21.7 C
Bengaluru
Tuesday, January 21, 2020

ನಾಲ್ಕನೇ ದಿನಕ್ಕೆ ಕಾಲಿಟ್ಟ ಅನಿರ್ದಿಷ್ಟ ಧರಣಿ

Latest News

ಉಬರ್ ಈಟ್ಸ್​ ವ್ಯವಹಾರ ಸ್ವಾಧೀನ ಪಡಿಸಿಕೊಂಡ ಜೊಮ್ಯಾಟೋ | ಭಾರತದಲ್ಲಿ ವಹಿವಾಟು ಕೊನೆಗೊಳಿಸಿದ ಉಬರ್ ಈಟ್ಸ್​

ನವದೆಹಲಿ: ಆಲ್ ಸ್ಟಾಕ್ ಡೀಲ್ ಮೂಲಕ ಉಬರ್ ಈಟ್ಸ್​ನ ವ್ಯವಹಾರವನ್ನು ಭಾರತದಲ್ಲಿ ಸಂಪೂರ್ಣವಾಗಿ ಸ್ವಾಧೀನ ಪಡಿಸಿಕೊಂಡಿರುವುದಾಗಿ ಜೊಮ್ಯಾಟೋ ಮಂಗಳವಾರ ಘೋಷಿಸಿದೆ. ಈ ಮೂಲಕ...

ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ಹೂಡಿಕೆದಾರರಿಗೆ ಹಣ ವಾಪಸ್

ಬೆಂಗಳೂರು: ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ನಲ್ಲಿ ಹೂಡಿಕೆ ಮಾಡಿದ್ದವರು ಹಣ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಂಚನೆಗೆ ಒಳಗಾದ ದೂರುದಾರರು ಜು.31ರವರೆಗೆ ಅರ್ಜಿ ಸಲ್ಲಿಸಬಹುದು. ದೇಶವ್ಯಾಪಿ...

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

ಮುಧೋಳ:ನಗರದ ಜನತೆಗೆ ಮೂಲಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿ ಬಸವೇಶ್ವರ ವೃತ್ತದಲ್ಲಿ ನಡೆಯುತ್ತಿರುವ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ಭಾನುವಾರ ನಾಲ್ಕನೆ ದಿನಕ್ಕೆ ಕಾಲಿಟ್ಟಿತು.

ರಸ್ತೆ ವಿಸ್ತರಣೆ, ಬೈಪಾಸ್ ರಸ್ತೆ ನಿರ್ವಣ, ಕುಡಿವ ನೀರು ಸರಬರಾಜು, ಒಳಚರಂಡಿ ಯೋಜನೆ, ಪರಿಸರ ಮಾಲಿನ್ಯ ತಡೆ ಹಾಗೂ ಮಾಸ್ಟರ್ ಪ್ಲ್ಯಾನ್ ಜಾರಿ ಸೇರಿ ಅಗತ್ಯ ಮುಲಸೌಲಭ್ಯ ಒದಗಿಸಬೇಕೆಂಬ ಬೇಡಿಕೆ ಈಡೇರಿಸುವವರೆಗೂ ಸತ್ಯಾಗ್ರಹ ಮುಂದುವರಿಯಲಿದೆ ಎಂದು ವಿವಿಧ ಸಂಘಟನೆಗಳ ಪ್ರಮುಖರು ಸ್ಪಷ್ಪಪಡಿಸಿದರು.

ಹೆದ್ದಾರಿ ಬದಿಯ ರಸ್ತೆಗಳು ಹಾಗೂ ನಗರದ ಪೇಟೆಯಲ್ಲಿ ರಸ್ತೆ ಅತಿಕ್ರಮಣ ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕು. ನಗರ ಹೊರವಲಯದ ಬಡಾವಣೆಗಳಲ್ಲಿ ಅತಿಕ್ರಮಣ ಮಾಡಿರುವ ಜಾಗ ತೆರವುಗೊಳಿಸಿ ಎಂದು ಪ್ರತಿಭಟನಾಕಾರರು ಹಕ್ಕೊತ್ತಾಯ ಮಂಡಿಸಿದರು.

ಶಾಸಕ ಕಾರಜೋಳ ಭರವಸೆ:ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಗೋವಿಂದ ಕಾರಜೋಳ ಎದುರು 8 ಬೇಡಿಕೆಗಳನ್ನು ತಿಳಿಸಿದಾಗ ರಾಜ್ಯ, ಜಿಲ್ಲಾ ಹೆದ್ದಾರಿ ವಿಸ್ತರಣೆಗೆ ಕಟ್ಟಡ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಕಾರ್ಯಾಚರಣೆ ಮುಗಿದ ಬಳಿಕ ಡಾಂಬರೀಕರಣ ಮಾಡಲಾಗುವುದು ಮತ್ತು ಬೈಪಾಸ್​ಕಾಮಗಾರಿ ಕೈಗೆತ್ತಿಕೊಳ್ಳುವುದು, ವಿವಿಧ ಬಡಾವಣೆಯಲ್ಲಿ ಸಿಸಿ ರಸ್ತೆ ಹಾಗೂ ಡಾಂಬರೀಕರಣ, ನಗರಕ್ಕೆ ನಿರಂತರ ಶಾಶ್ವತ ಕುಡಿವ ನೀರಿನ ವ್ಯವಸ್ಥೆ ಒದಗಿಸುವ ಯೋಜನೆ ಅನುಷ್ಠಾನ ಗೊಳಿಸಲಾ ಗುವುದು. ಒಳಚರಂಡಿ ಯೋಜನೆ ತಪಾಸಣೆಗೆ ನನ್ನ ಸಮ್ಮತಿ ಇದ್ದು, ಕೆರೆಗಳ ಅತಿಕ್ರಮಣ ತೆರವು, ಗಡದನ್ನವರ ವೃತ್ತದಿಂದ ಬಂಡಿವಡ್ಡರ ಪೆಟ್ರೋಲ್ ಬಂಕ್​ವರೆಗಿನ ರಸ್ತೆ ಡಾಂಬರೀಕರಣ ಕಾರ್ಯ ಶೀಘ್ರ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.

ಸತೀಶ, ಶಾಸಕರ ಮಧ್ಯೆ ವಾಗ್ವಾದ:ಶಾಸಕ ಗೋವಿಂದ ಕಾರಜೋಳ ಅವರು ನಾನು ಮುಧೋಳ ಅಭಿವೃದ್ಧಿಗೆ ಶ್ರಮಿಸಿದ್ದೇನೆ ಎಂದು ಹೇಳಿದಾಗ ಹೋರಾಟಗಾರ ಹಾಗೂ ನಗರಸಭೆ ಸದಸ್ಯ ಡಾ.ಸತೀಶ ಮಲಘಾಣ ಇದಕ್ಕೆ ವಿರೋಧ ವ್ಯಕ್ತಪಡಿಸಿದರು. ಹೀಗಾಗಿ ಇಬ್ಬರ ಮಧ್ಯೆ ವಾಗ್ವಾದ ನಡೆದು ಕೆಲಕಾಲ ಗೊಂದಲ ಉಂಟಾಯಿತು. ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಡಾ.ಸಂಜಯ ಘಾರಗೆ ಹಾಗೂ ಡಾ.ಮೋಹನ ಬಿರಾದಾರ ಮಾತನಾಡಿದರು. ಕಿಶೋರ ಮಸೂರಕರ, ಬಿ.ಎಚ್. ಪಂಚಗಾಂವಿ, ಶಂಕ್ರಪ್ಪ ಗೋಸಾರ, ಸಿದ್ದು ಚಿಕದಾನಿ, ನಾಗೇಶ ಗೋಲಶೆಟ್ಟಿ, ಕೆ.ಆರ್. ಮಾಚಪ್ಪನವರ, ಕುಮಾರ ಹುಲಕುಂದ ಇತರರಿದ್ದರು.

ನಗರಸಭೆ ಹಾಗೂ ತಾಲೂಕು ಆಡಳಿತ ನಗರ ದಲ್ಲಿನ ಅನಧಿಕೃತ ಕಟ್ಟಡಗಳನ್ನು 4 ದಿನದಲ್ಲಿ ತೆರವುಗೊಳಿಸಲಿವೆ. ಸ್ವಯಂ ಪ್ರೇರಿತರಾಗಿ ಮಾಲೀಕರು ಕಟ್ಟಡ ತೆರವುಗೊಳಿಸುವುದು ಉತ್ತಮ. ಇಲ್ಲದಿದ್ದರೆ ನಗರಸಭೆ ಎಲ್ಲವನ್ನೂ ತೆರವುಗೊಳಿಸುತ್ತದೆ.

| ಆರ್.ಪಿ. ಜಾಧವ ಪೌರಾಯುಕ್ತ

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...