More

    ಎಸ್ಸೆಸ್ಸೆಲ್ಸಿ ಪರೀಕ್ಷೆ ವೇಳೆ ಕುಸಿದುಬಿದ್ದ ವಿದ್ಯಾರ್ಥಿನಿ: ಹೃದಯಾಘಾತದಿಂದ ದುರಂತ ಸಾವು

    ವಿಜಯವಾಡ: ಎರಡೂ ತೆಲುಗು ರಾಜ್ಯಗಳಲ್ಲಿ 10ನೇ ತರಗತಿ ಪರೀಕ್ಷೆಗಳು ಆರಂಭವಾಗಿದೆ. ಕರ್ನಾಟಕದಲ್ಲಿ ಮಾರ್ಚ್​ 25ರಿಂದ ಆರಂಭವಾಗಲಿದೆ. ವಿದ್ಯಾರ್ಥಿ ಜೀವನದ ಮಹತ್ವದ ತಿರುವು ಹತ್ತನೇ ತರಗತಿ. ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಅಂಕ ಗಳಿಸಿದರೆ, ಉನ್ನತ ವ್ಯಾಸಂಗಕ್ಕೆ ದಾರಿಯಾಗುತ್ತದೆ. ಹೀಗಾಗಿ ಉತ್ತಮ ಅಂಕ ಗಳಿಸಬೇಕೆಂದು ಪಾಲಕರು ಮತ್ತು ಶಾಲೆಗೆ ಒಳ್ಳೆಯ ಹೆಸರು ಬರಲೆಂದು ಮಾಲೀಕರು, ಶಿಕ್ಷಕರು ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರುತ್ತಾರೆ. ಆದರೆ, ಈ ಒತ್ತಡ ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತದೆ. ನಿನ್ನೆಯಷ್ಟೇ ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆ ಬರೆದ ನಂತರ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಮೃತಪಟ್ಟಿದ್ದಾಳೆ. ವೈದ್ಯರು ಪರಿಶೀಲನೆ ನಡೆಸಿದಾಗ ಹೃದಯಾಘಾತದಿಂದ ಸಾವಿಗೀಡಾಗಿರುವುದಾಗಿ ತಿಳಿಸಿದ್ದಾರೆ.

    ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ ಸಾವುಗಳು ಹೆಚ್ಚಾಗುತ್ತಿದ್ದು, ತೀವ್ರ ಕಳವಳಕಾರಿಯಾಗಿದೆ. ಹಿಂದೆಲ್ಲ ವಯಸ್ಸಾದವರಿಗೆ ಮಾತ್ರ ಹೃದಯಾಘಾತ ಆಗುತ್ತೆ ಎನ್ನುತ್ತಿದ್ದರು. ಆದರೆ, ಈಗ ಯಾವುದೇ ವಯಸ್ಸಿನ ಮಿತಿ ಇಲ್ಲದೆ, ಹೃದಯಾಘಾತ ಸಾಮಾನ್ಯವಾಗಿದೆ. ದಿಢೀರನೇ ಸಾಯುತ್ತಿರುವವರ ಸಂಖ್ಯೆ ಅಧಿಕವಾಗುತ್ತಿದೆ. ಇದೀಗ ಆಂಧ್ರ ಪ್ರದೇಶದ ವೈಎಸ್ಆರ್ ಜಿಲ್ಲೆಯ ರಾಜುಪಾಲೆಂ ಮಂಡಲದಲ್ಲಿ ದುರಂತವೊಂದು ಸಂಭವಿಸಿದೆ. ಕೊರ್ರಪಾಡುವಿನಲ್ಲಿ 10ನೇ ತರಗತಿ ಓದುತ್ತಿದ್ದ ಲಿಖಿತಾ (15) ಎಂಬ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ. ನಿನ್ನೆ ಪರೀಕ್ಷೆಗೆ ಹಾಜರಾಗಿದ್ದ ಬಾಲಕಿ, ಮಧ್ಯಾಹ್ನದ ಊಟದ ನಂತರ ಸಹ ವಿದ್ಯಾರ್ಥಿಗಳೊಂದಿಗೆ ಮಾತನಾಡುತ್ತಿದ್ದಾಗ ಕುಸಿದು ಬಿದ್ದಿದ್ದಾಳೆ.

    ಲಿಖಿತಾ ಕುಸಿದ ಬಿದ್ದ ಬೆನ್ನಲ್ಲೇ ಗಾಬರಿಗೊಂಡ ಸಹಪಾಠಿಗಳು ತಕ್ಷಣ ಶಾಲಾ ಸಿಬ್ಬಂದಿಗೆ ತಿಳಿಸಿದ್ದಾರೆ. ಇದಾದ ಕೂಡಲೇ ಶಾಲಾ ಆಡಳಿತ ಮಂಡಳಿ ಲಿಖಿತಾಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪರೀಕ್ಷೆ ಮಾಡಿದ ವೈದ್ಯರು, ಆಸ್ಪತ್ರೆಗೆ ಬರುವಷ್ಟರಲ್ಲೇ ಲಿಖಿತಾ ಪ್ರಾಣ ಹೋಗಿರುವುದಾಗಿ ದೃಢಪಡಿಸಿದರು.

    ಮಗಳನ್ನು ಕಳೆದುಕೊಂಡು ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಶಿಕ್ಷಕರು ಮತ್ತು ಸಹಪಾಠಿಗಳು ಲಿಖಿತಾ ಸಾವಿಗೆ ಕಂಬನಿ ಮಿಡಿದಿದ್ದಾರೆ. ಉತ್ತಮ ಶಿಕ್ಷಣ ಪಡೆದರೆ ತಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ ಎಂದು ಭಾವಿಸಿರುವ ಪಾಲಕರು ಮಕ್ಕಳ ಮೇಲೆ ಒತ್ತಡ ಹೇರುತ್ತಿದ್ದಾರೆ. ಇದು ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುತ್ತಿದೆ. ಅಂಕ ಗಳಿಕೆಗಾಗಿ ಮಕ್ಕಳ ಮೇಲೆ ಯಾವುದೇ ಕಾರಣಕ್ಕೂ ಪಾಲಕರು ಒತ್ತಡ ಹೇರಬಾರದು ಎಂದು ತಜ್ಞರು ಸಲಹೆ ನೀಡಿದ್ದಾರೆ. (ಏಜೆನ್ಸೀಸ್​)

    ಕುಂಭ ರಾಶಿಯಲ್ಲಿ ಮಂಗಳ-ಶನಿ ಸಂಯೋಗ: ಈ 3 ರಾಶಿಯವರಿಗೆ ರಾಜಯೋಗ ಶುರು, ಹರಿದುಬರುತ್ತೇ ಹಣದ ಹೊಳೆ

    ಮುಂಬೈ ಇಂಡಿಯನ್ಸ್​ ನಾಯಕತ್ವದಿಂದ ರೋಹಿತ್​ ಶರ್ಮ ಕೆಳಗಿಳಿಯಲು ಸಚಿನ್​ ಕಾರಣ! ಇಲ್ಲಿದೆ ನೋಡಿ ಸಾಕ್ಷಿ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts