21.5 C
Bengaluru
Friday, January 24, 2020

ರಸ್ತೆಯಲ್ಲಿ ತಗ್ಗು-ಗುಂಡಿ ಯಥೇಚ್ಚ

Latest News

ಏರಿಕೆಯಾಗದ ಫಾಸ್ಟ್​ಟ್ಯಾಗ್​ ಪಾವತಿ ಕಡ್ಡಾಯಗೊಳಿಸಿದರೂ ಪ್ರಯೋಜನವಿಲ್ಲ; ನಗದು ಪಾವತಿಯೇ ಹೆಚ್ಚು! 

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಟೋಲ್ ಪ್ಲಾಜಾಗಳಲ್ಲಿ ಫಾಸ್ಟ್​ಟ್ಯಾಗ್​ ಮೂಲಕ ಟೋಲ್ ಪಾವತಿ ಕಡ್ಡಾಯಗೊಳಿಸಿದರೂ ಶುಲ್ಕ ಸಂಗ್ರಹ ಪ್ರಮಾಣ ಏರಿಕೆಯಾಗಿಲ್ಲ. ಫಾಸ್ಟ್​ಟ್ಯಾಗ್​ಗಿಂಥ ಮೊದಲು ಸಂಗ್ರಹವಾಗುತ್ತಿದ್ದಷ್ಟೇ ನಗದು ರೂಪದಲ್ಲಿ ಶುಲ್ಕ...

ಗಣರಾಜ್ಯೋತ್ಸವ| ಚೀನಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ಈ ಬಾರಿ ಗಣರಾಜ್ಯೋತ್ಸವ ಆಚರಣೆ ಇಲ್ಲ!

ಬೀಜಿಂಗ್: ಚೀನಾದಲ್ಲಿರುವ ಇಂಡಿಯನ್ ಎಂಬೆಸ್ಸಿಯಲ್ಲಿ ಈ ವರ್ಷ ಗಣರಾಜ್ಯೋತ್ಸವ ಆಚರಣೆ ಇಲ್ಲ. ಭಾರತೀಯ ರಾಯಭಾರ ಕಚೇರಿ ಶುಕ್ರವಾರ ಈ ಕುರಿತು ಪ್ರಕಟಣೆಯನ್ನೂ ಹೊರಡಿಸಿದೆ. ಚೀನಾದಾದ್ಯಂತ...

ಅರಿವಿನ ಕೊರತೆಯೇ ದೌರ್ಜನ್ಯಕ್ಕೆ ಕಾರಣ!

* ಸಿವಿಲ್ ಹಿರಿಯ ನ್ಯಾಯಾಧೀಶ ಅರ್ಜುನ ಮಲ್ಲೂರ್ ಬೇಸರ ವಿಜಯವಾಣಿ ಸುದ್ದಿಜಾಲ ಬಳ್ಳಾರಿ ವ್ಯವಸ್ಥೆ...

ಹನ್ನೊಂದು ಎಐಎಡಿಎಂಕೆ ಶಾಸಕರ ಅನರ್ಹತೆ ಕುರಿತ ಅರ್ಜಿ ತುರ್ತು ವಿಚಾರಣೆಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ಡಿಎಂಕೆ

ನವದೆಹಲಿ: ತಮಿಳುನಾಡಿನಲ್ಲಿ ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿಗೆ ವಿರುದ್ಧವಾಗಿ ಮತ ಚಲಾಯಿಸಿದ 11 ಎಐಎಡಿಎಂಕೆ ಶಾಕಸರ ಅನರ್ಹತೆಗೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ತುರ್ತಾಗಿ...

ಕುವೆಂಪು ಆಶಯಗಳನ್ನು ಅಳವಡಿಸಿಕೊಂಡು ವಿಶ್ವಮಾನವರಾಗಿ; ಪಿಇಎಸ್ ವಿವಿ ಕುಲಾಧಿಪತಿ ದೊರೆಸ್ವಾಮಿ 

ಬೆಂಗಳೂರು:  ಜಗತ್ತಿನ ಪ್ರತಿಯೊಬ್ಬರೂ ವಿಶ್ವಮಾನವರಾಗ ಬೇಕು ಎನ್ನುವುದು ರಾಷ್ಟ್ರಕವಿ ಕುವೆಂಪು ಅವರ ಆಶಯವಾಗಿತ್ತು ಎಂದು ಪಿಇಎಸ್ ವಿಶ್ವವಿದ್ಯಾಲಯ ಕುಲಾಧಿಪತಿ ಪ್ರೊ. ಎಂ.ಆರ್. ದೊರೆಸ್ವಾಮಿ ತಿಳಿಸಿದ್ದಾರೆ. ಕರ್ನಾಟಕ ವಿಶ್ವ ಮಾನವ...

|ವಿವೇಕ ಕುರಗುಂದ ಇಟಗಿ
ಖಾನಾಪುರ ತಾಲೂಕಿನ ಗಂದಿಗವಾಡ ಗ್ರಾಮದಿಂದ ಹಂದೂರು-ಹುಲಿಕೊತ್ತಲ ಮಾರ್ಗವಾಗಿ ಗುಂಡೇನಟ್ಟಿ ಗ್ರಾಮದವರೆಗಿನ, ಬೈಲೂರು ಕ್ರಾಸ್‌ನಿಂದ ಮೂಗಬಸವ ನಗರ ಮಾರ್ಗವಾಗಿ ಸೂರಾಪುರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ತೆಗ್ಗು ಗುಂಡಿಗಳು ಬಿದ್ದಿದ್ದು ಸಂಚಾರಕ್ಕೆ ಸಮಸ್ಯೆಯಾಗಿದೆ.

ಹದಗೆಟ್ಟ ರಸ್ತೆಯಲ್ಲಿ ಸಂಚರಿಸುವವರಿಗೆ ನಿತ್ಯ ಕೆಸರು ಮತ್ತು ಧೂಳಿನ ಮಜ್ಜನವಾಗುತ್ತಿದೆ.
ಹಂದೂರು-ಹುಲಿಕೊತ್ತಲ ಮತ್ತು ಗಂದಿಗವಾಡ ಗ್ರಾಮಗಳ ಮಧ್ಯೆ ತಟ್ಟೀಹಳ್ಳ ಹರಿಯುತ್ತಿದೆ. ಈ ತಟ್ಟಿಹಳ್ಳಕ್ಕೆ ಅಡ್ಡಲಾಗಿ ಸೇತುವೆ ನಿರ್ಮಿಸಲಾಗಿದೆ. ಆದರೆ, ಸೇತುವೆಗೆ ತಡೆಗೋಡೆ ಇಲ್ಲದ್ದರಿಂದ ಸೇತುವೆ ಮೇಲಿನಿಂದ ಸಾಗುವ ರಸ್ತೆ ಅಪಾಯಕ್ಕೆ ಆಹ್ವಾನ ನೀಡುವಂತಿದೆ. ಹೀಗಾಗಿ ಈ ರಸ್ತೆಯ ದುರವಸ್ಥೆಯಿಂದಾಗಿ ವಾಹನ ಸವಾರರಿಗೆ, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ. ನಮ್ಮೂರಿನಿಂದ ಕೆಲವೇ ಕಿ.ಮೀ. ದೂರದಲ್ಲಿರುವ ಗಂದಿಗವಾಡ, ಇಟಗಿ, ಕಿತ್ತೂರು ಅಥವಾ ಬೀಡಿ ಗ್ರಾಮಗಳಿಗೆ ತೆರಳಲು ಮುಕ್ಕಾಲು ಗಂಟೆ ತಗುಲುತ್ತಿದೆ. ಈ ರಸ್ತೆ ಅಭಿವೃದ್ಧಿಗಾಗಿ ಹಲವು ಬಾರಿ ತಾಲೂಕಿನ ಜನಪ್ರತಿನಿಗಳು, ಅದಿಕಾರಿಗಳನ್ನು ಆಗ್ರಹಿಸಿದ್ದರೂ ಪ್ರಯೋಜನವಾಗಿಲ್ಲ. ಹೀಗಾಗಿ ಈ ರಸ್ತೆ ದುರಸ್ತಿಗೆ ಸಂಬಂಧಪಟ್ಟವರನ್ನು ಆಗ್ರಹಿಸುತ್ತಿರುವುದಾಗಿ ಹಂದೂರು-ಹುಲಿಕೊತ್ತಲ ಗ್ರಾಮಸ್ಥರು ಮತ್ತು ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಇದೇ ಮಾದರಿಯಲ್ಲಿ ಖಾನಾಪುರ-ಕಿತ್ತೂರು ತಾಲೂಕುಗಳ ಗಡಿಯ ಬೈಲೂರು ಕ್ರಾಸ್‌ನಿಂದ ಮೂಗಬಸವನಗರ ಮಾರ್ಗವಾಗಿ ಸೂರಾಪುರ ಗ್ರಾಮದವರೆಗಿನ ರಸ್ತೆಯೂ ದಯನೀಯ ಸ್ಥಿತಿ ತಲುಪಿದೆ. ಇದೇ ರೀತಿ ಖಾನಾಪುರ ತಾಲೂಕಿನ ಖಾನಾಪುರ-ಅಸೋಗಾ, ಖಾನಾಪುರ-ದೇವಲತ್ತಿ-ಪಾರಿಶ್ವಾಡ, ಪಾರಿಶ್ವಾಡ-ಅವರೊಳ್ಳಿ, ಕೊಡಚವಾಡ-ಚಾಪಗಾವಿ, ಯಡೋಗಾ-ದೊಡ್ಡ ಹೊಸೂರು, ತೋಪಿನಕಟ್ಟಿ-ಲೋಕೋಳಿ ಕ್ರಾಸ್, ಗರ್ಲಗುಂಜಿ-ಬಿದರಭಾವಿ, ಜಾಂಬೋಟಿ-ಖಾನಾಪುರ, ಶೇಡೇಗಾಳಿ-ರುಮೇವಾಡಿ ಸೇರಿ ವಿವಿಧ ಗ್ರಾಮಗಳ ಸಂಪರ್ಕ ರಸ್ತೆಗಳು ಸಂಪೂರ್ಣ ಹಾಳಾಗಿವೆ. ರಸ್ತೆಗಳನ್ನು ಅಭಿವೃದ್ಧಿಪಡಿಸುವತ್ತ ಕ್ಷೇತ್ರದ ಶಾಸಕರು ಮತ್ತು ಲೋಕೋಪಯೋಗಿ ಇಲಾಖೆಯ ಅಕಾರಿಗಳು ಗಮನಹರಿಸಬೇಕು ಎಂದು ಗಂದಿಗವಾಡ ಗ್ರಾಮದ ರೈತ ಮುಖಂಡ ಅಶೋಕ ಯಮಕನಮರಟಿ ಆಗ್ರಹಿಸಿದ್ದಾರೆ.

ರಸ್ತೆಗಳ ದುಸ್ಥಿತಿ ಕಾರಣ ವಾಹನ ಸವಾರರಿಗೆ, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ. ಬಸ್‌ಗಳು ಸಮಯಕ್ಕೆ ಸರಿಯಾಗಿ ಬರುತ್ತಿಲ್ಲ. ಸರ್ಕಾರಿ ನೌಕರರಿಗೆ ತೊಂದರೆಯಾಗುತ್ತಿದೆ. ಹಾಳಾದ ರಸ್ತೆಯಲ್ಲಿ ಸಂಚರಿಸಿ ವಾಹನಗಳು ಪದೇ ಪದೆ ಕೆಟ್ಟು ನಿಲ್ಲುತ್ತಿವೆ. ಹೀಗಾಗಿ ಸಾರ್ವಜನಿಕ ಹಿತಾಸಕ್ತಿ ಗಮನದಲ್ಲಿರಿಸಿ ತಾಲೂಕಿನ ಹದಗೆಟ್ಟ ರಸ್ತೆಗಳನ್ನು ಸರಿಪಡಿಸುವಂತೆ ತಾಲೂಕಿನ ವಿವಿಧ ಗ್ರಾಮಗಳ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಗಂದಿಗವಾಡದಿಂದ ಹಂದೂರು-ಹುಲಿಕೊತ್ತಲ ಮೂಲಕ ಗುಂಡೇನಟ್ಟಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹಾಳಾಗಿದ್ದರಿಂದ ಈ ರಸ್ತೆಯ ಅಭಿವೃದ್ಧಿಗೆ ಆಡಳಿತ ಯಂತ್ರ ಮುಂದಾಗಬೇಕು ಎಂಬುದು ಈ ಭಾಗದ ಜನರ ಒಕ್ಕೂರಲ ಕೂಗು. ಈ ರಸ್ತೆಯ ಜತೆಯಲ್ಲೇ ಮಾರ್ಗಮಧ್ಯದ ತಟ್ಟಿಹಳ್ಳದ ಸೇತುವೆಗೆ
ತಡೆಗೋಡೆ ನಿರ್ಮಿಸಬೇಕಿದೆ.
|ವಿಠ್ಠಲ ಹಿಂಡಲಕರ ಗುಂಡೇನಟ್ಟಿ ಗ್ರಾಮಸ್ಥ

ಇತ್ತೀಚೆಗೆ ಸುರಿದ ಮಳೆಯಿಂದಾಗಿ ಖಾನಾಪುರ ತಾಲೂಕಿನ ಹಲವೆಡೆ ರಸ್ತೆಗಳು ಹಾಳಾಗಿವೆ. ಹಾಳಾದ ರಸ್ತೆಗಳ ದುರಸ್ತಿ ಮತ್ತು ಮರುನಿರ್ಮಾಣಕ್ಕೆ ಬೇಕಾದ ಅನುದಾನವನ್ನು ಒದಗಿಸುವಂತೆ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ರಸ್ತೆಗಳ ದುರಸ್ತಿಗೆ ಇಲಾಖೆಯಲ್ಲಿ ಲಭ್ಯವಿರುವ ಅನುದಾನ ಬಳಸಲು ಮೇಲಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದು, ಮಂಜೂರಾಗಿ ಬಂದ ಕೂಡಲೇ ಗ್ರಾಮೀಣ ಭಾಗದ ರಸ್ತೆಗಳ ದುರಸ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು.
|ಗಿರೀಶ ದೇಸಾಯಿ ಎಇಇ, ಲೋಕೋಪಯೋಗಿ ಇಲಾಖೆ ಖಾನಾಪುರ.

ವಿಡಿಯೋ ನ್ಯೂಸ್

VIDEO| ಇಂದಿರಾ ಜೈಸಿಂಗ್​ ಅಂತಹವರನ್ನು ನಿರ್ಭಯಾ ಅಪರಾಧಿಗಳ ಜತೆ ಜೈಲಿನ...

ನವದೆಹಲಿ: ಹಿರಿಯ ವಕೀಲೆ ಇಂದಿರಾ ಜೈಸಿಂಗ್​ ಅವರನ್ನು ನಿರ್ಭಯಾ ಪ್ರಕರಣದ ಅಪರಾಧಿಗಳ ಜತೆ ಜೈಲಿನಲ್ಲಿಡಬೇಕು ಎಂದು ನಟಿ ಕಂಗನಾ ರಣಾವತ್​ ಆಕ್ರೋಷ ವ್ಯಕ್ತಪಡಿಸಿದ್ದಾರೆ. ನಿರ್ಭಯಾ ಪ್ರಕರಣವನ್ನು ಸಂತ್ರಸ್ಥೆ ತಾಯಿ ಆಶಾದೇವಿ ಅವರು ಕ್ಷಮಿಸಬೇಕು ಎಂಬ...

VIDEO| ಪ.ಬಂಗಾಳದಲ್ಲಿ ಮೂರೇ ವರ್ಷ ಹಿಂದೆ 165 ಕೋಟಿ ರೂ....

ಬಂಕುರಾ: ಪಶ್ಚಿಮ ಬಂಗಾಳದ ಬಂಕುರಾದ ಸಾರೆಂಗಾದಲ್ಲಿ ಕೇವಲ ಮೂರೇ ವರ್ಷ ಹಿಂದ 165 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ಓವರ್ ಹೆಡ್ ಟ್ಯಾಂಕ್ ಒಂದು ಬುಧವಾರ ಅಪರಾಹ್ನ ಕುಸಿದು ಬಿದ್ದಿದೆ....

VIDEO| ಗಗನಯಾನಕ್ಕೆ ವ್ಯೋಮಮಿತ್ರಾ; ಇಸ್ರೋದಿಂದ ರೋಬಾಟ್ ಅನಾವರಣ, ವರ್ಷಾಂತ್ಯಕ್ಕೆ ಪ್ರಯಾಣ

ಬೆಂಗಳೂರು: ಭಾರತದ ಮಹತ್ವಾಕಾಂಕ್ಷಿ ಬಾಹ್ಯಾಕಾಶ ಕಾರ್ಯಕ್ರಮ ಗಳಲ್ಲೊಂದಾದ ಮಾನವಸಹಿತ ಗಗನಯಾನಕ್ಕೆ ಪೂರ್ವಭಾವಿಯಾಗಿ ಪ್ರಯಾಣ ಬೆಳೆಸಲಿರುವ ರೋಬಾಟ್ ‘ವ್ಯೋಮಮಿತ್ರಾ’ವನ್ನು ಭಾರತೀಯ ಬಾಹ್ಯಾಕಾಶ ಸಂಸ್ಥೆ(ಇಸ್ರೋ) ಬುಧವಾರ ಬೆಂಗಳೂರಿನಲ್ಲಿ ಅನಾವರಣಗೊಳಿಸಿದೆ. ಖಾಸಗಿ ಹೋಟೆಲ್​ನಲ್ಲಿ ‘ಮಾನವಸಹಿತ ಗಗನಯಾನ ಮತ್ತು ಅನ್ವೇಷಣೆ ಕಾರ್ಯಕ್ರಮ’...

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...