More

    ಪಕ್ಷ ಬೆಂಬಲಿತ ಅಭ್ಯರ್ಥಿಗಳ ಆಯ್ಕೆಗೆ ಶ್ರಮಿಸಿ

    ಸಿದ್ದಾಪುರ: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆ ಆಗಬೇಕು. ಕ್ರಿಯಾಶೀಲರಾಗಿರುವವರಿಗೆ ಅವಕಾಶ ನೀಡಲಾಗುತ್ತದೆ. ಪಕ್ಷಕ್ಕೆ ಹೊಸದಾಗಿ ಸೇರ್ಪಡೆಗೊಂಡವರು ಹಾಗೂ ಕಾರ್ಯಕರ್ತರು ಸಂಘರ್ಷ ಮಾಡಿಕೊಳ್ಳದೆ ಸಂಘಟನೆ ಮೂಲಕ ಚುನಾವಣೆಯಲ್ಲಿ ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಹೇಳಿದರು.

    ಪಟ್ಟಣದ ರಾಘವೇಂದ್ರ ಮಠದಲ್ಲಿ ತಾಲೂಕು ಬಿಜೆಪಿ ಘಟಕ ಶನಿವಾರ ಆಯೋಜಿಸಿದ್ದ ಕಾರ್ಯಕರ್ತರ ಸಭೆ ಹಾಗೂ ಪಕ್ಷ ಸೇರ್ಪಡೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

    ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳು ಸಮಾಜದ ಎಲ್ಲ ವರ್ಗದವರಿಗೂ ದೊರೆಯಲು ವ್ಯವಸ್ಥಿತ ಸಂಘಟನೆ ಹಾಗೂ ಉತ್ತಮ ಆಡಳಿತ ಅಗತ್ಯ. ಈಗಾಗಲೆ ರಾಜ್ಯಾದ್ಯಂತ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷ ನಳಿನ್​ಕುಮಾರ್ ಕಟೀಲ್ ನೇತೃತ್ವದಲ್ಲಿ ಐದು ತಂಡಗಳನ್ನಾಗಿ ಮಾಡಿ ಕಾರ್ಯಕರ್ತರ ಸಭೆ ಮಾಡಲಾಗುತ್ತಿದೆ. ಪಕ್ಷಕ್ಕೆ ಸೇರ್ಪಡೆಗೊಂಡವರು ದುಗುಡ ಪಡುವುದು ಬೇಡ. ಸಾರ್ವಜನಿಕ ಕ್ಷೇತ್ರಕ್ಕೆ ಕಾಲಿಟ್ಟ ಮೇಲೆ ಎಲ್ಲವನ್ನೂ ಎದುರಿಸಬೇಕಾಗುತ್ತದೆ ಎಂದು ಸಚಿವ ಹೆಬ್ಬಾರ ಹೇಳಿದರು.

    ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ.ಜಿ. ನಾಯ್ಕ ಹಣಜೀಬೈಲ್ ಮಾತನಾಡಿ, ತಾಲೂಕಿನ 23 ಗ್ರಾಪಂಗಳಲ್ಲಿ ಬಿಜೆಪಿ ಬೆಂಬಲಿತ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಿ ಆಡಳಿತದ ಚುಕ್ಕಾಣಿ ಹಿಡಿಯಲಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದರು.

    ಸಂಸದ ಅನಂತಕುಮಾರ ಹೆಗಡೆ, ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ ಮಾತನಾಡಿದರು. ಎನ್.ಎಸ್. ಹೆಗಡೆ, ಚಂದ್ರು ಎಸಳೆ, ಎಂ.ಜಿ. ಭಟ್ಟ, ಕೃಷ್ಣಮೂರ್ತಿ ಕಡಕೇರಿ, ಮೋಹನದಾಸ ನಾಯಕ ಇತರರಿದ್ದರು. ಎಸ್.ಕೆ. ಮೇಸ್ತಾ, ಪ್ರಸನ್ನ ಹೆಗಡೆ, ಆಶಾ ಕೊಂಡ್ಲಿ ಕಾರ್ಯಕ್ರಮ ನಿರ್ವಹಿಸಿದರು.

    ಪಕ್ಷಕ್ಕೆ ಸೇರ್ಪಡೆ: ಜಿಪಂ ಮಾಜಿ ಸದಸ್ಯ ಈಶ್ವರ ನಾಯ್ಕ ಮನಮನೆ, ತಾಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷ ಎಂ.ಐ. ನಾಯ್ಕ ಕೆಳಗಿನಸಸಿ, ರಾಘವೇಂದ್ರ ಶಾಸ್ತ್ರಿ ಬಿಳಗಿ, ವಿಜೇತ್ ಷಣ್ಮುಖ ಗೌಡರ್, ಎಂ.ಎನ್. ಹೆಗಡೆ, ತಾಲೂಕು ಮಹಿಳಾ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ರಾಜೇಶ್ವರಿ ಹೆಗಡೆ, ತಾಪಂ ಮಾಜಿ ಸದಸ್ಯೆ ರಾಜೇಶ್ವರಿ ಹೆಗಡೆ, ತಾಪಂ ಉಪಾಧ್ಯಕ್ಷೆ ಮಂಜುಳಾ ಚನ್ನಯ್ಯ, ರಮಾನಂದ ಹೆಗಡೆ ಸೇರಿ 150ಕ್ಕೂ ಹೆಚ್ಚು ಜನರು ಬಿಜೆಪಿಗೆ ಸೇರ್ಪಡೆಗೊಂಡರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts