ಹೊಸದಾಗಿ ಆರಂಭವಾದ ವಂದೇ ಭಾರತ್​ ರೈಲಿಗೆ ದುಷ್ಕರ್ಮಿಗಳಿಂದ ಕಲ್ಲು ಎಸೆತ

vande bharat stone pelted
Published on

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಆರಂಭಿಸಲಾದ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ದುಷ್ಕರ್ಮಿಗಳು ಕಲ್ಲು ಎಸೆದಿರುವ ಘಟನೆ ನಡೆದಿದೆ.

ಶನಿವಾರ ಮಧ್ಯಾಹ್ನ 3.30 ರಿಂದ 4ರ ನಡುವೆ ದಾವಣಗೆರೆಯಿಂದ ರೈಲು ಹೊರಟ ಸ್ವಲ್ಪ ಹೊತ್ತಿನಲ್ಲೇ ಕಲ್ಲು ತೂರಾಟ ನಡೆದಿದ್ದು, ಕಿಟಕಿಯೊಂದರೆ ಹೊರಭಾಗದ ಗಾಜು ಜಖಂಗೊಂಡಿದೆ. ಆದರೆ ಯಾರಿಗೂ ಗಾಯಗಳಾಗಿಲ್ಲ ಮತ್ತು ರೈಲು ಸೇವೆಗೂ ಯಾವುದೇ ತೊಂದರೆಯಾಗಿಲ್ಲ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಅಪರೂಪದ ಕಾಯಿಲೆಯಿಂದ 30ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ ಪೊಗರು ಚಿತ್ರದ ನಟ

ಸಿ4 ಕೋಚ್‌ನಲ್ಲಿನ ಕಿಟಕಿಯ ಹೊರ ಮೇಲ್ಮೈಗೆ ಸಣ್ಣ ಹಾನಿಯಾಗಿದೆ. ಕಿಟಕಿಯ ಒಳಭಾಗಕ್ಕೆ ಯಾವುದೇ ಹಾನಿಯಾಗಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದು, ದುಷ್ಕರ್ಮಿಗಳ ಈ ಕೃತ್ಯದ ವಿರುದ್ಧ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ತನಿಖೆಯನ್ನು ಪ್ರಾರಂಭಿಸಿದೆ.

ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಆರ್‌ಪಿಎಫ್, ರೈಲ್ವೆ ಕಾಯಿದೆಯ ಸೆಕ್ಷನ್ 153ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದು, ಇದರಡಿ ರೈಲ್ವೆ ಆಸ್ತಿಯನ್ನು ಉದ್ದೇಶಪೂರ್ವಕವಾಗಿ ನಾಶಪಡಿಸಿದರೆ ಐದು ವರ್ಷಗಳವರೆಗೆ ಜೈಲು ಶಿಕ್ಷೆಗೆ ಗುರಿಪಡಿಸಲಾಗುತ್ತದೆ. ಇದು ಸಾರ್ವಜನಿಕ ಆಸ್ತಿ ನಾಶ ಮಾತ್ರವಲ್ಲದೆ ಕ್ರಿಮಿನಲ್ ಅಪರಾಧವಾಗಿದ್ದು, ಅದಕ್ಕಾಗಿಯೇ ಅಂತಹ ಕಠಿಣ ದಂಡದ ನಿಬಂಧನೆಯ ಅಡಿಯಲ್ಲಿ ಪ್ರಕರಣವನ್ನು ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ

ಇದನ್ನೂ ಓದಿ: VIDEO| ಮೊಸಳೆಯನ್ನು ಮದುವೆಯಾದ ಮೇಯರ್​​; ಈ ವಿವಾಹದ ಹಿಂದೆ ಇದೆ ಆ ಕಾರಣ….

ಬೆಂಗಳೂರು ಮತ್ತು ಧಾರವಾಡ ನಡುವಿನ ವಿಶೇಷ ಅಲ್ಟ್ರಾ ಐಷಾರಾಮಿ ಸೆಮಿ-ಹೈ ಸ್ಪೀಡ್ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಜೂನ್ 28ರಂದು ಪ್ರಧಾನಿ ನರೇಂದ್ರ ಮೋದಿಯವರು ಚಾಲನೆ ನೀಡಿದ್ದರು. ಕರ್ನಾಟಕದಲ್ಲಿ ವಂದೇ ಭಾರತ್ ರೈಲಿಗೆ ಕಲ್ಲು ತೂರಿರುವುದು ಇದು ಮೂರನೇ ಬಾರಿಯಾಗಿದ್ದು, 2023ರ ಫೆಬ್ರವರಿ 25ರಂದು ಬೆಂಗಳೂರಿನಲ್ಲಿ ನಡೆದ ಕಲ್ಲು ತೂರಾಟದಲ್ಲಿ ಚೆನ್ನೈ-ಮೈಸೂರು ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳ ಆರು ಬದಿಯ ಕಿಟಕಿಗಳು ಹಾನಿಗೊಳಗಾಗಿದ್ದವು.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net