More

    ಅರಣ್ಯ ರಕ್ಷಣೆ ಜಾಗೃತಿಗಾಗಿ ಬೀದಿ ನಾಟಕ

    ಸೋಮವಾರಪೇಟೆ: ಕಾಳ್ಗಿಚ್ಚಿನಿಂದ ಅರಣ್ಯ ರಕ್ಷಣೆ ಬಗ್ಗೆ ಜನಜಾಗೃತಿ ಬೀದಿ ನಾಟಕವನ್ನು ಮಡಿಕೇರಿ ವನ್ಯಜೀವಿ ವಿಭಾಗ ಹಾಗೂ ಪುಷ್ಪಗಿರಿ ವನ್ಯಜೀವಿ ವಲಯದ ವತಿಯಿಂದ ಬುಧವಾರ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರದರ್ಶಿಸಲಾಯಿತು.

    ಕಾಲೇಜಿನ ಉಪಪ್ರಾಂಶುಪಾಲ ಬಸವರಾಜಪ್ಪ ಜಾಗೃತಿ ನಾಟಕಕ್ಕೆ ಚಾಲನೆ ನೀಡಿದರು. ಉಪವಲಯ ಅರಣ್ಯಾಧಿಕಾರಿ ಪಿ.ಟಿ.ಶಶಿ ಮಾತನಾಡಿ, ಅರಣ್ಯ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಅರಣ್ಯದಲ್ಲಿ ಸಾವಿರಾರು ಪ್ರಾಣಿ, ಪಕ್ಷಿ, ಜೀವಸಂಕುಲಗಳಿರುತ್ತವೆ. ಒಮ್ಮೆ ಬೆಂಕಿ ಬಿದ್ದರೆ, ಎಲ್ಲವೂ ಸತ್ತು ಹೋಗುತ್ತವೆ. ಬೆಂಕಿಯಿಂದ ಅರಣ್ಯ ರಕ್ಷಿಸುವ ಪ್ರತಿಜ್ಞೆ ಮಾಡಬೇಕು. ಅಲ್ಲದೆ ವಿದ್ಯಾರ್ಥಿಗಳು ಮನೆ ಹಾಗೂ ನೆರೆಹೊರೆಯವರಿಗೆ ಜಾಗೃತಿ ಮೂಡಿಸಬೇಕು ಎಂದರು.

    ಕಾಳ್ಗಿಚ್ಚಿನಿಂದ ಪರಿಸರಕ್ಕೆ ಆಗುವ ದುಷ್ಪರಿಣಾಮ, ಪ್ರಕೃತಿ ಅಸಮತೋಲನದ ಬಗ್ಗೆ ಮತ್ತು ಕಾಳ್ಗಿಚ್ಚಿನಿಂದ ಅರಣ್ಯ ರಕ್ಷಣೆ ಹಾಗೂ ಸಾರ್ವಜನಿಕ ಆಸ್ತಿ ರಕ್ಷಣೆಗೆ ತೆಗೆದುಕೊಳ್ಳುವ ಮುಂಜಾಗ್ರತಾ ಕ್ರಮಗಳನ್ನು ವಿವರಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts