ಎಎಂಎಲ್ ಸಿ ಉಳ್ವೇಕರ್ ವಶಕ್ಕೆ ಪಡೆದು ಬಿಡುಗಡೆ

Tunnel strike
Published on

ಕಾರವಾರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರವಾರ-ಬಿಣಗಾ ಸುರಂಗದಲ್ಲಿ ವಾಹನ ಸಂಚಾರಕ್ಕೆ ಅವಕಾಶ ನೀಡುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳ ಪ್ರಮುಖರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಸುರಂಗ ಮಾರ್ಗಕ್ಕೆ ಅಳವಡಿಸಿದ್ದ ಬ್ಯಾರಿಕೇಡ್ ತೆರವು ಮಾಡಲು ಯತ್ನಿಸುತ್ತಿದ್ದಂತೆ ಪೊಲೀಸರು ಎಂಎಲ್ ಸಿ ಗಣಪತಿ ಉಳ್ವೇಕರ್ ಸೇರಿ ಹೋರಾಟಗಾರರನ್ನು ಬಂಧಿಸಿ ಬಿಡುಗಡೆ ಮಾಡಿದರು.

ಇದನ್ನೂ ಓದಿ:ಕಂಟೇನರ್‌ನಲ್ಲಿದ್ದ ಸಾಗಿಸುತ್ತಿದ್ದ 5 ಲಕ್ಷದ ಮದ್ಯ ವಶ
ಈ ಸಂದರ್ಭದಲ್ಲಿ ಪೊಲೀಸರು-ಪ್ರತಿಭಟನಾಕಾರರ ನಡುವೆ ತಳ್ಳಾಟ ನಡೆಯಿತು. ನಂತರವೂ ಭಾರಿ ಮಳೆಯಲ್ಲಿ ಪ್ರತಿಭಟನೆ ಮುಂದುವರಿಯಿತು. ಜಿಲ್ಲಾಧಿಕಾರಿ ಸ್ಥಳಕ್ಕೆ ಆಗಮಿಸಬೇಕು ಎಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net