More

    ಸಾಂಕ್ರಾಮಿಕಮುಕ್ತ ಸಮಾಜ ನಿರ್ಮಾಣಕ್ಕೆ ನಾಟಕ ಪ್ರದರ್ಶನ

    ವಿಜಯವಾಣಿ ಸುದ್ದಿಜಾಲ ನಂದಗುಡಿ
    ತಾಯಿ ಮತ್ತು ಮಕ್ಕಳ ಆರೋಗ್ಯ, ಸ್ವಚ್ಛತೆ, ಕ್ಷಯಮುಕ್ತ, ಮಲೇರಿಯಾಮುಕ್ತ ಭಾರತ ನಿರ್ಮಾಣಕ್ಕೆ ಆರೋಗ್ಯ ಇಲಾಖೆಯ ಎಲ್ಲ ಕಾರ್ಯಕ್ರಮಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದು ಮಹಿಳಾ ಸಬಲಿಕರಣ ಮತ್ತು ಕಲಾ ಸಂಘದ ಕಾರ್ಯದರ್ಶಿ ಮೀನಾಕ್ಷಿ ತಿಳಿಸಿದರು.
    ನಂದಗುಡಿಯ ಗಾಂಧಿ ಬಜಾರ್ ರಸ್ತೆಯಲ್ಲಿ ಬೆಂಗಳೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಸಬಲಿಕರಣ ಮತ್ತು ಕಲಾ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಆರೋಗ್ಯ ಕುರಿತು ಜಾಗೃತಿ ಬೀದಿ ನಾಟಕದಲ್ಲಿ ಮಾತನಾಡಿದರು.
    ಪ್ರತಿಯೊಬ್ಬರೂ ಶುಚಿತ್ವ ಹಾಗೂ ವೈಯುಕ್ತಿಕ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ದೇಶದ ಅಭಿವೃದ್ಧಿಯಲ್ಲಿ ಪ್ರತಿಯೊಬ್ಬ ಪ್ರಜೆಯ ಆರೋಗ್ಯವು ಪ್ರಮುಖ. ಸಾರ್ವಜನಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ತುರ್ತು ಸಂದರ್ಭಗಳಲ್ಲಿಯೂ ಆರೋಗ್ಯ ಇಲಾಖೆ ಉತ್ತಮ ಸೇವೆ ನೀಡುತ್ತಿದೆ ಎಂದರು.
    ಸರ್ಕಾರ ಜನರ ಆರೋಗ್ಯ ಸುಧಾರಣೆಗೆ ಹಲವಾರು ಯೋಜನೆ ರೂಪಿಸಿದೆ. ಇತ್ತೀಚಿನ ದಿನಗಳಲ್ಲಿ ಆಸ್ಪತ್ರೆಗಳಲ್ಲಿಯೇ ಹೆರಿಗೆ ಆಗುತ್ತಿರುವುದರಿಂದ ಶಿಶು ಮತ್ತು ತಾಯಿ ಮರಣ ನಿಯಂತ್ರಿಸಲು ಸಹಕಾರಿಯಾಗಿದೆ. ಅಂತೆಯೇ, ನಾಟಕ ಪ್ರದರ್ಶನದ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.
    ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಯೋಜನೆಯಡಿ ಸಿಗುವ ಸೌಲಭ್ಯಗಳು, ಸಾಂಕ್ರಮಿಕ ತಡೆಗೆ ಕ್ರಮ, ತಾಯಿ-ಶಿಶು ಆರೋಗ್ಯ, ಗರ್ಭಿಣಿಯರಿಗೆ ಸಿಗುವ ಸೌಲಭ್ಯ, ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮ ಮುಂತಾದ ವಿಷಯದ ಬಗ್ಗೆ ಅರಿವು ಮೂಡಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts