More

    ನಿರುದ್ಯೋಗ, ಹಣದುಬ್ಬರದ ಪರಿಸ್ಥಿತಿಯಲ್ಲಿ ಎನ್​ಆರ್​ಸಿ, ಎನ್​ಪಿಆರ್​ ವಿಚಾರದಲ್ಲಿ ಬಿಜೆಪಿ ಮೊಂಡುತನ ಬಿಡಬೇಕು: ಮಾಯಾವತಿ

    ಲಖನೌ: ಕೇಂದ್ರ ಮತ್ತು ರಾಜ್ಯದಲ್ಲಿರುವ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ, ರಾಷ್ಟ್ರೀಯ ಪೌರತ್ವ ನೋಂದಣಿ(ಎನ್​ಆರ್​ಸಿ) ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ(ಎನ್​ಪಿಆರ್​) ವಿಚಾರದಲ್ಲಿ ಬಿಜೆಪಿ ತನ್ನ ಮೊಂಡುತನವನ್ನು ಬಿಡಬೇಕೆಂದು ಒತ್ತಾಯಿಸಿದ್ದಾರೆ. ಅಲ್ಲದೆ, ಬಿಜೆಪಿ ನಡೆದ ಹಾದಿಯಲ್ಲೇ ಈ ಹಿಂದಿನ ಕಾಂಗ್ರೆಸ್​ ಸರ್ಕಾರ ನಡೆದಿತ್ತು ಎಂದು ಕಾಂಗ್ರೆಸ್​ ಅನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

    ಹುಟ್ಟುಹಬ್ಬ ದಿನವಾದ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹಿಂದಿನ ಕಾಂಗ್ರೆಸ್​ ಸರ್ಕಾರದ ಹಾದಿಯನ್ನೇ ಅನುಸರಿಸಿದೆ. ರಾಜಕೀಯ ಲಾಭಕ್ಕಾಗಿ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಸರ್ಕಾರದ ತಪ್ಪು ನೀತಿಗಳು ದೇಶಾದ್ಯಂತ ಕಲಹ ಸೃಷ್ಟಿಸಿ ಕಾನೂನು ಸುವ್ಯವಸ್ಥೆಗೆ ಭಂಗ ಉಂಟುಮಾಡಿವೆ. ಇದು ರಾಷ್ಟ್ರದ ಕಾಳಜಿಯ ವಿಚಾರವಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

    ಹಿಂದೊಮ್ಮೆ ಕಾಂಗ್ರೆಸ್​ ಕೂಡ ದೇಶದಲ್ಲಿ ಇದೇ ಪರಿಸ್ಥಿತಿಯನ್ನು ನಿರ್ಮಾಣ ಮಾಡಿತ್ತು. ಹೀಗಾಗಿ ಜನರು ಅವರಿಗೆ ಮನೆ ಕಡೆ ದಾರಿ ತೋರಿದರು ಎಂದು ಕಾಂಗ್ರೆಸ್​ ಕಾಲೆಳೆದರು.

    ದೇಶವು ನಿರುದ್ಯೋಗ ಹಾಗೂ ಹಣದುಬ್ಬರದ ಪರಿಸ್ಥಿತಿಯನ್ನು ಎದುರಿಸುತ್ತಿರುವ ಸಮಯದಲ್ಲಿ ಎನ್​ಆರ್​ಸಿ ಮತ್ತು ಎನ್​ಪಿಆರ್​ ವಿಚಾರದಲ್ಲಿ ಬಿಜೆಪಿ ತನ್ನ ಮೊಂಡುತನ ಬಿಡಬೇಕು. ಪ್ರಧಾನಿ ಮೋದಿ ಸರ್ಕಾರ ಬಂಡವಾಳಶಾಹಿಗಳ ಪರವಾಗಿದೆ ಎಂದು ಮಾಯಾವತಿ ಆರೋಪಿಸಿದ್ದಾರೆ.

    ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರ ಬಡವರು ವಿರುದ್ಧವಾಗಿ ಕೆಲಸ ಮಾಡುತ್ತಿದೆ. ಜನರ ನಡುವೆ ಹೆಚ್ಚು ಒತ್ತಡ ಮತ್ತು ನಿರುದ್ಯೋಗ ಹರಡುವ ಕೆಲಸವನ್ನು ಮಾತ್ರ ಬಿಜೆಪಿ ಮಾಡುತ್ತಿದೆ ಎಂದು ಕಿಡಿಕಾಡಿದ್ದಾರೆ. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts