More

  ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ!

  ತರೀಕೆರೆ: ಪ್ಲಾಸ್ಟಿಕ್ ತ್ಯಾಜ್ಯದಿಂದ ಪರಿಸರಕ್ಕೆ ಹಾನಿ ಉಂಟಾಗಲಿದೆ ಎಂದು ಪುರಸಭೆ ಪರಿಸರ ಇಂಜಿನಿಯರ್ ತಾಹೀರಾ ತಸ್ನೀಮ್ ಹೇಳಿದರು.

  ಮಂಗಳವಾರ ಪಟ್ಟಣದ ಕನಕ ಭವನದಲ್ಲಿ ಪುರಸಭೆಯಿಂದ ಏಕ ಬಳಕೆ ಪ್ಲಾಸ್ಟಿಕ್‌ನಿಂದಾಗುವ ದುಷ್ಪರಿಣಾಮಗಳ ಕುರಿತು ಪೌರ ಕಾರ್ಮಿಕರಿಗೆ ಅರಿವು ಮೂಡಿಸಲು ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.
  ಸರ್ಕಾರ ಅಪಾಯಕಾರಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಿದರೂ ಅಂಗಡಿಗಳಲ್ಲಿ ಬಳಕೆ ಮಾತ್ರ ತಪ್ಪಲಿಲ್ಲ. ದಂಡ ವಿಧಿಸಿ ಎಚ್ಚರಿಕೆ ನೀಡಿದರೂ, ವ್ಯಾಪಾರಸ್ಥರು ಹಾಗೂ ಗ್ರಾಹಕರಿಗೆ ಪ್ಲಾಸ್ಟಿಕ್ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡದಂತಾಗಿರುವುದು ದುರ್ದೈವದ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.
  ಕಾರ್ಯಾಗಾರದಲ್ಲಿ ವಿವಿಧ ಶಾಲಾ ಮಕ್ಕಳಿಗೆ ಪ್ಲಾಸ್ಟಿಕ್ ತ್ಯಾಜ್ಯದಿಂದ ಮಾದರಿ ತಯಾರಿಸುವ ಸ್ಪರ್ಧೆ ಏರ್ಪಡಿಸಲಾಗಿತ್ತು. ಪುರಸಭೆ ಉಪಾಧ್ಯಕ್ಷೆ ರಿಹಾನಾ ಪರ್ವೀನ್, ಸದಸ್ಯರಾದ ಟಿ.ದಾದಾಪೀರ್, ಪಾರ್ವತಮ್ಮ, ಮುಖ್ಯಾಧಿಕಾರಿ ಎಚ್.ಪ್ರಶಾಂತ್, ಹಿರಿಯ ಆರೋಗ್ಯ ನಿರೀಕ್ಷಕ ಮಹೇಶ್ವರಪ್ಪ ಇತರರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts