ಗ್ರಾಪಂ ಆಡಳಿತಾಧಿಕಾರಿಗಳಿಂದ ಅನಿರ್ದಿಷ್ಟಾವಧಿ ಮುಷ್ಕರ

strike
Published on

ಸುಳ್ಯ:ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಆಡಳಿತಾಧಿಕಾರಿಗಳು ತಾಲೂಕು ಕಚೇರಿ ಮುಂಭಾಗದಲ್ಲಿ ಗುರುವಾರ ಅನಿರ್ಧಿಷ್ಠಾವಧಿ ಮುಷ್ಕರ ಆರಂಭಿಸಿದರು.

ವಿವಿಧ ಸಮಸ್ಯೆಗಳನ್ನು ತಿಳಿಸಿದ ಅವರು ಪ್ರಮುಖವಾಗಿ ಮೊಬೈಲ್ ಆ್ಯಪ್ ಮತ್ತು ವೆಬ್ ಅಪ್ಲಿಕೇಷನ್‌ಗಳ ಮೂಲಕ ಆಗುತ್ತಿರುವ ಸಮಸ್ಯೆ, ಇಲಾಖೆಯಿಂದ ಅಭಿವೃದ್ಧಿಪಡಿಸಿದ ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿದ್ದರೂ ಅದಕ್ಕೆ ಪೂರಕವಾಗಿ ಸವಲತ್ತುಗಳನ್ನು ನೀಡದಿರುವುದು, ಪದೋನ್ನತಿ ನೀಡದಿರುವುದು, ಅಂತರ್ ಜಿಲ್ಲಾ ಪತಿ-ಪತ್ನಿ ಪ್ರಕರಣಗಳ ವರ್ಗಾವಣೆಯ ಚಾಲನೆ ನೀಡುವುದು ಮೊದಲಾದ ಬೇಡಿಕೆಗಳನ್ನು ಮುಂದಿರಿಸಿ ಮುಷ್ಕರ ಹೂಡಿದ್ದಾರೆ.

ಈ ಎಲ್ಲ ಬೇಡಿಕೆಗಳು ಈಡೇರುವವರೆಗೆ ಮೊಬೈಲ್ ಆ್ಯಪ್ ಹಾಗೂ ವೆಬ್ ಅಪ್ಲಿಕೇಷನ್ ಸ್ಥಗಿತಗೊಳಿಸಿ, ಲೇಖನಿ ಸ್ಥಗಿತಗೊಳಿಸುವ ಮೂಲಕ ಅನಿರ್ಧಿಷ್ಟಾವಧಿ ಮುಷ್ಕರವನ್ನು ಮಾಡಲಾಗುತ್ತಿದೆ. ಈ ಸಂದರ್ಭದಲ್ಲಿ ಸಂಘದ ತಾಲೂಕು ಸಮಿತಿ ಅಧ್ಯಕ್ಷ ಶಿವರಾಜ್ ಗಾಯಕ್ವಾಡ್, ಗೌರವಾಧ್ಯಕ್ಷ ತಿಪ್ಪೇಶ್, ಉಪಾಧ್ಯಕ್ಷರಾದ ಶಾಹಿನಾ, ಪ್ರಧಾನ ಕಾರ್ಯದರ್ಶಿ ಶರತ್ ಕುಮಾರ್, ಕೋಶಾಧಿಕಾರಿ ಅಜ್ಜಯ್ಯ, ಹಾಗೂ ಇತರ ಅಧಿಕಾರಿಗಳು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net