More

    ಯದುವೀರರ ‘ರಾಜರ ಕತೆಗಳು’ ಕಾರ್ಯಕ್ರಮಕ್ಕೆ ತಡೆ ನೀಡಿ

    ಮೈಸೂರು: ಇತಿಹಾಸ ಕುರಿತ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಘೋಷಿತ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಖಾಸಗಿ ರೇಡಿಯೋದಲ್ಲಿ ನಡೆಸಿಕೊಡುವ ರಾಜರ ಕತೆಗಳು ಕಾರ್ಯಕ್ರಮಕ್ಕೆ ಚುನಾವಣೆ ಮುಗಿಯುವವರೆಗೆ ತಡೆ ನೀಡುವಂತೆ ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
    ಅಭ್ಯರ್ಥಿಯಾಗಿ ಘೋಷಿಸಿರುವ ಯದುವೀರ ಮೈಸೂರು ಸಂಸ್ಥಾನದ ಇತಿಹಾಸದ ಬಗ್ಗೆ ಸಂದರ್ಶನದ ರೂಪದಲ್ಲಿ ರಾಜರಿಂದಲೇ ರಾಜರ ಕಥೆಗಳು ಎಂಬ ಶೀರ್ಷಿಕೆಯಲ್ಲಿ ಮಾತನಾಡುತ್ತಾರೆ. ರೇಡಿಯೋದಲ್ಲಿ ಮಾತನಾಡುವ ಬಗ್ಗೆ ಕ್ಷಣ ಕ್ಷಣಕ್ಕೂ ಜಾಹೀರಾತು ಪ್ರಸಾರಗೊಳ್ಳುತ್ತಿದೆ ಎಂದು ತಿಳಿಸಿದ್ದಾರೆ.
    ಒಬ್ಬ ವ್ಯಕ್ತಿಯಾಗಿ ರಾಜರ ಬಗ್ಗೆ ಮಾತನಾಡುವುದರಲ್ಲಿ ತಪ್ಪಿಲ್ಲ. ಆದರೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವುದರಿಂದ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆಗುತ್ತದೆ. ಅಲ್ಲದೇ ಯದುವೀರ ಅವರ ಮಾತುಗಳು ಮತದಾರರ ಮೇಲೆ ಪರಿಣಾಮ ಬೀರುವುದರಿಂದ ಕೂಡಲೇ ರೇಡಿಯೋದಲ್ಲಿ ಕಾರ್ಯಕ್ರಮ ಪ್ರಸಾರವಾಗದಂತೆ ನಿರ್ಬಂಧನೆ ವಿಧಿಸಬೇಕೆಂದು ಒತ್ತಾಯಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts