ಬಂಟ್ವಾಳದಲ್ಲಿ ಮನವಿ ಸಲ್ಲಿಕೆ

manavi

ಬಂಟ್ವಾಳ: ಕರ್ನಾಟಕ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ, ರಾಜ್ಯ ಸಂಘ ನಾನಾ ಬೇಡಿಕೆಗಳ ಈಡೇರಿಕೆಗೆ ಅನಿರ್ದಿಷ್ಟಾವಧಿ ಮುಷ್ಕರವನ್ನು ರಾಜ್ಯಾದ್ಯಂತ ಆಯೋಜಿಸಿದ್ದು, ಅದರಂತೆ ಬಂಟ್ವಾಳದಲ್ಲೂ ಗುರುವಾರ ಮುಷ್ಕರ ನಡೆಯಿತು.

ಬಂಟ್ವಾಳ ತಹಸೀಲ್ದಾರ್ ಅರ್ಚನಾ ಭಟ್ ಮೂಲಕ ಕಂದಾಯ ಸಚಿವರಿಗೆ ಮನವಿ ಸಂಘದ ವತಿಯಿಂದ ಸಲ್ಲಿಸಲಾಯಿತು.

ಪ್ರಾಸ್ತಾವಿಕವಾಗಿ ಮಾತನಾಡಿದ ಗ್ರಾಮಾಡಳಿತ ಅಧಿಕಾರಿಗಳ ಸಂಘದ ತಾಲೂಕು ಅಧ್ಯಕ್ಷ ಅನಿಲ್ ಕೆ. ಪೂಜಾರಿ ಸಮಸ್ಯೆಗಳ ಕುರಿತು ಮಾಹಿತಿ ನೀಡಿದರು. ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಉಮಾನಾಥ ರೈ ಮೇರಾವು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಮಾತನಾಡಿ ಗ್ರಾಮಾಡಳಿತ ಅಧಿಕಾರಿಗಳ ಬೇಡಿಕೆಗೆ ಪೂರಕವಾಗಿ ಸಂಘ ನಿಲ್ಲುತ್ತದೆ ಎಂದರು.

ಮುಷ್ಕರಕ್ಕೆ ಬೆಂಬಲವಾಗಿ ಕಂದಾಯ ಇಲಾಖಾ ನೌಕರರ ಸಂಘದ ತಾಲೂಕು ಅಧ್ಯಕ್ಷ ರಾಜೇಶ್ ನಾಯ್ಕ, ರಾಜ್ಯ ಗ್ರಾಮ ಆಡಳಿತಾಧಿಕಾರಿಗಳ ಸಂಘದ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಜೆ.ಜನಾರ್ದನ, ಎನ್.ಪಿ.ಎಸ್. ನೌಕರರ ಸಂಘದ ತಾಲೂಕು ಅಧ್ಯಕ್ಷ ಸಂತೋಷ್ ಸಹಿತ ನಾನಾ ಇಲಾಖೆಗಳ ಪ್ರತಿನಿಧಿಗಳು ಭಾಗವಹಿಸಿದರು. ಗ್ರಾಮಾಡಳಿತ ಅಧಿಕಾರಿಗಳ ಸಂಘದ ತಾಲೂಕು ಉಪಾಧ್ಯಕ್ಷ ಕರಿಬಸಪ್ಪ ನಾಯ್ಕ, ಪ್ರಧಾನ ಕಾರ್ಯದರ್ಶಿ ಪ್ರಶಾಂತ್, ಜಿಲ್ಲಾ ಪ್ರತಿನಿಧಿ ಪ್ರಕಾಶ್ ಮತ್ತಿಹಳ್ಳಿ, ಖಜಾಂಚಿ ವೈಶಾಲಿ, ಗೌರವಾಧ್ಯಕ್ಷ ಪ್ರವೀಣ್ ಕುಮಾರ್ ಸಹಿತ ಗ್ರಾಮಾಡಳಿತ ಅಧಿಕಾರಿಗಳು ಮುಷ್ಕರದಲ್ಲಿ ಪಾಲ್ಗೊಂಡರು.

Share This Article

ಸಂಬಳ ಸಾಲ್ತಿಲ್ಲ! ಸಾಲ ತೀರಿಸಲು ಚಿನ್ನದ ಸಾಲ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳನ್ನು ಮಾತ್ರ ಮಾಡಬೇಡಿ | Gold Loan

Gold Loan: ಸಂಸ್ಥೆ ಕೊಡುತ್ತಿರುವ ಸಂಬಳ ನಮಗೆ ಮಾತ್ರವಲ್ಲ, ನಮ್ಮ ಸಾಲ ತೀರಿಸಲು ಸಹ ಸಾಲುತ್ತಿಲ್ಲ…

ಭಾರತದಲ್ಲಿ ಅನಾರೋಗ್ಯಕರ ಆಹಾರ ಸೇವನೆಯೇ ಹೆಚ್ಚು: ಶೇ. 56 ರೋಗಗಳಿಗೆ ಕೆಟ್ಟ ಆಹಾರ ಪದ್ಧತಿ ಕಾರಣವೆಂದ ಏಮ್ಸ್! Indians Food

Indians Food : ಭಾರತದಲ್ಲಿ ಬೊಜ್ಜು ಅಥವಾ ಸ್ಥೂಲಕಾಯತೆ ಇಂದು ಸಾಮಾನ್ಯ ಹಾಗೂ ಸಂಕೀರ್ಣ ಕಾಯಿಲೆಗಳಲ್ಲಿ…

ನೀವು ಚಿಕನ್ ಅಥವಾ ಮಟನ್​ ಲಿವರ್​ ತಿಂತಿರಾ? ಹಾಗಾದ್ರೆ ಎಚ್ಚರ! ಈ ವಿಚಾರ ನಿಮಗೆ ಗೊತ್ತಿರಲೇಬೇಕು… Liver

Liver : ಮಾಂಸಾಹಾರ ಬಹುತೇಕರ ಪ್ರಿಯವಾದ ಆಹಾರ. ಬೇರೆ ಯಾವುದನ್ನು ಬೇಕಾದರೂ ಬಿಡುತ್ತೇನೆ ಆದರೆ, ಒಂದು…