

ಸಿಂಧನೂರು: ನಗರದ ಪ್ರಮುಖ ರಸ್ತೆಗಳಲ್ಲಿ ಬೀದಿಬದಿ ವ್ಯಾಪಾರಿಗಳ ತೆರವಿನಿಂದ ಜೀವನ ನಿರ್ವಹಣೆ ಕಷ್ಟವಾಗಿದ್ದು, ಪರ್ಯಾಯ ಕ್ರಮಕೈಗೊಳ್ಳಬೇಕೆಂದು ಬೀದಿ ಬದಿ ವ್ಯಾಪಾರಸ್ಥರ ಹೋರಾಟ ಸಮಿತಿಯು ಡಿವೈಎಸ್ಪಿ ಬಿ.ಎಸ್.ತಳವಾರ ಅವರನ್ನು ಭೇಟಿ ಮಾಡಿ ಚರ್ಚಿಸಿತು.
ಕಳೆದ ಮೂರು ತಿಂಗಳಿಂದ ಬೀದಿ ಬದಿ ವ್ಯಾಪಾರಸ್ಥರು ಉದ್ಯೋಗ ಕಳೆದುಕೊಂಡಿದ್ದಾರೆ. ವ್ಯಾಪಾರವಿಲ್ಲದೆ ಕುಟುಂಬ ನಿರ್ವಹಣೆಗೆ ಅನುಭವಿಸುತ್ತಿರುವ ಸಂಕಷ್ಟವನ್ನು ಮನವರಿಕೆ ಮಾಡಲಾಯಿತು.
ನಿಯೋಗದ ಮನವಿಗೆ ಸ್ಪಂದಿಸಿದ ಡಿವೈಎಸ್ಪಿ ಬಿ.ಎಸ್.ತಳವಾರ ಮಾತನಾಡಿ, ಈ ಕುರಿತು ಮೇಲಧಿಕಾರಿಗಳು ಹಾಗೂ ಸಕ್ಷಮ ಪ್ರಾಧಿಕಾರದವರೊಂದಿಗೆ ಮಾತನಾಡುತ್ತೇನೆ. ಕಾನೂನಿನಡಿ ಏನೆಲ್ಲ ಅವಕಾಶವಿದೆ. ಆ ನಿಟ್ಟಿನಲ್ಲಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಸಮಿತಿ ಸಂಚಾಲಕರಾದ ಡಿ.ಎಚ್.ಪೂಜಾರ್, ಚಂದ್ರಶೇಖರ ಗೊರೇಬಾಳ, ಹುಸೇನ್‌ಸಾಬ್, ಬಸವಂತರಾಯಗೌಡ ಕಲ್ಲೂರು, ಬಿ.ಎನ್.ಯರದಿಹಾಳ, ಕೃಷ್ಣಮೂರ್ತಿ, ಡಿ.ಎಚ್.ಕಂಬಳಿ, ಬಸವರಾಜ ಬಾದರ್ಲಿ, ಕೃಷ್ಣಮೂರ್ತಿ ಇತರರಿದ್ದರು.