More

    ಸಮ್ಮೇಳನ ಯಶಸ್ವಿಗೆ ಶ್ರಮಿಸಿ

    ಇಲಕಲ್ಲ: ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆ. 27 ರಂದು ನಡೆಯಲಿರುವ ಸರ್ಕಾರಿ ನೌಕರರ ಮಹಾ ಸಮ್ಮೇಳನದಲ್ಲಿ ತಾಲೂಕಿನ ನೌಕರರು ಹೆಚ್ಚಿನ ಸಂಖೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಢಾಕ್ಷರಿ ಹೇಳಿದರು.

    ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ನಡೆದ ನೌಕರರ ಸಂಘದ ಕಾರ್ಯಕಾರಿಣಿ ಸಭೆಯಲ್ಲಿ ಅವರು ಮಾತನಾಡಿದರು.

    ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮೇಳನ ಉದ್ಘಾಟಿಸಲಿದ್ದು, ಡಿಸಿಎಂ ಡಿ.ಕೆ. ಶಿವಕುಮಾರ, ಸಂಪುಟದ ಎಲ್ಲ ಸಚಿವರು, ಭಾಗವಹಿಸುವರು, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಕೃಷ್ಣ ಎಸ್. ದಿಕ್ಷೀತ್, ಖ್ಯಾ ಹೃದಯರೋಗ ತಜ್ಞ ಎನ್. ಮಂಜುನಾಥ ವಿಶೇಷ ಉಪನ್ಯಾಸ ನೀಡುವರು. ಸರ್ಕಾರಿ ನೌಕರರ ಪ್ರಮುಖ ಬೇಡಿಕೆಗಳಾದ ಎನ್‌ಪಿಎಸ್ ರದ್ದು, 7ನೇ ವೇತನ ಆಯೋಗ ಸಂಪೂರ್ಣ ಜಾರಿ, ನಗದುರಹಿತ ಚಿಕಿತ್ಸೆ ಯೋಜನೆ ಜಾರಿಗೊಳಿಸಲು ಹಕ್ಕೋತ್ತಾಯ ಮಾಡಲಾಗುವುದು ಎಂದರು.

    ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಬಳ್ಳಾರಿ, ತಾಲೂಕು ಅಧ್ಯಕ್ಷ ಪರಶುರಾಮ ಪಮ್ಮಾರ ಮಾತನಾಡಿದರು. ರಾಜ್ಯ ಉಪಾಧ್ಯಕ್ಷ ಮೋಹನ ಕುಮಾರ, ಹುನಗುಂದ ತಾಲೂಕು ಅಧ್ಯಕ್ಷ ಸಂಗಣ್ಣ ಹಂಡಿ, ಗ್ರೇಡ್- 2 ತಹಸೀಲ್ದಾರ್ ಈಶ್ವರ ಗಡ್ಡಿ, ಕಾರ್ಯದರ್ಶಿ ಗುಂಡಪ್ಪ ಕುರಿ, ಖಜಾಂಚಿ ಶರಣು ಕೊಣ್ಣೂರ, ಗೌರವಾಧ್ಯಕ್ಷ ಎಸ್. ಎನ್. ಗಡೇದ, ಶಿಕ್ಷಣಾಧಿಕಾರಿಗಳ ಸಂಘದ ಅಧ್ಯಕ್ಷ ಎಂ. ಪಿ. ಗೋಟೂರ, ಶಿಕ್ಷಕರ ಸಂಘದ ಅಧ್ಯಕ್ಷ ಆರ್. ಎಂ. ಮಾಸರಡ್ಡಿ, ಜಿಲ್ಲಾ ಖಜಾಂಚಿ ಮುತ್ತಣ್ಣ ಬೀಳಗಿ, ಆರೋಗ್ಯ ಇಲಾಖೆ ನೌಕರ ಸಂಘದ ಭದ್ರಣ್ಣವರ, ಗ್ರಾಮ ಆಡಳಿತ ಅಧಿಕಾರಿ ನೌಕರ ಸಂಘದ ಅಧ್ಯಕ್ಷ ಶಂಕರ ಲಮಾಣಿ, ಪ್ರೌಡಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಜಿ. ಎಸ್. ಅಡವಿ, ಸದಾಶಿವ ಬಾಗಿ, ಎನ್‌ಪಿಎಸ್ ನೌಕರರ ಸಂಘದ ಅಧ್ಯಕ್ಷ ಸಂಗಮೇಶ ಪಾಟೀಲ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts