More

    ಅಕ್ರಮ ಮರಳು ಗಣಿಗಾರಿಕೆ ತಡೆಯಿರಿ

    ಶಿರಸಿ: ಮರಳು ಗಣಿಗಾರಿಕೆ ಕುರಿತು ಶಿರಸಿ ಉಪವಿಭಾಗಾಧಿಕಾರಿ ದೇವರಾಜ್ ಆರ್ ನಗರದ ಮಿನಿ ವಿಧಾನಸೌಧದಲ್ಲಿ ಮಂಗಳವಾರ ಅಧಿಕಾರಿಗಳ ಸಭೆ ನಡೆಸಿದರು.

    ಶಿರಸಿ ಉಪ ವಿಭಾಗದ ತಾಲೂಕುಗಳ ಮರಳು ಗಣಿಗಾರಿಕೆ ಸಮಿತಿಯ ಎಲ್ಲಾ ಸದಸ್ಯರು ಪ್ರತಿ ತಿಂಗಳು ಸಭೆ ಕರೆದು, ಅಕ್ರಮ ಮರಳು ಗಣಿಗಾರಿಕೆ ತಡೆಯಲು ಸ್ಥಳ ತನಿಕೆ ಕೈಗೊಳ್ಳಬೇಕು.

    ತಾಲೂಕಿನಲ್ಲಿ ಅಕ್ರಮವಾಗಿ ಮರಳು ಸಾಗಾಣಿಕೆ ಆಗುತ್ತಿರುವ ಕುರಿತು ನಿಗಾವಹಿಸಿ, ಅಕ್ರಮ ಮರಳು ಸಾಗಾಣಿಕೆ ತಡೆಯಬೇಕು. ಹಾಗೂ ಅಂತಹ ಪ್ರಕರಣಗಳಲ್ಲಿ ಕಾನೂನಾತ್ಮಕವಾಗಿ ಕ್ರಮ ವಹಿಸಿ ದಂಢ ವಿಧಿಸಬೇಕು ಎಂದು ಸೂಚಿಸಿದರು.

    ಮರಳು ಸಾಗಾಣಿಕೆ ವಾಹನಗಳನ್ನು ಪರಿಶೀಲಿಸಿ ನೈಜತೆಯ ದಾಖಲೆಗಳನ್ನು ಪಡೆಯಬೇಕು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಾಗೂ ತಾಲ್ಲೂಕಿನಲ್ಲಿ ಮರಳು ಗಣಿ ಗಾರಿಕೆ ಪ್ರದೇಶವನ್ನ ಗುರುತಿಸಿ, ಈ ಕುರಿತು ಗಣಿ ಮತ್ತು ಭೂವಿಜ್ಞಾನ ಇಲಾಖೆ ಕಾರವಾರ ಅವರಿಗೆ ಮಾಹಿತಿ ನೀಡಬೇಕು. ಕಾನೂನಾತ್ಮಕ ದಂಡ ವಿಧಿಸಿ ಪ್ರಕರಣ ದಾಖಲಿಸಲು ಕ್ರಮ ವಹಿಸಬೇಕು ಎಂದು ಸೂಚಿಸಿದರು.

    ಗಣಿ ಮತ್ತು ಭೂವಿಜ್ಞಾನ ಇಲಾಖೆ ಅವರಿಂದ ತಾಲೂಕಿನಲ್ಲಿ ಅನುಮತಿ ಪಡೆದು ಮರಳು ಗಣಿಗಾರಿಕೆ ಪ್ರದೇಶದ ಹಾಗೂ ಇತರೆ ವಿವರವನ್ನು ಪಡೆದುಕೊಳ್ಳಬೇಕು ಎಂದು ಸೂಚಿಸಿದರು. ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts