾ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

    ಇದನ್ನೂ ಓದಿ: ಕಡಬ ತಾಲೂಕಿನಲ್ಲಿ ಬೆಳ್ಳಂಬೆಳಗ್ಗೆ ಆನೆ ದಾಳಿ! ಇಬ್ಬರ ದುರ್ಮರಣ…

    ಕಾಡಾನೆ ಪತ್ತೆ ಕಾರ್ಯಾಚರಣೆಯಲ್ಲಿದ್ದ ಅರಣ್ಯಾಧಿಕಾರಿಗಳು, ಪೋಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಜನರು ಅರಣ್ಯ ಮತ್ತು ಪೊಲೀಸ್ ಇಲಾಖೆಯ ವಾಹನಗಳ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ‘ಒಂದು ಆನೆಯನ್ನಷ್ಟೇ ಹಿಡಿದಿದ್ದೀರೀ’ ಎಂದು ಆರೋಪಿಸಿದ ಜನರು ಕಲ್ಲು ತೂರಾಟ ಮಾಡಿದ್ದಾರೆ.

    ಈ ಸಂದರ್ಭ ಜನರಿಗೆ ಅಧಿಕಾರಿಗಳು ‘ಕಾರ್ಯಾಚರಣೆ ನಿಲ್ಲಿಸಿಲ್ಲ, ನಾಳೆ ಬರುತ್ತೇವೆ’ ಎಂದರೂ ಕೇಳದೇ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ. ಕಲ್ಲು ತೂರಾಟದಿಂದಾಗಿ ಎರಡು ಪೊಲೀಸ್ ಜೀಪ್, ಅರಣ್ಯ ಇಲಾಖೆಯ ಒಂದು ಜೀಪ್, ರೇಂಜರ್ ಒಬ್ಬರ ಬ್ರೀಝಾ ಗಾಡಿಗಳು ಜಖಂ ಆಗಿವೆ. ಡಿವೈಎಸ್ಪಿ ಸೇರಿ ಅರಣ್ಯ ಇಲಾಖೆಗೆ ಸೇರಿದ ವಾಹನಗಳ ಗಾಜು ಪುಡಿ ಪುಡಿಯಾಗಿದೆ.

    ಒಟ್ಟು 3 ದಿನಗಳ ಕಾರ್ಯಚರಣೆಯಲ್ಲಿ ಇಂದು ಒಂಟಿ ಸಲಗ ಸೆರೆಯಾಗಿತ್ತು. ಈ ಕಾಡಾನೆಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಆಪರೇಷನ್ ಎಲಿಫೆಂಟ್ ಆರಂಭಿಸಿದ್ದು 5 ಸಾಕಾನೆಗಳಿಂದ, ನುರಿತ ತಜ್ಞ ವೈದ್ಯರು, ಅರಣ್ಯ ಅಧಿಕಾರಿಗಳು, ಶಾರ್ಪ್ ಶೂಟರ್​ಗಳಿಂದ ಕಾರ್ಯಾಚರಣೆ ಆರಂಭವಾಗಿತ್ತು.

    ಇದೀಗ ಕಡಬದ ಕೊಂಬಾರು ಎಂಬಲ್ಲಿನ ಮಂಡೆಕರ ಪ್ರದೇಶದ ದಟ್ಟಾರಣ್ಯದಲ್ಲಿ ಕಾಡಾನೆ ಸೆರೆಯಾಗಿದೆ. ಫೆ.20 ರ ಬೆಳಿಗ್ಗೆ ಹಾಲು ಸೊಸೈಟಿಗೆ ಹೋಗುತಿದ್ದ ರಂಜಿತಾ (21) ಮತ್ತು ರಮೇಶ್ ರೈ (52 ) ಕಾಡಾನೆ ದಾಳಿಗೆ ಬಲಿಯಾಗಿದ್ದರು. ಆದರೆ ಅರಣ್ಯ ಪ್ರದೇಶದಲ್ಲಿ ಇನ್ನಷ್ಟು ಕಾಡಾನೆ ಇರುವ ಬಗ್ಗೆ ಮಾಹಿತಿ ಇರುವ ಕಾರಣ ಉಳಿದ ಕಾಡಾನೆ ಸೆರೆಗೆ ಆಗ್ರಹಿಸಿದ ಜನರು ಇಲಾಖಾ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ.

    ಇದನ್ನೂ ಓದಿ: ಆನೆ ಹಾವಳಿ ತಡೆಗೆ ಜೇನು ಬೇಲಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts