ಬೀದಿನಾಯಿಗಳ ಕಾಟ

Latest News

ಶಾಸಕ ತನ್ವೀರ್​ ಸೇಠ್​ಗೆ ಭದ್ರತೆ ಹೆಚ್ಚಳ ಮಾಡಿದ ಸರ್ಕಾರ: 24 ತಾಸು 3 ಪಾಳಿಗಳಲ್ಲಿ ಗನ್​ಮ್ಯಾನ್​ ಭದ್ರತೆ

ಮೈಸೂರು: ತೀವ್ರ ಹಲ್ಲೆ ಹಿನ್ನೆಲೆಯಲ್ಲಿ ಶಾಸಕ ತನ್ವೀರ್​ ಸೇಠ್​ಗೆ ಒದಗಿಸಿದ್ದ ಭದ್ರತೆಯನ್ನು ಮೂರುಪಟ್ಟು ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ದಿನದ 24 ತಾಸು...

ಸಿನಿಮಾದಂತೆ ರಾಜಕೀಯದಲ್ಲೂ ಮೋಡಿ ಮಾಡಲು ರಜಿನಿ-ಕಮಲ್​ ಸಜ್ಜು: ತ.ನಾಡು ಪಾಲಿಟಿಕ್ಸ್​ ಬಗ್ಗೆ ಮಹತ್ತರ ಸುಳಿವು ನೀಡಿದ ನಟದ್ವಯರು!

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಭಾರಿ ಬದಲಾವಣೆಯಾಗುವ ಮುನ್ಸೂಚನೆ ಕಾಣುತ್ತಿದೆ. ಅದಕ್ಕೆ ಕಾರಣ ನಟನೆಯಿಂದ ರಾಜಕೀಯಕ್ಕೂ ಹೊರಳಿರುವ ರಜನಿಕಾಂತ್​ ಮತ್ತು ಕಮಲ್​ ಹಾಸನ್​ ಎಂಬುದೇ...

ಕೆಪಿಎಲ್​ ಮ್ಯಾಚ್​ ಫಿಕ್ಸಿಂಗ್ ಹಗರಣ: ಇಂದು 7 ತಂಡಗಳ ಮಾಲೀಕರ ವಿಚಾರಣೆ ನಡೆಸಲಿರುವ ಸಿಸಿಬಿ

ಬೆಂಗಳೂರು: ಕರ್ನಾಟಕ ಪ್ರಿಮೀಯರ್​ ಲೀಗ್​ ಕ್ರಿಕೆಟ್​ ಮ್ಯಾಚ್​ ಫಿಕ್ಸಿಂಗ್​ ಹಗರಣದ ವಿಚಾರಣೆಗೆ 7 ತಂಡಗಳ ಮಾಲೀಕರು ಇಂದು ಹಾಜರಾಗಲಿದ್ದಾರೆ. ಕೆಪಿಎಲ್​ನ 7 ತಂಡಗಳ ಮಾಲೀಕರು...

ವಿವಸ್ತ್ರಗೊಳಿಸಿ ಕ್ರಿಶ್ಚಿಯನ್​ ದಂಪತಿ ಮೇಲೆ ದೌರ್ಜನ್ಯ: ವೈರಲ್​ ಫೋಟೋ ಹಿಂದಿನ ಅಸಲಿಯತ್ತು ಫ್ಯಾಕ್ಟ್​ಚೆಕ್​ನಲ್ಲಿ ಬಹಿರಂಗ!

ನವದೆಹಲಿ: ಸಾರ್ವಜನಿಕ ಸ್ಥಳವೊಂದರಲ್ಲಿ ದಂಪತಿಯು ಮಗುವನ್ನು ಹಿಡಿದುಕೊಂಡು ಬೆತ್ತಲೆಯಾಗಿ ನಿಂತಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಕೆಲ ದಿನಗಳಿಂದ ವೈರಲ್​ ಆಗಿದೆ. ಇದರ ಬಗ್ಗೆ...

ಉಪ ಚುನಾವಣೆ ರಣತಂತ್ರ ರೂಪಿಸಲು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿಂದು ಬಿಜೆಪಿ ಮಹತ್ವದ ಸಭೆ

ಬೆಂಗಳೂರು: ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲ್ಲಲು ಅನುಸರಿಸಬೇಕಾದ ತಂತ್ರಗಳ ಬಗ್ಗೆ ಬಿಜೆಪಿ ಕಚೇರಿಯಲ್ಲಿ ಇಂದು ಮಹತ್ವದ ಸಭೆ ನಡೆಯಲಿದೆ. ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರ...

<<<ಪಾರ್ಕ್‌ನಲ್ಲಿ ಬಾಲಕಿಗೆ ಕಚ್ಚಿದ ಬೀದಿನಾಯಿ * ಪೋಷಕರೇ ಎಚ್ಚರ ವಹಿಸಿ >>>

ಅವಿನ್ ಶೆಟ್ಟಿ, ಉಡುಪಿ
ನಗರದಲ್ಲಿ ಬೀದಿನಾಯಿಗಳ ಉಪಟಳದಿಂದ ಸಾರ್ವಜನಿಕರಿಗೆ ತೀವ್ರ ಕಿರಿಕಿರಿಯಾಗುತ್ತಿದ್ದು, ಶನಿವಾರ ಅಜ್ಜರಕಾಡು ಪಾರ್ಕ್‌ನಲ್ಲಿ ಆಟವಾಡುತ್ತಿದ್ದ ಬಾಲಕಿಗೆ ಬೀದಿನಾಯಿ ಕಚ್ಚಿರುವುದು ನಗರದ ಜನರಲ್ಲಿ ಆತಂಕ ಹೆಚ್ಚಿಸಿದೆ.

ಬಾಲಕಿಗೆ ಬೀದಿನಾಯಿ ಕಚ್ಚಿದ ಪ್ರಕರಣ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಬೀದಿನಾಯಿಗಳಿಂದ ಸಾರ್ವಜನಿಕರಿಗೆ ಸಾಕಷ್ಟು ತೊಂದರೆಯುಂಟಾಗುತ್ತಿದೆ ಬೀದಿನಾಯಿಗಳ ನಿಯಂತ್ರಣಕ್ಕೆ ನಗರಸಭೆ ನಿರ್ಲಕ್ಷೃ ವಹಿಸುತ್ತಿದೆ ಎಂದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಡುಪಿ ನಗರ, ಬೀಡಿನಗುಡ್ಡೆ ಭಾಗದಲ್ಲಿ ಮಕ್ಕಳನ್ನು ಅಟ್ಟಿಸಿಕೊಂಡು ಬರುವುದು, ಕಚ್ಚಿರುವ ನಿದರ್ಶನಗಳು ಸಾಕಷ್ಟು ಇವೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.

ಮಿಷನ್ ಕಾಂಪೌಂಡ್, ಅಜ್ಜರಕಾಡು ಭುಜಂಗಪಾರ್ಕ್, ಚಿಟ್ಪಾಡಿ ಸರ್ಕಲ್, ಬನ್ನಂಜೆ, ಸಿಟಿ ಬಸ್ ನಿಲ್ದಾಣ, ಸರ್ವೀಸ್ ಬಸ್ ನಿಲ್ದಾಣ, ಕೆಎಂ ಮಾರ್ಗದಲ್ಲಿ ರಾತ್ರಿಹೊತ್ತು ಬೀದಿನಾಯಿಗಳು ಗುಂಪುಗುಂಪಾಗಿ ಓಡಾಡುತ್ತಿವೆ. ಕಲ್ಮಾಡಿ, ಆದಿ ಉಡುಪಿ, ಸಂತೆಕಟ್ಟೆ, ಕಲ್ಯಾಣಪುರದಲ್ಲಿ ಬೀದಿನಾಯಿಗಳ ಕಾಟ ಹೆಚ್ಚಿದೆ. ರಾತ್ರಿ ವೇಳೆ ನಾಯಿಗಳ ಕರ್ಕಶ ಬೊಗಳುವಿಕೆ, ಕಚ್ಚಾಟ, ರಂಪಾಟದಿಂದ ಪರಿಸರದಲ್ಲಿ ಅಸಹ್ಯ ವಾತಾವರಣ ನಿರ್ಮಾಣವಾಗುತ್ತಿದೆ. ಮನೆಗಳಿಗೆ ನುಗ್ಗಿ ಚಪ್ಪಲಿಯನ್ನು ದೂರಕ್ಕೆ ಕೊಂಡೊಯ್ದು ಚಪ್ಪಲಿಗಳಿಗೆ ಹಾನಿ ಮಾಡುವುದು, ಮನೆ ಹೊರಾಂಗಣದಲ್ಲಿ ಒಣ ಹಾಕಿರುವ ಬಟ್ಟೆಗಳನ್ನು ಬಾಯಲ್ಲಿ ಕಚ್ಚಿ ಹರಿದು ಹಾಕುವುದು ನಗರದಲ್ಲಿ ಸಾಮಾನ್ಯವಾಗಿದೆ. ಇದರಿಂದ ನಾಗರಿಕರು ಬೇಸತ್ತು ಹೋಗಿದ್ದಾರೆ.

ವಲಸೆ ಬರುವ ನಾಯಿಗಳು: ನಗರಸಭೆ ವತಿಯಿಂದ ಬೀದಿನಾಯಿಗಳನ್ನು ಹಿಡಿದು ಸಾಕಷ್ಟು ಭಾರಿ ಸಂತಾನ ಶಕ್ತಿ ಹರಣ ಚಿಕಿತ್ಸೆ ನಡೆಸಲಾಗಿದೆ. ಆದರೂ ನಾಯಿಗಳ ಸಂಖ್ಯೆ ಹೆಚ್ಚುತ್ತಲೇ ಇದೆ ಎಂದು ಸಾರ್ವಜನಿಕರ ಆರೋಪ. ಗ್ರಾಮಾಂತರ ಪ್ರದೇಶಗಳಿಂದ ನಾಯಿಗಳು ಆಹಾರ ಅರಸುತ್ತ ನಗರ ಪ್ರದೇಶದತ್ತ ವಲಸೆ ಬರುತ್ತವೆ. ಇಲ್ಲಿಯೇ ಮರಿ ಹಾಕುತ್ತವೆ. ಈ ನಿಟ್ಟಿನಲ್ಲಿ ನಾವು ಎಷ್ಟೇ ಸಂತಾನಶಕ್ತಿ ಹರಣ ಚಿಕಿತ್ಸೆ ನೀಡಿದರೂ ನಗರದಲ್ಲಿ ನಾಯಿಗಳ ಸಂಖ್ಯೆ ನಿಯಂತ್ರಣಕ್ಕೆ ಸವಾಲಾಗಿದೆ ಎನ್ನುತ್ತಾರೆ ಅಧಿಕಾರಿಗಳು.

ಪಾಲನಾ ಕೇಂದ್ರ ನನೆಗುದಿಗೆ ?: ಸ್ವಚ್ಛ ಉಡುಪಿ ಮಿಶನ್ ಯೋಜನೆ ಅಡಿಯಲ್ಲಿ ಬೀದಿ ನಾಯಿ ಪಾಲನೆ ಮತ್ತು ಸಂರಕ್ಷಣಾ ಕೇಂದ್ರ ನಿರ್ಮಿಸುವ ಪ್ರಸ್ತಾವನೆ ಇದ್ದರೂ ಅದೀಗ ನನೆಗುದಿಗೆ ಬಿದ್ದಿದೆ. ಯಾವ ಅಧಿಕಾರಿಗ ಮತ್ತು ಜನಪ್ರತಿನಿಧಿಗಳು ಈ ಬಗ್ಗೆ ಗಂಭೀರವಾಗಿ ಆಲೋಚಿಸಿಲ್ಲ. ಸಮಸ್ಯೆ ಶಾಶ್ವತವಾಗಿ ಬಗೆಹರಿಸಬೇಕಂದರೆ ಬೀದಿ ನಾಯಿ ಪಾಲನೆ ಮತ್ತು ಸಂರಕ್ಷಣಾ ಕೇಂದ್ರ ಅಗತ್ಯವಾಗಿ ಬೇಕಿದೆ. ನಗರದ ಹೊರ ವಲಯದಲ್ಲಿ ಸುಸಜ್ಜಿತ ಪಾಲನಾ ಕೇಂದ್ರ ನಿರ್ಮಿಸಿದರೆ ಸಾರ್ವಜನಿಕರಿಗೂ ಉಪಟಳ ಇರುವುದಿಲ್ಲ, ನಗರವು ಸ್ವಚ್ಛವಾಗಿರುತ್ತದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅಜ್ಜರಕಾಡು ಭುಜಂಗಪಾರ್ಕ್‌ನಲ್ಲಿ ಶನಿವಾರ ಆಟವಾಡುತ್ತಿದ್ದ ಬಾಲಕಿಗೆ ಬೀದಿ ನಾಯಿ ಕಚ್ಚಿ ಗಾಯಗೊಳಿಸಿದೆ. ಪರಿಸರದಲ್ಲಿ ಹುಚ್ಚು ನಾಯಿ ಇರುವ ಮಾಹಿತಿ ಇದ್ದು, ಹಲವಾರು ನಾಯಿಗಳಿಗೆ ಕಚ್ಚಿರುವ ಸಂಭವ ಇದೆ. ರಜೆ ಇರುವುದರಿಂದ ಪಾರ್ಕ್‌ನಲ್ಲಿ ಹೆಚ್ಚು ಜನರು, ಮಕ್ಕಳು ಬರುತ್ತಾರೆ. ನಗರದಲ್ಲಿ ಬೀದಿ ನಾಯಿ ನಿಯಂತ್ರಣಕ್ಕೆ ಜಿಲ್ಲಾಡಳಿತ, ನಗರಸಭೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು.
– ವಿಶು ಶೆಟ್ಟಿ ಅಂಬಲಪಾಡಿ, ಸಾಮಾಜಿಕ ಕಾರ್ಯಕರ್ತ

- Advertisement -

Stay connected

278,614FansLike
572FollowersFollow
610,000SubscribersSubscribe

ವಿಡಿಯೋ ನ್ಯೂಸ್

VIDEO: ಹೆಬ್ಬಾವು-ಚಿರತೆ ನಡುವಿನ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...

VIDEO| ಶಾಸಕ ತನ್ವೀರ್​...

ಮೈಸೂರು: ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್​ ವಿಚಾರಣೆಯ ವೇಳೆ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ತನ್ವೀರ್‌ ಸೇಠ್ ಹತ್ಯೆಗೆ ಈ ಹಿಂದೆ...

VIDEO: ಗೋಕಾಕ್​ ಕ್ಷೇತ್ರದಲ್ಲಿ...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...

ಕೇಂದ್ರ ಪರಿಸರ ಸಚಿವ...

ಬೆಂಗಳೂರು: ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ ನಿಯಂತ್ರಣಕ್ಕೆ ನಾನಾ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದೆ. ಆದರೂ, ವೈಯಕ್ತಿಕವಾಗಿ ಏನು ಮಾಡಬಹುದು ಎಂಬುದನ್ನು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ ಜಾವಡೇಕರ್ ತೋರಿಸಿದ್ದಾರೆ. ಅವರು...

ಜಗತ್ತಿನ ಮೊದಲ ಫೋಲ್ಡೆಬಲ್​...

ಬೀಜಿಂಗ್​: ಕಂಪ್ಯೂಟರ್ ಜಗತ್ತಿನಲ್ಲಿ ನಿತ್ಯವೂ ಹೊಸ ಹೊಸ ಉತ್ಪನ್ನಗಳು ಗ್ರಾಹಕರಿಗೆ ಪರಿಚಯಿಸಲ್ಪಡುತ್ತಲೇ ಇವೆ. ವರ್ಷದ ಹಿಂದೆ ಖರೀದಿಸಿದ ಉತ್ಪನ್ನ ಇಂದಿಗೆ ಔಟ್​ಡೇಟೆಡ್​ ಎನ್ನುವ ಮಟ್ಟಿಗೆ ಇದೆ ಈ ಬದಲಾವಣೆಯ ವೇಗ....

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...