ಶಾಂತಾರಾಮ್ ಸಾಹಿತ್ಯ ಪ್ರಶಸ್ತಿಗೆ ದಯಾನಂದರ ‘ಬುದ್ಧನ ಕಿವಿ’ ಕೃತಿ ಆಯ್ಕೆ

dayananda
Published on

ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರದ ಭಂಡಾರ್ಕರ್ಸ್‌ ಕಾಲೇಜು ಪ್ರತಿವರ್ಷ ಕೊಡಮಾಡುವ ಡಾ.ಎಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿಗೆ ಕತೆಗಾರ ದಯಾನಂದ ಅವರ ‘ಬುದ್ಧನ ಕಿವಿ’ ಕಥಾ ಸಂಕಲನ ಆಯ್ಕೆಯಾಗಿದೆ.

ಪ್ರಶಸ್ತಿಯು 15 ಸಾವಿರ ರೂಪಾಯಿ ನಗದು ಹಾಗೂ ಬೆಳ್ಳಿ ಫಲಕವನ್ನು ಒಳಗೊಂಡಿದೆ. ಲೇಖಕರಾದ ಎಚ್.ಆರ್. ಸುಜಾತ, ಪ್ರೊ. ಕೆ. ಫಣಿರಾಜ್, ಟಿ.ಎಸ್. ಗೊರವರ ಅವರು ನಿರ್ಣಾಯಕ ಸಮಿತಿಯ ಸದಸ್ಯರಾಗಿದ್ದರು.

ಕುಂದಾಪುರದ ಭಂಡಾರ್ಕರ್ಸ್‌ ಕಾಲೇಜಿನಲ್ಲಿ ನಡೆಯುವ ಸಾಹಿತ್ಯ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಪ್ರಶಸ್ತಿ ಆಯ್ಕೆ ಸಮಿತಿಯು ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net