More

    ಶೇ.100 ರಷ್ಟು ಮತದಾನಕ್ಕೆ ಶ್ರಮಿಸಿ

    ಎನ್.ಆರ್.ಪುರ: ಮತದಾನ ಮಾಡುವುದು ನಮ್ಮ ಹಕ್ಕಾಗಿದ್ದು ಪ್ರತಿಯೊಬ್ಬರೂ ಮತದಾನದಲ್ಲಿ ಪಾಲ್ಗೊಳ್ಳಬೇಕು ಎಂದು ಪಿಎಸ್‌ಐ ಬಿ.ಎಸ್.ನಿರಂಜನ್‌ಗೌಡ ಹೇಳಿದರು.
    ಬುಧವಾರ ಪಪಂ ಎದುರಿನ ರಸ್ತೆ ಸರ್ಕಲ್‌ನಲ್ಲಿ ಪಟ್ಟಣ ಪಂಚಾಯಿತಿಯು ಆಯೋಜಿಸಿದ್ದ ಮತದಾರರ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ, ವಿದ್ಯಾವಂತರಿಗಿಂತ ಅವಿದ್ಯಾವಂತರೇ ಹೆಚ್ಚು ಮತದಾನ ಮಾಡುತ್ತಾರೆ. ಗ್ರಾಮೀಣ ಭಾಗದ ಜನರು ತಪ್ಪದೆ ಮತ ಹಾಕುತ್ತಾರೆ. ಆದರೆ, ಪಟ್ಟಣದ ಜನರು ಮತದಾನದ ಬಗ್ಗೆ ನಿರ್ಲಕ್ಷೃ ವಹಿಸುತ್ತಾರೆ ಎಂದರು.
    ಪ್ರತಿಯೊಬ್ಬರೂ ಮತದಾನ ಮಾಡಿ ಪ್ರಜಾಪ್ರಭುತ್ವದ ಹಬ್ಬದಲ್ಲಿ ಸೂಕ್ತ ನಾಯಕನನ್ನು ಆಯ್ಕೆಮಾಡಬೇಕು. ಸರ್ಕಾರಿ ನೌಕರರಿಗೆ ವೇತನ ನೀಡಿ ರಜೆ ಸಹ ನೀಡಲಾಗುತ್ತದೆ. ಮತದಾರರು ಆಮಿಷಗಳಿಗೆ ಬಲಿಯಾಗದೆ ಮುಕ್ತವಾಗಿ ಮತಗಟ್ಟೆಗೆ ಹೋಗಿ ಮತ ಚಲಾಯಿಸಬೇಕು. ಈ ಬಾರಿ ಶೇ.100 ರಷ್ಟು ಮತದಾನ ಮಾಡುವ ಮೂಲಕ ಇತರ ಜಿಲ್ಲೆಗಳಿಗೆ ಮಾದರಿಯಾಗಬೇಕು ಎಂದರು.
    ಪಪಂ ಮುಖ್ಯಾಧಿಕಾರಿ ಆರ್.ವಿ.ಮಂಜುನಾಥ್ ಮಾತನಾಡಿ, ಪಟ್ಟಣದಲ್ಲಿ ವಾಹನದ ಮೂಲಕ ಪ್ರಚಾರ ಮಾಡಿ ಮತದಾರರಿಗೆ ಜಾಗೃತಿ ಮೂಡಿಸಲಾಗುತ್ತಿದೆ. ಪಟ್ಟಣದ ವಿವಿಧ ವಾರ್ಡ್‌ನಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಶೇ.100 ರಷ್ಟು ಮತದಾನವಾಗಬೇಕು ಎಂಬುವುದು ಈ ಪ್ರಚಾರದ ಮುಖ್ಯ ಉದ್ದೇಶ ಎಂದು ಹೇಳಿದರು.
    ಕಂದಾಯ ನಿರೀಕ್ಷಕ ವಿಜಯಕುಮಾರ್, ಸಮುದಾಯ ಸಂಘಟಕ ಅಧಿಕಾರಿ ಲಕ್ಷ್ಮಣಗೌಡ ಹಾಗೂ ಪಪಂ ಸಿಬ್ಬಂದಿ, ಪೌರ ಕಾರ್ಮಿಕರು, ಸಾರ್ವಜನಿಕರು ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts