ವಿದ್ಯಾರ್ಥಿ ವೇತನ ಹೆಚ್ಚಳಕ್ಕೆ ಒತ್ತಾಯಿಸಿ ಮುಷ್ಕರ

sims

ಶಿವಮೊಗ್ಗ: ವಿದ್ಯಾರ್ಥಿ ವೇತನ ಹೆಚ್ಚಳಕ್ಕಾಗಿ ಆಗ್ರಹಿಸಿ ಕರ್ನಾಟಕ ಗೃಹ ವೈದ್ಯರ ಸಂಘ ಸೋಮವಾರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ಗೃಹ ವೈದ್ಯರು ಕಾಲೇಜಿನ ಎದುರು ಪ್ರತಿಭಟನೆ ನಡೆಸಿದರು.

ಸಿಮ್ಸ್ ಗೃಹ ವೈದ್ಯರ ಸಂಘದ ಅಧ್ಯಕ್ಷ ರಾಕೇಶ್ ಮಾತನಾಡಿ, ಈಗಾಗಲೇ ಗೃಹ ವೈದ್ಯರಿಗೆ ದೆಹಲಿಯಲ್ಲಿ ಒಂದು ಲಕ್ಷ ರೂ., ರಾಜಸ್ಥಾನದಲ್ಲಿ 85 ಸಾವಿರ, ಗುಜರಾತ್‌ನಲ್ಲಿ 80 ಸಾವಿರ, ಮಹಾರಾಷ್ಟ್ರದಲ್ಲಿ 75 ಸಾವಿರ ರೂ. ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಅಲ್ಲೆಲ್ಲ ಕೆಲಸದ ಅವಧಿಯೂ ಕಡಿಮೆ ಇದೆ. ಅಲ್ಲಿ ವೈದ್ಯಕೀಯ ವ್ಯಾಸಂಗದ ಶುಲ್ಕವೂ ಕಡಿಮೆಯಿದೆ. ಆದರೆ ಕರ್ನಾಟಕದಲ್ಲಿ ವಿದ್ಯಾರ್ಥಿ ವೇತನ 45-55 ಸಾವಿರ ರೂ. ಮಾತ್ರ ಇದೆ. ವಿದ್ಯಾರ್ಥಿಗಳಿಂದ 1.30 ಲಕ್ಷ ರೂ. ಶುಲ್ಕ ಪಡೆಯಲಾಗುತ್ತಿದೆ ಎಂದು ದೂರಿದರು.
ಗೃಹ ವೈದ್ಯರು ವಾರಕ್ಕೆ 90 ಗಂಟೆ ಸೇವೆ ನೀಡಬೇಕಾಗಿದೆ. ಹಾಸ್ಟೆಲ್ ಮತ್ತು ಇನ್ನಿತರ ಶುಲ್ಕವನ್ನು ಕಡಿತಗೊಳಿಸಿ ಕೇವಲ 20 ಸಾವಿರ ರೂ. ನಮಗೆ ನೀಡಲಾಗುತ್ತಿದೆ. 90 ಗಂಟೆ ದುಡಿಸಿಕೊಂಡು ಕೇವಲ 20 ಸಾವಿರ ರೂ. ನೀಡಲಾಗುತ್ತಿದೆ. ಈ ಬಗ್ಗೆ ಸಚಿವರು, ಅಧಿಕಾರಿಗಳು, ವೈದ್ಯಕೀಯ ಸಂಸ್ಥೆಗಳ ಮುಖ್ಯಸ್ಥರಿಗೆ ಹಲವು ಬಾರಿ ಬೇಡಿಕೆ ಸಲ್ಲಿಸಿದ್ದೇವೆ. ಆದರೂ ಪ್ರಯೋಜನವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ತುರ್ತು ಸಂದರ್ಭಗಳಲ್ಲಿ ತೊಂದರೆಯಾಗದಂತೆ ನಾವು ಸಹಕಾರ ನೀಡುತ್ತೇವೆ. ಆದರೆ ಬಡ ರೋಗಿಗಳಿಗೆ ಚಿಕಿತ್ಸೆ ನೀಡುವ ನಮಗೆ ಸಿಗಬೇಕಾದ ಗೌರವ ಹಾಗೂ ಸಂಬಳ ದೊರೆಯುತ್ತಿಲ್ಲ. ಸರ್ಕಾರ ಕೂಡಲೇ ಈ ಬಗ್ಗೆ ಗಮನ ಹರಿಸಬೇಕು ಎಂದು ಆಗ್ರಹಿಸಿದರು.

Share This Article

ಎಚ್ಚರ, ದೇಹ ದಣಿದಿದ್ರೂ ನಿದ್ದೆ ಬರ್ತಿಲ್ಲವೇ? ಸಿರ್ಕಾಡಿಯನ್ ಸಿಂಡ್ರೋಮ್​ ಇರಬಹುದು!!

ಬೆಂಗಳೂರು: ದೇಹ ದಣಿದಿರುತ್ತದೆ. ಆದರೆ ನಿದ್ರೆ ಬರುತ್ತಿಲ್ಲ. ಇದಕ್ಕೆ ದೇಹದ ಸಿರ್ಕಾಡಿಯನ್ ಲಯ ತಪ್ಪಿರುವುದು, ಅತಿಯಾದ…

ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಇಷ್ಟೆಲ್ಲ ಪ್ರಯೋಜನಗಳಿವೆಯಾ? ಇಲ್ಲಿದೆ ಉಪಯುಕ್ತ ಮಾಹಿತಿ….

ಇಂದು ಬಹುತೇಕರು ಡೈನಿಂಗ್ ಟೇಬಲ್ ಮೇಲೆ ಕುಳಿತು ಊಟ ಮಾಡುತ್ತಿದ್ದಾರೆ. ಆದರೆ, ಮೊದ ಮೊದಲು ಹೆಚ್ಚಿನ…

ನೀವು ಎಷ್ಟು ಆರೋಗ್ಯವಂತರೆಂದು ತಿಳಿಯಲು ನಿಮ್ಮ ನಾಲಿಗೆ ಬಣ್ಣ ಚೆಕ್​ ಮಾಡಿ! ಈ ಬಣ್ಣದಲ್ಲಿದ್ರೆ ತುಂಬಾ ಡೇಂಜರ್​!

ಪ್ರತಿಯೊಬ್ಬರೂ ಆರೋಗ್ಯವಾಗಿರಲು ಬಯಸುತ್ತಾರೆ. ಏಕೆಂದರೆ, ಆರೋಗ್ಯವೇ ಭಾಗ್ಯ. ಎಲ್ಲ ಇದ್ದು ಆರೋಗ್ಯವೇ ಇಲ್ಲದಿದ್ದರೆ ಏನು ಪ್ರಯೋಜನಾ?…