More

    ಮೈತ್ರಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ

    ಕೋಲಾರ: ಲೋಕಸಭೆ ಚುನಾವಣೆಯು ಎನ್‌ಡಿಎ ಮೈತ್ರಿಯೊಂದಿಗೆ ನಡೆಯಲಿದ್ದು, ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲು ಅಣ್ಣ-ತಮ್ಮಂದಿರAತೆ ಶ್ರಮಿಸಬೇಕು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

    ನಗರ ಹೊರವಲಯದ ಖಾಸಗಿ ಕಲ್ಯಾಣ ಮಂಟಪದಲ್ಲಿ ಬುಧವಾರ ಲೋಕಸಭೆ ಕ್ಷೇತ್ರದ ಜೆಡಿಎಸ್-ಬಿಜೆಪಿ ಮೈತ್ರಿ ಕುರಿತು ಕರೆದಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಕೆಲವೇ ದಿನಗಳಲ್ಲಿ ಅಧಿಸೂಚನೆ ಪ್ರಕಟವಾಗಲಿದೆ. ಎರಡ್ಮೂರು ದಿನದಲ್ಲಿ ಅಭ್ಯರ್ಥಿ ಘೋಷಣೆಯಾಗುವ ಸಾಧ್ಯತೆಯಿದ್ದು, ನಂತರ ಜಂಟಿ ಸಭೆಗಳು ಹೆಚ್ಚÀಬೇಕು. ಎರಡು ಪಕ್ಷದ ನಾಯಕರ ನಡುವೆ ಸಮನ್ವಯ ಬೆಳೆಯಬೇಕು ಎಂದರು.
    ಸಂಘಟನೆ ಚುನಾವಣೆ ಸಂದರ್ಭಕ್ಕೆ ಸೀಮಿತಗೊಳ್ಳಬಾರದು, ಅದು ನಿರಂತರವಾಗಿರಬೇಕು. ಆಗ ಮಾತ್ರ ಕಾರ್ಯಕರ್ತರ ಬೇಡಿಕೆ ಈಡೇರಿಸಲು ಸಾಧ್ಯವಾಗುತ್ತದೆ. ವಿಧಾನಸಭೆ ಚುನಾವಣೆಯಲ್ಲಿ ಕೆಲ ತಪ್ಪುಗಳಿಂದ ಅಭ್ಯರ್ಥಿಗಳು ಸೋಲು ಅನುಭವಿಸುವಂತಾಗಿದೆ. ಆದರೂ ಎದೆಗುಂದದೆ ಪಕ್ಷದ ಚಟುವಟಿಕೆಗಳಲ್ಲಿ ಮುಖಂಡರು ತೊಡಗಿಸಿಕೊಂಡಿರುವುದು ಶ್ಲಾಘನೀಯ ಎಂದರು.
    ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಚುನಾವಣೆ ನಡೆಸಲು ತೀರ್ಮಾನವಾಗಿದ್ದು, ರಾಜ್ಯದಲ್ಲಿ ೨೮ ಸ್ಥಾನಗಳನ್ನು ಗೆಲ್ಲುವ ಮೂಲಕ ಮೋದಿ ಅವರನ್ನು ಮೂರನೇ ಬಾರಿ ಪ್ರಧಾನಿಯನ್ನಾಗಿ ಮಾಡಬೇಕಾದ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ತಿಳಿಸಿದರು.

    ವಾರದ ಕೊನೆಯಲ್ಲಿ ಅಭ್ಯರ್ಥಿ ಘೋಷಣೆ:
    ಕೋಲಾರದ 8 ವಿಧಾನಸಭಾ ಕ್ಷೇತ್ರಗಳಲ್ಲೂ ಪ್ರವಾಸ ಮಾಡಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ವರಿಷ್ಠರ ಗಮನಕ್ಕೆ ತರಲಾಗುವುದು. 8 ಕ್ಷೇತ್ರಗಳ ಪೈಕಿ ಮೂರರಲ್ಲಿ ಜೆಡಿಎಸ್ ಶಾಸಕರಿದ್ದಾರೆ. ವಾರದ ಕೊನೆಯಲ್ಲಿ ೨೮ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಘೋಷಣೆೆಯಾಗಲಿದೆ. ಯಾವುದೇ ಪಕ್ಷದ ಅಭ್ಯರ್ಥಿಗೆ ಟಿಕೆಟ್ ಸಿಕ್ಕಿದರೂ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ನಿಖಿಲ್ ಕುಮಾರಸ್ವಾಮಿ ಕಿವಿಮಾತು ಹೇಳಿದರು.

    ಬೂತ್‌ಮಟ್ಟದಿಂದ ಚುನಾವಣೆ ನಡೆಸಿ:
    ರಾಜ್ಯದಲ್ಲಿ ಇತ್ತೀಚಿಗೆ ೬೯೨ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ ಬರ ಹೆಚ್ಚಾಗಿದೆ. ಬೆಳೆಗಳಿಗೆ ಸೂಕ್ತ ಬೆಲೆ ದೊರೆಯುತ್ತಿಲ್ಲ. ದೇವೇಗೌಡರು ಈ ವಯಸ್ಸಿನಲ್ಲೂ ನಾಡಿನ ಬಗ್ಗೆ ಧ್ವನಿ ಎತ್ತಿದ್ದಾರೆ. ಆದರೆ ಅಽಕಾರಿದಲ್ಲಿರುವ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿಯಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಆರೋಪಿಸಿದರು. ಕಾರ್ಯಕರ್ತರು ಬೂತ್‌ಮಟ್ಟದಿಂದ ಪಕ್ಷ ಸಂಘಟಿಸಿ, ಗೌರವ ಉಳಿಸುವ ನಿಟ್ಟಿನಲ್ಲಿ ಚುನಾವಣೆ ನಡೆಸಬೇಕು ಎಂದರು.

    ಕಹಿ ನೆನಪು ಮರೆತು ಸಿದ್ಧರಾಗಿ
    ವಿಧಾನಸಭೆ ಚುನಾವಣೆಯಲ್ಲಿ ಆಗಿರುವ ಕಹಿ ನೆನಪುಗಳನ್ನು ಮರೆಯುವ ರೀತಿ ಪ್ರತಿಯೊಬ್ಬರೂ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮಹಿಳಾ ಘಟಕದ ಅಧ್ಯಕ್ಷೆ ರಶ್ಮಿ ರಾಮೇಗೌಡ ಹೇಳಿದರು.
    ಈ ಹಿಂದಿನ ತಪ್ಪುಗಳು ಮರುಕಳಿಸದಂತೆ ಕಾರ್ಯಕರ್ತರು ಎಚ್ಚೆತ್ತುಕೊಂಡು ಲೋಕಸಭೆ ಚುನಾವಣೆಗೆ ಸಿದ್ಧರಾಗಬೇಕು ಎಂದ ಅವರು, ಮಹಿಳೆಯರನ್ನು ಅಽಕಾರದಲ್ಲಿ ನೋಡಲು ಮುಖಂಡರು ಸಹಕಾರ ನೀಡಬೇಕು ಎಂದರು.

    ಮೈತ್ರಿ ಅಭ್ಯರ್ಥಿ ಗೆಲುವು ಖಚಿತ
    ನರೇಂದ್ರ ಮೋದಿ ಅವರು ದೇಶವನ್ನು ಅಭಿವೃದ್ಧಿಯತ್ತ ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ. ಸದೃಢ ಭಾರತ ನಿರ್ಮಾಣಕ್ಕಾಗಿ ಮತ್ತೆ ಮೋದಿ ಅವರು ಪ್ರಧಾನಿಯಾಗಲು ಪ್ರತಿಯೊಬ್ಬರೂ ಪಣ ತೊಡಬೇಕು ಎಂದು ವಿಧಾನಪರಿಷತ್ ಸದಸ್ಯ ಇಂಚರ ಗೋವಿಂದರಾಜು ಹೇಳಿದರು.
    ತಾಲೂಕಿನ ಇತ್ತೀಚೆಗೆ ನಡೆದ ಎಂಪಿಸಿಎಸ್, ಎಸ್‌ಎಫ್‌ಸಿಎಸ್ ಚುನಾವಣೆಯಲ್ಲಿ ಜೆಡಿಎಸ್ ಅಽಕಾರದ ಚುಕ್ಕಾಣಿ ಹಿಡಿದಿದೆ. ಅದು ಪಕ್ಷ ಸಂಘಟನೆಗೆ ಬುನಾದಿ ಹಾಕಿದ್ದು, ಲೋಕಸಭೆ ಚುನಾವಣÉಯಲ್ಲಿ ಯಶಸ್ಸು ಕಂಡರೆ ಮುಂದಿನ ಚುನಾವಣೆಗಳು ಮೈತ್ರಿ ಮುಂದುವರಿಯುತ್ತದೆ. ಒಂದೇ ತಾಯಿ ಮಕ್ಕಳಂತೆ ಕೆಲಸ ಮಾಡಿದರೆ ಗೆಲವು ಖಚಿತ ಎಂದು ಹೇಳಿದರು.

    ಜೆಡಿಎಸ್ ಅಭ್ಯರ್ಥಿಗೆ ಟಿಕೆಟ್ ನೀಡಲು ಪಟ್ಟು
    ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ, ಜೆಡಿಎಸ್-ಬಿಜೆಪಿ ಮೈತ್ರಿಗೆ ಕಾರ್ಯಕರ್ತರ ಬೆಂಬಲ ಇದೆ. ಲೋಕಸಭೆ ಚುನಾವಣೆ ಯಶಸ್ವಿಯಾದರೆ ಮುಂದಿನ ಎಲ್ಲ ಚುನಾವಣÉಗಳನ್ನು ಮೈತ್ರಿ ಆಧಾರದ ಮೇರೆಗೆ ನಡೆಸಲಾಗುವುದು. ಕೋಲಾರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದರು.

    ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್, ತಾಲೂಕು ಅಧ್ಯಕ್ಷ ಬಾಬು ಮೌನಿ, ಜಿಪಂ ಮಾಜಿ ಅಧ್ಯಕ್ಷೆ ಚೌಡೇಶ್ವರಿ, ಮಾಜಿ ಸದಸ್ಯ ಬಾಲಾಜಿ ಚನ್ನಯ್ಯ, ಮುಖಂಡರಾದ ಜಿ.ಇ.ರಾಮೇಗೌಡ, ಗಾಯತ್ರಿ ಮುತ್ತಪ್ಪ, ಡಾ.ಡಿ.ಕೆ.ರಮೇಶ್, ಡೊದ್ದಸಬ್ಬೇನಹಳ್ಳಿ ಕೃಷ್ಣಪ್ಪ ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts