More

    ಶಕ್ತಿ ಯೋಜನೆಯಿಂದ ಸರ್ಕಾರಿ ಬಸ್‌ಗಳು ಫುಲ್, ಕಲೆಕ್ಷನ್ ನಿಲ್

    ಹೊನ್ನಾಳಿ: ಶಕ್ತಿ ಯೋಜನೆಯಿಂದ ಸರ್ಕಾರಿ ಬಸ್‌ಗಳು ಫುಲ್, ಕಲೆಕ್ಷನ್ ನಿಲ್ ಎನ್ನುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದರು.

    ಪಟ್ಟಣದ ಕನಕದಾಸ ರಂಗಮಂದಿರದಲ್ಲಿ ಶುಕ್ರವಾರ ಬೀದಿಬದಿ ವ್ಯಾಪಾರಸ್ಥರ ಸಂಘದಿಂದ ಹಮ್ಮಿಕೊಂಡಿದ್ದ ಹೊನ್ನಾಳಿ-ನ್ಯಾಮತಿ ತಾಲೂಕುಗಳ ಬೀದಿಬದಿ ವ್ಯಾಪಾರಿಗಳ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

    ಸರ್ಕಾರದ ಯೋಜನೆಗಳು ಜನಪರವಾಗಿದ್ದು, ಸಾಮಾನ್ಯ ಜನರು ಯೋಜನೆಗಳನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದರು.

    ಬೀದಿಬದಿ ವ್ಯಾಪಾರಿಗಳ ಸಮಸ್ಯೆಗಳು ಸಾಕಷ್ಟಿದ್ದು. ಎಲ್ಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡು ಹಿಡಿಯಲಾಗುವುದು. ಇದಕ್ಕೂ ಮುನ್ನ ಪುರಸಭೆ ಸಮಿತಿ ರಚನೆಯಾಗಬೇಕಿದೆ. ಪುರಸಭೆ ರಚನೆಯಾದ ತಕ್ಷಣ ಎಲ್ಲರ ಸಹಕಾರ ಪಡೆದು ರಸ್ತೆ ವಿಸ್ತರಣೆ ಮಾಡಿ, ಸಂತೆ ಮೈದಾನದಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ತಿಳಿಸಿದರು.

    ಬೀದಿಬದಿ ವ್ಯಾಪಾರಿಗಳ ಸಂಘದ ನಿವೇಶನಕ್ಕೆ ಮನವಿ ಮಾಡಿದ್ದಾರೆ. ಆದರೆ, ಸದ್ಯಕ್ಕೆ ಪಟ್ಟಣದ ವ್ಯಾಪ್ತಿಯಲ್ಲಿ ಸರ್ಕಾರಿ ಜಾಗ ಇಲ್ಲ. ಈಗಾಗಲೆ ಅನೇಕ ಸಂಘ ಸಂಸ್ಥೆಯವರು ನಿವೇಶನಕ್ಕೆ ಬೇಡಿಕೆ ಇಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಹಂತಹಂತವಾಗಿ ಕ್ರಮ ಕೈಗೊಳ್ಳಲಾಗುವುದು ಎಂದರು.

    ಪ್ರಾಸ್ತಾವಿಕವಾಗಿ ಮಾತನಾಡಿದ ಸಿಐಟಿಯು ಜಿಲ್ಲಾ ಸಂಚಾಲಕ ಆನಂದರಾಜ್, ಎಪಿಎಂಸಿಗಳು ಬೀದಿಬದಿ ವ್ಯಾಪಾರಿಗಳಿಂದಲೇ ನಡೆಯುತ್ತಿವೆ. ಆದರೂ, ಬೀದಿಬದಿ ವ್ಯಾಪಾರಿಗಳ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ಇನ್ನಾದರೂ ಸರ್ಕಾರ ನಮ್ಮ ಸಮಸ್ಯೆ ಬಗೆಹರಿಸಬೇಕು ಎಂದು ಹೇಳಿದರು.

    ಪ್ರಜಾ ಪರಿವರ್ತನಾ ವೇದಿಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ಈಶ್ವರಪ್ಪ, ಪುರಸಭೆ ಪ್ರಭಾರಿ ಮುಖ್ಯಾಧಿಕಾರಿ ನಿರಂಜನಿ, ವಕೀಲ ಚಂದ್ರಪ್ಪ ಮಡಿವಾಳ ಮಾತನಾಡಿದರು.

    ಬೀದಿಬದಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ನಾಗರಾಜ ಕಲ್ಕೇರಿ ಅಧ್ಯಕ್ಷತೆ ವಹಿಸಿದ್ದರು. ಸಂಘದ ಗೌರವಾಧ್ಯಕ್ಷ ಮಂಜಪ್ಪ, ಕಾರ್ಯದರ್ಶಿ ರೇಣುಕಾ ಗಜೇಂದ್ರಪ್ಪ, ಉಪಾಧ್ಯಕ್ಷ ಸಮಿಉಲ್ಲಾ, ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ರವಿ ಇತರರು ಉಪಸ್ಥಿತರಿದ್ದರು.

    ಇದೇ ಸಂದರ್ಭದಲ್ಲಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತೆ ನಾಗರತ್ನ ಅವರನ್ನು ಸನ್ಮಾನಿಸಲಾಯಿತು. ಕತ್ತಿಗೆ ನಾಗರಾಜ್ ಸ್ವಾಗತಿಸಿ, ನಿರೂಪಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts