More

    ಮಹಿಳಾ ದೌರ್ಜನ್ಯ ತಡೆಗೆ ಬಿಗಿ ಕಾನೂನು ಜಾರಿ


    ಚಾಮರಾಜನಗರ : ಮಹಿಳಾ ದೌರ್ಜನ್ಯ ಹಾಗೂ ಬಾಲ್ಯವಿವಾಹದಿಂದ ಹೆಣ್ಣು ಮಕ್ಕಳ ಜೀವನ ಹಾಳಾಗುವುದನ್ನು ತಪ್ಪಿಸಲು ಸರ್ಕಾರ ಬಿಗಿಯಾದ ಕಾನೂನುಗಳನ್ನು ಜಾರಿಗೆ ತಂದಿದ್ದು, ಇವುಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕಾಗಿದೆ ಎಂದು ಹಿರಿಯ ಸಿವಿಲ್ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರಾದ ಬಸವರಾಜ ತಳವಾರ್ ಹೇಳಿದರು.


    ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಸೋಮವಾರ ಪಟ್ಟಣದ ನ್ಯಾಯಾಲದ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತಾಡಿದರು.


    ಹೆಣ್ಣು ಮಕ್ಕಳು ಮನಸ್ಸು ಮಾಡಿದರೆ ಏನನ್ನಾದರೂ ಸಾಧಿಸಬಲ್ಲರು. ಆದ್ದರಿಂದ ಪಾಲಕರು ತಮ್ಮ ಹೆಣ್ಣು ಮಕ್ಕಳನ್ನು ಕೀಳಾಗಿ ಕಾಣಬಾರದು. ತಮ್ಮ ಜವಾಬ್ದಾರಿ ಕಳೆದುಕೊಳ್ಳಲು ಬಾಲ್ಯ ವಿವಾಹ ಮಾಡುವ ಬದಲು ಉನ್ನತ ಶಿಕ್ಷಣ ಕೊಡಿಸುವ ಮೂಲಕ ಸಮಾಜದಲ್ಲಿ ಉತ್ತಮ ಸ್ಥಾನಕ್ಕೇರುವಂತೆ ಮಾಡಬೇಕು ಎಂದು ಸಲಹೆ ನೀಡಿದರು.


    ಕಾರ್ಯಕ್ರಮದಲ್ಲಿ ಅಪರ ಸಿವಿಲ್ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರಾದ ಕಾಂತಮ್ಮ, ಪ್ರಧಾನ ಸಿವಿಲ್ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರಾದ ಜೆ.ಜೆ.ಶಿವಕುಮಾರ್, ವಕೀಲರ ಸಂಘದ ಅಧ್ಯಕ್ಷ ವೆಂಕಟೇಶ್, ಸಹಾಯಕ ಸರ್ಕಾರಿ ಅಭಿಯೋಜಕರಾದ ರೇವಣ್ಣ, ಮೊಹಮ್ಮದ್ ವಾಸಿಂಉಲ್ಲಾ, ಉಷಾರಾಣಿ ಹಾಗೂ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts