More

    ಜಿಲ್ಲೆಯಲ್ಲಿ ಎಸ್‌ಸಿಪಿ, ಟಿಎಸ್‌ಪಿ ಯೋಜನೆಯ ಅನುದಾನ ಬಳಸಲು ಉದಾಸೀನ

    ತುಮಕೂರು: ಜಿಲ್ಲೆಯಲ್ಲಿ ಎಸ್‌ಸಿಪಿ, ಟಿಎಸ್‌ಪಿ ಯೋಜನೆಯ ಸಾಕಷ್ಟು ಹಣ ಖರ್ಚು ಮಾಡಲು ಅಧಿಕಾರಿಗಳು ಉದಾಸೀನತೆ ತೋರುತ್ತಿರುವ ವಿಷಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಎಸ್‌ಸಿಪಿ, ಟಿಎಸ್‌ಪಿ ಯೋಜನೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಬಹಿರಂಗವಾಯಿತು.

    2019-20ನೇ ಸಾಲಿನ ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿ ನಿಗದಿತ ಪ್ರಗತಿ ಸಾಧಿಸದ ಮಧುಗಿರಿ ಪಂಚಾಯತ್ ರಾಜ್ ಇಲಾಖೆ, ಕೊಳೆಗೇರಿ ಅಭಿವೃದ್ಧಿ ಮಂಡಳಿ ಹಾಗೂ ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆಗಳಿಗೆ ನೋಟಿಸ್ ಜಾರಿಮಾಡುವಂತೆ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ಕುಮಾರ್ ಸೂಚಿಸಿದರು.

    ಲೋಕೋಪಯೋಗಿ ಇಲಾಖೆ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಶಿಕ್ಷಣ, ಕೈಮಗ್ಗ ಮತ್ತು ಜವಳಿ ಇಲಾಖೆ, ಸಹಕಾರ ಇಲಾಖೆಗಳು ನಿಗದಿತ ಪ್ರಮಾಣದ ಪ್ರಗತಿ ಸಾಧಿಸಿವೆ ಎಂದು ಹೇಳಿದರು.
    ಕರೊನಾ ನೆಪದಲ್ಲಿ ಸುಮ್ಮನೆ ಕೂತರೆ ಅಭಿವೃದ್ಧಿ ನಡೆಯುವುದಾದರೂ ಹೇಗೆ ಎಂದು ಪ್ರಶ್ನಿಸಿದ ಜಿಲ್ಲಾಧಿಕಾರಿ, ಪ್ರಗತಿ ಕುಂಠಿತವಾಗದಂತೆ ಹೆಚ್ಚಿನ ಗಮನಹರಿಸುವಂತೆ ಸೂಚಿಸಿದರು.

    ಪಾಲಿಕೆಯಲ್ಲಿ ಸೇವೆ ಸಲ್ಲಿಸುತ್ತಿರುವ ವಾಟರ್‌ಮ್ಯಾನ್, ಚಾಲಕರು ಸೇರಿ ಸುಮಾರು 500 ರೂ.ನೇರ ಪಾವತಿ/ನೇರ ನೇಮಕಾತಿ ಪೌರಕಾರ್ಮಿಕರಿಗೆ 12 ಕೋಟಿ ರೂ. ಸಂಭವನೀಯ ಮೊತ್ತದ 70 ಲಕ್ಷ ರೂ.ಪ್ರೀಮಿಯಂ ಹಣದ ವಿಮಾ ಸೌಲಭ್ಯ ಒದಗಿಸಿಕೊಡಲಾಗಿದೆ ಎಂದು ಪಾಲಿಕೆ ಆರೋಗ್ಯಾಧಿಕಾರಿ ಡಾ.ನಾಗೇಶ್ ಮಾಹಿತಿ ನೀಡಿದರು.ಸಫಾಯಿ ಕರ್ಮಚಾರಿಗಳ ರಾಜ್ಯ ಮಟ್ಟದ ಸದಸ್ಯ ಓಬಳೇಶ್ ವಿವಿಧ ಸಮಸ್ಯೆಗಳ ಬಗ್ಗೆ ಗಮನ ಸೆಳೆದರು. ಉಪವಿಭಾಗಾಧಿಕಾರಿಗಳಾದ ಅಜಯ್, ನಂದಿನಿ, ನಂದಿನಿದೇವಿ, ಎಲ್ಲ ತಾಲೂಕುಗಳ ತಹಸೀಲ್ದಾರ್ ಇತರರಿದ್ದರು.

    ವಿವಿಧ ಪ್ರಕರಣಗಳ ಸಂತ್ರಸ್ತರಿಗೆ ಪರಿಹಾರ ವಿತರಣೆ: ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಯ 25 ಹಾಗೂ ಪರಿಶಿಷ್ಟ ಪಂಗಡದ 4 ಸೇರಿ ಒಟ್ಟು 29 ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು, ಸಂತ್ರಸ್ತರಿಗೆ 37ಲಕ್ಷ ರೂ. ಪರಿಹಾರ ವಿತರಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಜೆಡಿ ಪ್ರೇಮನಾಥ್ ತಿಳಿಸಿದರು. ಎಸ್ಸಿಯ 45 ಹಾಗೂ ಎಸ್ಟಿಯ 13 ಸೇರಿ ಜಾತಿ ನಿಂದನೆ, ಹಲ್ಲೆ, ಅತ್ಯಾಚಾರ, ಅಪಹರಣ, ಲೈಂಗಿಕ ಕಿರುಕುಳ, ಮಾನಸಿಕ ಹಲ್ಲೆಗೊಳಗಾದ ಒಟ್ಟು 58 ಸಂತ್ರಸ್ತರಿಗೆ ಈ ಪರಿಹಾರ ನೀಡಲಾಗಿದೆ ಎಂದರು. ಕಳೆದ ವರ್ಷದಲ್ಲಿ ಶಿರಾ, ಕೊರಟಗೆರೆ, ಕುಣಿಗಲ್ ತಾಲೂಕುಗಳಲ್ಲಿ ಕೇವಲ ಒಂದೇ ಒಂದು ದಲಿತರ ಕುಂದುಕೊರತೆ ಸಭೆ ನಡೆಸಲಾಗಿದೆ. ಸಭೆ ನಡೆಸದ ತಹಸೀಲ್ದಾರರಿಗೆ ಎಚ್ಚರಿಕೆ ನೋಟಿಸ್ ನೀಡಲು ಜಿಲ್ಲಾಧಿಕಾರಿ ಸೂಚಿಸಿದರು.ಸ್.ಎನ್.ನರಸಿಂಹಮೂರ್ತಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts