25.1 C
Bangalore
Friday, December 6, 2019

ನ್ಯಾಯ ಕೋರಿ ಹಣ್ಣು ವ್ಯಾಪಾರಸ್ಥರ ಧರಣಿ

Latest News

ಬಳ್ಳಾರಿ ಜಿಲ್ಲೆಯಲ್ಲಿ ನರೇಗಾ ಕಾಮಗಾರಿ ಪರಿಶೀಲಿಸಿದ ಕೇಂದ್ರ ಅಧ್ಯಯನ ತಂಡ

ಬಳ್ಳಾರಿ: ನರೇಗಾ ರಾಷ್ಟ್ರೀಯ ಪ್ರಶಸ್ತಿ ಶಿಫಾರಸಿಗೆ ದೇಶದ ಒಂಬತ್ತು ಜಿಲ್ಲೆಗಳ ಪೈಕಿ ಕರ್ನಾಟಕದಿಂದ ಆಯ್ಕೆಯಾಗಿರುವ ಬಳ್ಳಾರಿ ಜಿಲ್ಲೆಗೆ ಕೇಂದ್ರ ಅಧ್ಯಯನ ತಂಡ ಶುಕ್ರವಾರ...

ಹಂಪಿ ವಿವಿ ಕೇಂದ್ರ ಸ್ಥಳಾಂತರ ಕೈಬಿಡಿ

ಬಾದಾಮಿ: ಬನಶಂಕರಿಯಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕೇಂದ್ರವನ್ನು ಸ್ಥಳಾಂತರ ಮಾಡಬಾರದು ಎಂದು ಆಗ್ರಹಿಸಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ...

ಅವೈಜ್ಞಾನಿಕ ಉಳುಮೆಯಿಂದ ಮಣ್ಣಿನ ಸವಕಳಿ, ಹೊಸಪೇಟೆ ಕೃಷಿ ಇಲಾಖೆ ಡಿಡಿ ಸಹದೇವ ಯರಗುಪ್ಪ ಹೇಳಿಕೆ

ಕೂಡ್ಲಿಗಿ: ರೈತರ ಜೀವನಕ್ಕೆ ಆಧಾರವಾಗಿರುವ ಮಣ್ಣಿನ ಸಂರಕ್ಷಣೆ ಮಾಡಬೇಕಾದ ಅಗತ್ಯವಿದೆ ಎಂದು ಕೃಷಿ ಇಲಾಖೆ ಹೊಸಪೇಟೆ ವಿಭಾಗದ ಉಪನಿರ್ದೇಶಕ ಸಹದೇವ ಯರಗುಪ್ಪ ಹೇಳಿದರು. ಪಟ್ಟಣದ...

ಮಲಗಿದ ಮೇಲೆ ಸಂಪೂರ್ಣ ಸುಖ ನಿದ್ದೆಗೆ ಇಲ್ಲಿವೆ ಕೆಲ ಟಿಪ್ಸ್​ಗಳು

ಸಂಪುರ್ಣ ಎಂಟು ತಾಸು ನಿದ್ದೆ..! - ನಿದ್ದೆ ಮಾಡಿದ ಮೇಲೆ ಮಧ್ಯೆ ಯಾವುದಕ್ಕೂ ಅಂದರೆ ಬಾತ್​ರೂಂಗೆ ಹೋಗಲು, ನೀರು ಕುಡಿಯಲು, ನಿಮ್ಮ ಮೊಬೈಲ್​ ಚೆಕ್​ ಮಾಡಲು...

ಗೊರಗುದ್ದಿ ಶಾಲೆ ಗೋಳು ಕೇಳೋರಿಲ್ಲ

|ಬೆಳ್ಳೆಪ್ಪ ಮ.ದಳವಾಯಿ ಕಡಬಿ ಸರ್ಕಾರ ಸರ್ವಶಿಕ್ಷಣ ಅಭಿಯಾನದ ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ. ಅಲ್ಲದೆ ಆ ಯೋಜನೆಗಳಿಗೆ ಸರ್ಕಾರ ಕೋಟ್ಯಂತರ ರೂ.ಹಣ ಖರ್ಚು...

ಮುದ್ದೇಬಿಹಾಳ: ಪಟ್ಟಣದ ಬಸ್ ನಿಲ್ದಾಣ, ಪುಟ್​ಪಾತ್ ಹಾಗೂ ಬಸವೇಶ್ವರ ವೃತ್ತ ಸುತ್ತಮುತ್ತ ಹಣ್ಣಿನ ವ್ಯಾಪಾರಿಗಳು ತಮಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ನಿವಾಸದೆದುರಿಗೆ ಶನಿವಾರ ಧರಣಿ ನಡೆಸಿದರು.

ಎರಡು ದಿನಗಳ ಹಿಂದೆ ಪುರಸಭೆ ಹಾಗೂ ಪೊಲೀಸ್ ಅಧಿಕಾರಿಗಳು ರಸ್ತೆ ಅಕ್ಕಪಕ್ಕದಲ್ಲಿ ಮಾರಾಟ ಮಾಡುವ ಕೈಗಾಡಿಗಳು ಹಾಗೂ ತಳ್ಳು ಗಾಡಿಗಳ ವ್ಯಾಪಾರ ನಿಲ್ಲಿಸುವಂತೆ ತಿಳಿಸಿ, ಎಲ್ಲರೂ ಒಂದೇ ಜಾಗದಲ್ಲಿ ವ್ಯಾಪಾರ ಮಾಡಲು ಸೂಚಿಸಿದ್ದರು. ಅದಕ್ಕಾಗಿ ಶನಿವಾರ ಬೆಳಗ್ಗೆ ಪಟ್ಟಣದ ಹಳೇ ತಹಸೀಲ್ದಾರ್ ಕಚೇರಿ ಎದುರಿಗೆ ಪುರಸಭೆ ಜಾಗ ಸ್ವಚ್ಛತೆ ಮಾಡಿ, ಸುಣ್ಣದ ಗೆರೆ ಹಾಕಿ ವಿವಿಧ ಹಣ್ಣು ಮಾರಾಟ ಮಾಡಲಿದ್ದ ತಳ್ಳುಗಾಡಿಗಳನ್ನು ಸಾಲಾಗಿ ನಿಲ್ಲಿಸಿ ವ್ಯಾಪಾರ ನಡೆಸಲು ಸಿಪಿಐ ರವಿಕುಮಾರ ಕಪ್ಪತ್ತನವರ, ಪಿಎಸ್​ಐ ಗೋವಿಂದಗೌಡ ಪಾಟೀಲ ನೇತೃತ್ವದಲ್ಲಿ ಸಿಬ್ಬಂದಿ ತಿಳಿಸಿದ್ದರು.

ಅದೇ ರೀತಿ ಪುರಸಭೆ ಅಧಿಕಾರಿಗಳು ವ್ಯಾಪಾರಿಗಳಿಗೆ ಹಳೇ ತಹಸೀಲ್ದಾರ್ ಕಚೇರಿ ಜಾಗದಲ್ಲಿ ಒಂದೇ ಕಡೆ ವ್ಯಾಪಾರ ಮಾಡುವಂತೆ ಸೂಚಿಸಿದ್ದರಿಂದ ಹಣ್ಣು ವ್ಯಾಪಾರಿಗಳು ಶಾಸಕ ನಡಹಳ್ಳಿ ಅವರ ನಿವಾಸಕ್ಕೆ ಆಗಮಿಸಿದ ತಮಗೆ ನ್ಯಾಯ ದೊರಕಿಸಿಕೊಡುವಂತೆ ಧರಣಿ ಆರಂಭಿಸಿದರು.

ಈ ವೇಳೆ ಶಾಸಕರ ನಿವಾಸಕ್ಕೆ ಭೇಟಿ ನೀಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಬೀದಿ ಬದಿ ವ್ಯಾಪಾರಸ್ಥರಾದ ರಾಯವ್ವ ಬನ್ನೆಟ್ಟಿ, ಬಿಸ್ಮಿಲ್ಲಾ ಬಾಗವಾನ್, ರಾಜು ವಾಲೀಕಾರ, ಮೊಹ್ಮದ್ ಮಮದಾಪುರ ಮತ್ತಿತರರು, ಒಂದೇ ಸ್ಥಳದಲ್ಲಿ ವ್ಯಾಪಾರ ಮಾಡಿದರೆ ವ್ಯಾಪಾರ ಆಗುವುದಿಲ್ಲ. ನಾವು ರಸ್ತೆಯಿಂದ ದೂರವೇ ಕುಳಿತು ವ್ಯಾಪಾರ ಮಾಡುತ್ತೇವೆ. ಆದರೆ, ಬೈಕ್ ಸವಾರರಿಗೆ ಒಂದೆಡೆ ಸ್ಥಳಾವಕಾಶ ಕಲ್ಪಿಸಿದರೆ ಜನದಟ್ಟಣೆ ಆಗುವುದಿಲ್ಲ. ಸಾವಿರಾರು ರೂ. ಕೊಟ್ಟು ಹಣ್ಣು ಖರೀದಿ ಮಾಡಿದ್ದೇವೆ. ಆವತ್ತಿನ ಸಾಮಗ್ರಿ ಆವತ್ತೆ ಮಾರಾಟ ಮಾಡಬೇಕು. ಆದರೆ, ಪೊಲೀಸ್ ಇಲಾಖೆಯತ್ತ ಪುರಸಭೆಯವರು, ಪುರಸಭೆಯತ್ತ ಪೊಲೀಸರು ಬೊಟ್ಟು ಮಾಡುತ್ತಿದ್ದಾರೆ. ನಮ್ಮ ಸಮಸ್ಯೆಯನ್ನು ಯಾರು ಅರಿಯುವ ಗೋಜಿಗೆ ಹೋಗುತ್ತಿಲ್ಲ ಎಂದು ವ್ಯಾಪಾರಸ್ಥರು ಅಳಲು ತೋಡಿಕೊಂಡರು.

ಈ ವೇಳೆ ಶಾಸಕರ ಸಂಬಂಧಿ ಬಸನಗೌಡ ಪಾಟೀಲ, ಬೆಂಬಲಿಗರಾದ ಸಂಗಮ್ಮ ದೇವರಳ್ಳಿ, ಸರಸ್ವತಿ ಪೀರಾಪುರ ಮತ್ತಿತರರು ವ್ಯಾಪಾರಸ್ಥರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಸಂಬಂಧ ಸಿಪಿಐ ಕಚೇರಿಗೆ ತೆರಳಿ ಅಧಿಕಾರಿಗಳ ಜತೆ ಮಾತನಾಡಲು ತೆರಳಿದ್ದರು. ಆದರೆ, ಸಿಪಿಐ ಕಚೇರಿಯಲ್ಲಿಲ್ಲದ ಕಾರಣ ವಾಪಾಸು ನಿವಾಸಕ್ಕೆ ಮರಳಿದರು. ಎರಡ್ಮೂರು ದಿನಗಳಲ್ಲಿ ಶಾಸಕರು ಕ್ಷೇತ್ರಕ್ಕೆ ಮರಳಲಿದ್ದು, ಅವರ ಬಳಿ ಸಮಸ್ಯೆ ಪರಿಹರಿಸುವ ಕುರಿತು ಮಾತನಾಡೋಣ ಎಂದು ಅವರು ಹೇಳಿದರು. ಅದಕ್ಕೆ ಸಮ್ಮತಿಸಿದ ಹಣ್ಣು ವ್ಯಾಪಾರಿಗಳು ಅಲ್ಲಿಂದ ತೆರಳಿದರು.

ವ್ಯಾಪಾರಸ್ಥರಾದ ಯಲ್ಲಪ್ಪ ಗುಂಡಕರ್ಜಗಿ, ನಬಿಲಾಲ ನದಾಫ್, ಬಸವರಾಜ ಕಲಬುರ್ಗಿ, ಭೀಮಪ್ಪ ಭಜಂತ್ರಿ, ಅಶೋಕ ಬಿರಾದಾರ, ಜಯಶ್ರೀ ಭಜಂತ್ರಿ, ಬಾಲವ್ವ ಅಂಬಿಗೇರ, ಕೆಂಚವ್ವ ವಾಲೀಕಾರ, ಕವಿತಾ ಕುಡ್ಲಾಪುರ, ಲಕ್ಷ್ಮಿಬಾಯಿ ಮಾದರ, ಖಾಲಿಮಾ ಪಿಂಜಾರ್, ಬಸಮ್ಮ ವಡ್ಡರ, ಹುಸೇನಬಿ ಬಾಗವಾನ್, ಮಹಿಬೂಬ ಜಹಾಗೀರದಾರ್ ಮತ್ತಿತರರು ಇದ್ದರು.

Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...