More

    ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ದೀಪಾ ಚೋಳನ್ ಸೂಚನೆ; ಅರ್ಹರಿಗೆ ಗ್ಯಾರಂಟಿ ಯೋಜನೆ ತಲುಪಿಸಲು ಶ್ರಮಿಸಿ

    ಧಾರವಾಡ: ಜಿಲ್ಲೆಯಲ್ಲಿ ಕೈಗೊಂಡಿರುವ ಕಾಮಗಾರಿಗಳಿಗೆ ವೇಗ ನೀಡಿ, ಮಾರ್ಚ್ ಅಂತ್ಯಕ್ಕೆ ಪೂರ್ಣಗೊಳಿಸಲು ಕ್ರಮ ವಹಿಸಬೇಕು. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗೆ ತಲುಪಿಸಲು ಶ್ರಮಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ದೀಪಾ ಚೋಳನ್ ಹೇಳಿದರು.
    ನಗರದ ಜಿಲ್ಲಾಽಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಜರುಗಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
    ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸರ್ಕಾರ ಎಲ್ಲ ಇಲಾಖೆಗಳಿಗೆ ನಿರ್ದೇಶನ ನೀಡಿದೆ. ಆಯಾ ಇಲಾಖೆ ಅಽಕಾರಿಗಳು ಮುತುವರ್ಜಿ ವಹಿಸಿ ಸಕಾಲದಲ್ಲಿ ಪೂರ್ಣಗೊಳಿಸಬೇಕು. ಗ್ಯಾರಂಟಿ ಯೋಜನೆಗಳಾದ ಗೃಹಜ್ಯೋತಿ, ಗೃಹಲಕ್ಷಿ÷್ಮÃ, ಅನ್ನಭಾಗ್ಯ, ಶಕ್ತಿ ಮತ್ತು ಯುವನಿಽ ಅನುಷ್ಠಾನದಲ್ಲಿ ಆಸಕ್ತಿಯಿಂದ ಕಾರ್ಯನಿರ್ವಹಿಸಬೇಕು ಎಂದರು.
    ಸರ್ಕಾರ ಜಿಲ್ಲೆಯ ಎಲ್ಲ ತಾಲೂಕುಗಳನ್ನು ತೀವ್ರ ಬರಪೀಡಿತ ಎಂದು ಘೋಷಿಸಿದೆ. ೨೦೨೩ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಅಂದಾಜು ೧.೮೯ ಲಕ್ಷ ಹೆಕ್ಟೇರ್ ಕೃಷಿ ಬೆಳೆ ಹಾಗೂ ೦.೨೨ ಲಕ್ಷ ಹೆಕ್ಟೇರ್ ತೊಟಗಾರಿಕೆ ಬೆಳೆ ಸೇರಿ ಅಂದಾಜು ೨.೧೧ ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದೆ. ಜಿಲ್ಲಾಡಳಿತದಿಂದ ಎಸ್‌ಡಿಆರ್‌ಎಫ್ ಮತ್ತು ಎನ್‌ಡಿಆರ್‌ಎಫ್ ಮಾರ್ಗಸೂಚಿಯಂತೆ ಅಗತ್ಯ ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
    ಜ. ೨೨ರಿಂದ ಫೆ. ೧ರವರೆಗೆ ಎಂಆರ್‌ಬಿಸಿ ಕಾಲುವೆ ಮೂಲಕ ಕುಡಿಯುವ ನೀರಿನ ಕೆರೆಗಳನ್ನು ತುಂಬಿಸಿಕೊಳ್ಳಲು ನವಿಲುತಿರ್ಥ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಪ್ರಸ್ತುತ ಕುಡಿಯುವ ನೀರಿನ ಸಮಸ್ಯೆ ಇಲ್ಲ. ಅಗತ್ಯ ಬಿದ್ದರೆ ತಕ್ಷಣ ಕುಡಿಯುವ ನೀರು ಸರಬರಾಜು ಮಾಡಲು ತಾಲೂಕುವಾರು ಟೆಂಡರ್ ಪ್ರಕ್ರಿಯೆ ಮಾಡಬೇಕು ಎಂದರು.
    ರಾಜ್ಯ ಸರ್ಕಾರವು ನ. ೩ರಂದು ಜಿಲ್ಲೆಗೆ ಬರ ಪರಿಹಾರಕ್ಕಾಗಿ ೧೨ ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಜಿಲ್ಲೆಯ ಪ್ರತಿ ತಾಲೂಕಿಗೆ ೫೦ ಲಕ್ಷ ರೂ. ಬಿಡುಗಡೆ ಮಾಡಿದೆ. ಜಿಲ್ಲಾಽಕಾರಿ ವಿಪತ್ತು ನಿರ್ವಹಣಾ ಪಿಡಿ ಖಾತೆಯಲ್ಲಿ ೩.೨೮ ಕೋಟಿ ರೂ. ಅನುದಾನ ಮತ್ತು ತಹಸೀಲ್ದಾರರ ಖಾತೆಯಲ್ಲಿ ೧.೯೯ ಕೋಟಿ ರೂ. ಅನುದಾನ ಇದೆ. ಅಗತ್ಯಕ್ಕೆ ತಕ್ಕಂತೆ ಸೂಕ್ತ ಕ್ರಮ ವಹಿಸಬೇಕು ಎಂದು ದೀಪಾ ಚೋಳನ್ ನಿರ್ದೇಶಿಸಿದರು.
    ಪ್ರಭಾರ ಜಿಲ್ಲಾಽಕಾರಿ ಸ್ವರೂಪ ಟಿ.ಕೆ., ಅಪರ ಜಿಲ್ಲಾಽಕಾರಿ ಗೀತಾ ಸಿ.ಡಿ., ಬಿಆರ್‌ಟಿಎಸ್ ವ್ಯವಸ್ಥಾಪಕ ನಿರ್ದೇಶಕ ಶಿವಾನಂದ ಭಜಂತ್ರಿ ಮತ್ತು ಕೆಯುಐಡಿಎಫ್‌ಸಿಯ ಹುಬ್ಬಳ್ಳಿ ಪ್ರಾದೇಶಿಕ ಕಚೇರಿಯ ಕಾರ್ಯನಿರ್ವಾಹಕ ಅಽಕಾರಿ ಮೇಜರ್ ಸಿದ್ದಲಿಂಗಯ್ಯ ಹಿರೇಮಠ ವೇದಿಕೆಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts