More

    ಸಹಕಾರ ಕ್ಷೇತ್ರವನ್ನು ಇನ್ನಷ್ಟು ಬಲಗೊಳಿಸಿ

    ಕೊಪ್ಪ: ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನಗೊಳಿಸಲು ಸಹಕಾರ ಕ್ಷೇತ್ರ ಅವಶ್ಯಕ. ಹೀಗಾಗಿ ಈ ಕ್ಷೇತ್ರವನ್ನು ಇನ್ನಷ್ಟು ಬಲಗೊಳಿಸಬೇಕಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳದ ನಿರ್ದೇಶಕ ಬಿ.ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು.
    ಪಟ್ಟಣದಲ್ಲಿನ ಮ್ಯಾಮ್ಕೋಸ್ ಶಾಖಾ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಜಿಲ್ಲೆಯ ಎಲ್ಲ ಪಿಕಾರ್ಡ್ ಬ್ಯಾಂಕ್‌ಗಳ ಹಾಗೂ ಕೊಪ್ಪ, ಶೃಂಗೇರಿ, ಎನ್.ಆರ್.ಪುರ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು, ಸಿಇಒಗಳಿಗೆ ಏರ್ಪಡಿಸಿದ್ದ ಸಹಕಾರ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
    ಸಹಕಾರ ಸಂಘದಲ್ಲಿ ಸಂವಿಧಾನ ಎಂದರೆ ಸಂಘದ ಉಪನಿಬಂಧನೆಯಾಗಿದೆ. ಅನೇಕರು ಈ ಉಪನಿಬಂಧನೆಯನ್ನು ತಿಳಿದುಕೊಂಡಿಲ್ಲ. ಸಹಕಾರಿ ಕ್ಷೇತ್ರವು ವಾಣಿಜ್ಯ ಹಾಗೂ ಖಾಸಗಿ ಬ್ಯಾಂಕ್‌ಗೆ ಪೈಪೋಟಿ ನೀಡುತ್ತಿದೆ. ರೈತರಿಗೆ ಸಾಲ ಸೌಲಭ್ಯ ನೀಡಿ ಆರ್ಥಿಕವಾಗಿ ಬಲಗೊಳಿಸುತ್ತಿವೆ. ಯಾವುದೇ ಸಮಸ್ಯೆ ಉದ್ಭವಿಸಿದ್ದಲ್ಲಿ ಎಲ್ಲರೂ ಒಗ್ಗೂಡಿ ಹೋರಾಡಬೇಕಿದೆ ಎಂದು ತಿಳಿಸಿದರು.
    ಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಬಸವರಾಜ್ ಹಾಗೂ ಚಾರ್ಟರ್ಡ್ ಅಕೌಂಟೆಂಟ್ ಅನಿಲ್ ಭಾರದ್ವಾಜ್ ವಿಶೇಷ ಉಪನ್ಯಾಸ ನೀಡಿದರು. ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಜಿ.ಎಸ್.ಮಹಾಬಲ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಬಿ.ಸಿ.ಲೋಕಪ್ಪಗೌಡ, ಜಿಲ್ಲಾ ಸಹಕಾರ ಯೂನಿಯನ್ ಉಪಾಧ್ಯಕ್ಷ ಜಿ.ಕೆ.ದಿವಾಕರ, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಉಪಾಧ್ಯಕ್ಷ ಡಿ.ಸಿ.ಶಂಕರಪ್ಪ, ಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್.ಎನ್.ರಾಮಸ್ವಾಮಿ, ಕೊಪ್ಪ ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಎಚ್.ಎಸ್.ಇನೇಶ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts