More

    ಹೆಣ್ಣು ಭ್ರೂಣ ಹತ್ಯೆ ತಡೆಗೆ ಕಠಿಣ ನಿಯಮ

    ಮದ್ದೂರು: ಹೆಣ್ಣು ಭ್ರೂಣ ಹತ್ಯೆ ತಡೆಗೆ ಕಠಿಣ ನಿಯಮ ಕೈಗೊಳ್ಳಲಾಗಿದ್ದು, ಗ್ರಾಮ ಮಟ್ಟದವರೆಗೂ ವಿವಿಧ ಸಮಿತಿಗಳನ್ನು ರಚಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಮೋಹನ್ ಹೇಳಿದರು.

    ಪಟ್ಟಣದಲ್ಲಿ ತಾಲೂಕು ಪಂಚಾಯಿತಿ, ತಾಲೂಕು ಆಡಳಿತ, ಆರೋಗ್ಯ ಇಲಾಖೆ ಮತ್ತು ಧ್ವನಿ ಮಹಿಳಾ ಮತ್ತು ಮಕ್ಕಳ ಸಂಸ್ಥೆ, ಕಮಲಾ ನೆಹರು ಬಾಲಿಕ ಪ್ರೌಢಶಾಲೆ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹೆಣ್ಣು ಭ್ರೂಣ ಹತ್ಯೆ ಕುರಿತು ಆಯೋಜಿಸಿದ್ದ ಜಾಗೃತಿ ಜಾಥಾಕ್ಕೆ ಬುಧವಾರ ಚಾಲನೆ ನೀಡಿ ಮಾತನಾಡಿದರು. ಹೆಣ್ಣು ಭ್ರೂಣ ಪತ್ತೆ ಮಾಡುವುದು ಕಾನೂನುಬಾಹಿರವಾಗಿದೆ. ವಿದ್ಯಾರ್ಥಿಗಳು ಪಾಲಕರಿಗೆ ಮತ್ತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ ಹೆಣ್ಣು ಭ್ರೂಣ ಹತ್ಯೆ ಆಗದಂತೆ ಅರಿವು ಮೂಡಿಸಬೇಕು. ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆಯಾದರೆ ಲಿಂಗಾನುಪಾತದಲ್ಲಿ ವ್ಯತ್ಯಾಸವಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು.

    ಜಿಲ್ಲಾ ಮಟ್ಟದಲ್ಲಿ ಈಗಾಗಲೇ ಭ್ರೂಣ ಹತ್ಯೆ ತಡೆ ಸಮಿತಿ ರಚಿಸಲಾಗಿದ್ದು, ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿದೆ. ಗ್ರಾಮ ಪಂಚಾಯಿತಿ ಮಟ್ಟಗಳಲ್ಲಿ ಪಿಡಿಒಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲು ಹಾಗೂ ತಾಲೂಕು ಮಟ್ಟದಲ್ಲಿ ತಹಸೀಲ್ದಾರ್ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಹೆಣ್ಣು ಭ್ರೂಣ ಹತ್ಯೆ ತಡೆಯಲು ಅಗತ್ಯ ಕ್ರಮವಹಿಸಲಾಗುತ್ತದೆ ಎಂದರು.

    ಧ್ವನಿ ಮಹಿಳಾ ಮತ್ತು ಮಕ್ಕಳ ಸಂಸ್ಥೆಯ ಅಧ್ಯಕ್ಷೆ ರಜಿನಿರಾಜ್, ತಾಪಂ ಇಒ ಎಲ್. ಸಂದೀಪ್, ತಾಲೂಕು ಆರೋಗ್ಯ ಅಧಿಕಾರಿ ಡಾ.ರವೀಂದ್ರ ಬಿ.ಗೌಡ, ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿ ನಾರಾಯಣ್, ಪ್ರಾಂಶುಪಾಲೆ ಗೀತಾ, ತೆಂಗು ಬೆಳೆಗಾರರ ಸಂಘದ ಅಧ್ಯಕ್ಷ ಚನ್ನಸಂದ್ರ ಲಕ್ಷ್ಮಣ್, ಮುಖಂಡರಾದ ರಾಜಶೇಖರ್, ಕುಶಲ್, ಗೀತಾ, ಮಮತಾ, ಪ್ರಭಾವತಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts